ಕೂಡಿಗೆ, ಮಾ. ೮: ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕುಶಾಲನಗರ ತಾಲೂಕು ವ್ಯಾಪ್ತಿಯ ೭ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಸರಕಾರಿ ಪ್ರಾಥಮಿಕ, ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ವೆಟರ್‌ಗಳನ್ನು ವಿತರಣೆ ಮಾಡಿದರು.

ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ೩೦ ಸಾವಿರಕ್ಕೂ ಹೆಚ್ಚು ಸ್ವೆಟರ್‌ಗಳನ್ನು ವಿತರಣೆ ಮಾಡಲು ಗುರಿಹೊಂದಿದ್ದು, ಮಡಿಕೇರಿ, ಮತ್ತು ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ವಿತರಣೆ ಮಾಡಲಾಗಿದೆ. ವೀರಾಜ ಪೇಟೆ ತಾಲೂಕಿನಲ್ಲಿಯೂ ವಿತರಣೆ ಮಾಡಲಾಗುವುದು. ಸರಕಾರಿ ಶಾಲಾ ವಿದ್ಯಾರ್ಥಿಗಳು ಹೆಚ್ಚು ಬಡತನ ರೇಖೆಯಲ್ಲಿರುವ ವಿದ್ಯಾರ್ಥಿಗಳೇ ಆಗಿರುತ್ತಾರೆ ಅವರುಗಳ ಆರೋಗ್ಯದ ಹಿತದೃಷ್ಟಿಯಿಂದ ಸಣ್ಣ ಪ್ರಮಾಣದ ಸೇವೆಯನ್ನು ಮಾಡಲಾಗುತ್ತಿದೆ ಅದರಂತೆಯೇ ಸರಕಾರಿ ಶಾಲಾ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿ, ವಿದ್ಯಾವಂತರಾಗಿ ತಮ್ಮ ಬದುಕನ್ನು ಹಸನು ಗೊಳಿಸಿಕೊಳ್ಳುವ ಮೂಲಕ. ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಮುಂದೆ ಬರಬೇಕು, ಅಲ್ಲದೆ ಉದ್ಯೋಗ ಮೂಲಕ ಗಳಿಸಿದ ಸ್ವಲ್ಪ ಹಣವನ್ನು ಸಮಾಜದ ಒಳಿತಿಗೆ ನೀಡುವಂತಾಗಬೇಕು ಎಂದು ಕಿವಿಮಾತು ಹೇಳಿದರು.

ಶಿರಂಗಾಲ, ತೊರೆನೂರು, ಹೆಬ್ಬಾಲೆ ಕೂಡುಮಂಗಳೂರು, ಕೂಡಿಗೆ, ಮುಳ್ಳುಸೋಗೆ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವಿರಾರು ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಿದರು. ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಮಾಜಿ ಅಧ್ಯಕ್ಷರಾದ ಕೆ.ಕೆ. ಭೋಗಪ್ಪ, ಇಂದಿರಾ ರಮೇಶ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಪ್ರಕಾಶ್, ಉಪಾಧ್ಯಕ್ಷೆ ರೂಪ ಮಹೇಶ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾ ಕುಮಾರಿ, ಕೂಡಿಗೆ ಸದ್ಗುರು ಅಪ್ಪಯ್ಯ ಪ್ರೌಢಶಾಲಾ ವ್ಯವಸ್ಥಾಪಕ ಬೋಸ್ ಮಂದಣ್ಣ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ, ಪೋಷಕರು ಪರಿಷತ್ತಿನ ಮಾಜಿ ಅಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಕೂಡು ಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ, ಪ್ರವೀಣ್, ಕೂಡಿಗೆ ಶಕ್ತಿ ಕೇಂದ್ರದ ಅಧ್ಯಕ್ಷ ಗಿರೀಶ್, ಸೋಮವಾರಪೇಟೆ ಬಿಜೆಪಿ ಮಂಡಲದ ಪ್ರಮುಖರಾದ ಸೋಮೇಶ್, ಶರತ್, ಸೀಗೆಹೊಸೂರು ಧನಂಜಯ, ತೊರೆನೂರು ಗ್ರಾಮ ಪಂಚಾಯತಿ ಸದಸ್ಯರಾದ ದೇವರಾಜ್, ಶಿವಕುಮಾರ್, ಬೇಬಿಯಣ್ಣ, ಬಸವತ್ತೂರು ರವಿ, ಕೂಡು ಮಂಗಳೂರು ಕೃಷ್ಣ, ರಾಘವೇಂದ್ರ, ಟೈಲರ್ ಜಯಂತ್, ಸುಬ್ಬಯ್ಯ, ಪ್ರಸನ್ನ ಸೇರಿದಂತೆ ೭ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳು, ವಿವಿಧ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರರು, ವಿವಿಧ ಭಾಗದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.