ಬೆಂಗಳೂರು, ಮಾ. ೭: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ೨೦೨೫-೨೬ನೇ ಸಾಲಿನ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ ೫೧ ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ.

ಇಂದು ವಿಧಾನಸಭೆಯಲ್ಲಿ ೪,೦೯,೫೪೯ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇದರಲ್ಲಿ ೧೯,೨೬೨ ಕೋಟಿ ರೂ. ರಾಜಸ್ವ ಕೊರತೆಯನ್ನು ಉಲ್ಲೇಖಿಸಿದ್ದಾರೆ.

೨೦೨೫-೨೬ನೇ ಸಾಲಿನಲ್ಲಿ ಅಂದಾಜು ೧,೧೬,೦೦೦ ಕೋಟಿ ರೂ. ಸಾಲದ ಮೊರೆ ಹೋಗಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ೨೦೨೪-೨೫ ಸಾಲಿನಲ್ಲಿ ೧,೦೫,೨೪೬ ಕೋಟಿ ರೂ. ಸಾಲದ ಮೊರೆ ಹೋಗಲಾಗಿತ್ತು. ಆ ಮೂಲಕ ಈ ಬಾರಿ ೧೦,೭೫೪ ಕೋಟಿ ರೂ. ಹೆಚ್ಚುವರಿ ಸಾಲದ ಮೊರೆ ಹೋಗಲಾಗಿದೆ.

ಒಟ್ಟು ಬಜೆಟ್ ಗಾತ್ರ ೪,೦೯,೫೪೯ ಕೋಟಿ ರೂಪಾಯಿಗಳಾಗಿದ್ದು ಒಟ್ಟು ಆದಾಯ ೪,೦೮,೬೪೭ ಕೋಟಿ ರೂ ಆಗಿದ್ದು ಇದರಲ್ಲಿ ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ,ಬಂಡವಾಳ ಸ್ವೀಕೃತಿ ೧,೧೬,೧೭೦ ಕೋಟಿ ರೂ ಆಗಿದ್ದು ಒಟ್ಟು ವ್ಯಯ ೪,೦೯,೫೪೯ ಕೋಟಿ ರೂಪಾಯಿಗಳಾಗಿವೆ.

೧೯೯೪ ರಲ್ಲಿ ಜನತಾ ದಳದ ಆಡಳಿತದಲ್ಲಿ ಡಿಸಿಎಂ ಆಗಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ ೧೬ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇದು ಅವರ ಮೂರನೇ ಬಜೆಟ್ ಮತ್ತು ಸತತ ಎರಡನೇ ಬಜೆಟ್ ಆಗಿದೆ.

೫೦೦ ಹೊಸ ಕರ್ನಾಟಕ ಪಬ್ಲಿಕ್ ಶಾಲೆ

* ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ ೨,೫೦೦ ಕೋಟಿ ರೂ. ವೆಚ್ಚದಲ್ಲಿ ೫೦೦ ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.

* ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ ೫೩ ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ೧,೫೦೦ ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ.

* ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ೨,೦೦೦ ರೂ. ಹೆಚ್ಚಿಸಲಾಗುವುದು.

* ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ ೧,೦೦೦ ರೂ. ಹೆಚ್ಚಿಸಲಾಗುವುದು.

* ರಾಜ್ಯದ ಅರ್ಹ ೧೦೦ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ ೫೦ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.

* ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು ಂI ಆಧಾರಿತ ‘ಕಲಿಕಾದೀಪ' ಕಾರ್ಯಕ್ರಮವನ್ನು ೨,೦೦೦ ಶಾಲೆಗಳಿಗೆ ವಿಸ್ತರಿಸುವುದು.

* ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ ೪,೦೦೦ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.

* ‘ಗೃಹ ಆರೋಗ್ಯ' ಯೋಜನೆಯಡಿ ೨೦೨೪-೨೫ ನೇ ಸಾಲಿನಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ೧೦೦ ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು.

* ರಾಜ್ಯದ ೨೨ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು.

ಜಾನುವಾರುಗಳ ಆಕಸ್ಮಿಕ ಸಾವು : ‘ಅನುಗ್ರಹ’ ಯೋಜನೆಯಡಿ ಪರಿಹಾರ

* ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ‘ಅನುಗ್ರಹ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ೧೦,೦೦೦ ರೂ. ಗಳಿಂದ ೧೫,೦೦೦ ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು ೫,೦೦೦ ರೂ. ಗಳಿಂದ ೭,೫೦೦ ರೂ. ಗಳಿಗೆ ಹಾಗೂ ೩-೬ ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು ೩,೫೦೦ ರೂ.ಗಳಿಂದ ೫,೦೦೦ ರೂ.ಗಳಿಗೆ ಹೆಚ್ಚಿಸಲಾಗುವುದು.

* ೨೦೨೫-೨೬ ಸಾಲಿನಲ್ಲಿ ೫೦ ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.

* ೨೦೨೫-೨೬ನೇ ಸಾಲಿನಲ್ಲಿ ೧೦೦ ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್ ಸಹಯೋಗದೊಂದಿಗೆ ನಿರ್ಮಿಸಲಾಗುವುದು.

* ಅಮೃತ್ ಮಹಲ್ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್ ಮಹಲ್ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು. ಅರಣ್ಯ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು.

* ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.

* ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಿಸುದಾರರಿಗೆ ಒಂದು ಲಕ್ಷ ರೂ. ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಈ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.

* ಏಏಖಆಃ ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು ೬೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

ಕೃಷಿ ವಲಯಕ್ಕೆ ದೊರೆತಿದ್ದೇನು?

* ೨೦೨೫-೨೬ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ ೫೦ ಸಾವಿರ ರೈತರಿಗೆ ಸಹಾಯಧನ ಒದಗಿಸಲು ೪೨೮ ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.

* ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು ೧.೮೧ ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ೪೪೦ ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.

* ರಾಜ್ಯದಲ್ಲಿ ೬,೦೦೦ ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ ೧೪ ಸಾಮಾನ್ಯ ಇನ್‌ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ೫,೦೦೦ ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.

* ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ ೧೨,೦೦೦ ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.

* ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು.

* ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ ೫೮ ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊAದಿಗೆ ಬಲವರ್ಧನೆಗೊಳಿಸಲಾಗುವುದು.

* ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಈವರೆಗೆ ಒಟ್ಟಾರೆ ೧೨.೯೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ೧೧ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.ಕೃಷಿ ವಲಯಕ್ಕೆ ದೊರೆತಿದ್ದೇನು?

* ೨೦೨೫-೨೬ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ ೫೦ ಸಾವಿರ ರೈತರಿಗೆ ಸಹಾಯಧನ ಒದಗಿಸಲು ೪೨೮ ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.

* ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು ೧.೮೧ ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ೪೪೦ ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.

* ರಾಜ್ಯದಲ್ಲಿ ೬,೦೦೦ ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ ೧೪ ಸಾಮಾನ್ಯ ಇನ್‌ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ೫,೦೦೦ ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.

* ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ ೧೨,೦೦೦ ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.

* ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು.

* ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ ೫೮ ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊAದಿಗೆ ಬಲವರ್ಧನೆಗೊಳಿಸಲಾಗುವುದು.

* ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಈವರೆಗೆ ಒಟ್ಟಾರೆ ೧೨.೯೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ೧೧ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.

ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-೨ ಜಾರಿ

* ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-೨ ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ೯೫ ಕೋಟಿ ರೂ. ಅನುದಾನ ಒದಗಿಸಿದೆ.

* ತೋಟಗಾರಿಕೆ ಇಲಾಖೆಯ ಅಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ ಹೂ-ಕೃಷಿ, ಅಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ರೂಪಿಸಲಾಗುವುದು.

* ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು ೫೨,೦೦೦ ಫಲಾನುಭವಿಗಳಿಗೆ ೪೨೬ ಕೋಟಿ ರೂ. ಸಹಾಯ ಧನವನ್ನು ಒದಗಿಸಲಾಗುವುದು.

ಕಾರ್ಮಿಕರು ಮೃತಪಟ್ಟಲ್ಲಿ ನೀಡುವ ಪರಿಹಾರ ಮೊತ್ತ ಹೆಚ್ಚಳ

* ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, ಇx-gಡಿಚಿಣiಚಿ ಮೊತ್ತವನ್ನು ೭೫,೦೦೦ ರೂ.ನಿಂದ ೧.೫ ಲಕ್ಷ ರೂ.ಗೆ ಮತ್ತು ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಅವಲಂಬಿತರಿಗೆ ಪರಿಹಾರದ ಮೊತ್ತವನ್ನು ೫ ಲಕ್ಷ ರೂ.ನಿಂದ ೮ ಲಕ್ಷ ರೂ.ಗೆ ಹೆಚ್ಚಿಸಲಾಗುವುದು.

* ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಮಂಡಳಿಯ ಫಲಾನುಭವಿಗಳು ೫ ಲಕ್ಷ ರೂ. ಚಿಕಿತ್ಸೆ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಂಡಳಿಯಿAದ ಹೆಚ್ಚುವರಿಯಾಗಿ ಹೃದ್ರೋಗ ಮತ್ತು ಕ್ಯಾನ್ಸರ್ ಖಾಯಿಲೆಗಳಿಗೆ ೫ ಲಕ್ಷ ರೂ.ವರೆಗೆ ಮತ್ತು ಇತರೆ ಖಾಯಿಲೆಗಳಿಗೆ ೨ ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲಾಗುವುದು.

ಗುತ್ತಿಗೆದಾರರಿಗೆ ಮೀಸಲಾತಿ - ಎಸ್.ಸಿ., ಎಸ್.ಟಿ. ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ

* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಎರಡು ಕೋಟಿ ರೂ. ಮೊತ್ತದವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ ಮತ್ತು ೨ಬಿ ಗುತ್ತಿಗೆದಾರರಿಗೆ ಮೀಸಲಾತಿ ಒದಗಿಸಲಾಗುವುದು.

* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಸರ್ಕಾರದ ವಿವಿಧ ಇಲಾಖೆ, ನಿಗಮ ಹಾಗೂ ಸಂಸ್ಥೆಗಳಲ್ಲಿ ಖರೀದಿಸುವ ಸರಕು ಮತ್ತು ಸೇವೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ ಮತ್ತು ೨ಬಿ ಸರಬರಾಜುದಾರರಿಗೆ ಒಂದು ಕೋಟಿ ರೂ. ವರೆಗೆ ಮೀಸಲಾತಿಯನ್ನು ನೀಡಲಾಗುವುದು.

* ರಾಜ್ಯದಲ್ಲಿನ ಪರಿಶಿಷ್ಟ ೨೩೩೩ ಕಾಲೋನಿಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಪ್ರಗತಿ ಕಾಲೋನಿ ಯೋಜನೆಯಡಿ ೨೦೨೪-೨೫ ನೇ ಸಾಲಿನಲ್ಲಿ ೫೫೯ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಂಜೂರಾತಿ ನೀಡಲಾಗಿರುತ್ತದೆ.

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಒಂದರAತೆ ಒಟ್ಟು ೩೧ ವಸತಿ ಶಾಲೆಗಳನ್ನು ಪಿ.ಯು ಕಾಲೇಜನ್ನಾಗಿ ಉನ್ನತೀಕರಿಸಲಾಗುವುದು.

* ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ೨೬ ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

* ಪರಿಶಿಷ್ಟ ಜಾತಿಯ ೪೦, ಪರಿಶಿಷ್ಟ ಪಂಗಡದ ಏಳು ಮತ್ತು ಹಿಂದುಳಿದ ವರ್ಗಗಳ ೧೪ ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು ೬೧ ಕ್ರೆöÊಸ್ ವಸತಿ ಶಾಲೆಗಳಿಗೆ ೧,೨೯೨ ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಲಾಗುವುದು.

ಅಲ್ಪಸಂಖ್ಯಾತರಿಗೆ ವಿವಿಧ ಸೌಲಭ್ಯ

* ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ೧೦೦ ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ.

* ೨೫೦ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿAದ ಪಿ.ಯು ವರೆಗೂ ತರಗತಿಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಒಟ್ಟಾರೆ ೫೦೦ ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗುವುದು. ಪ್ರಸಕ್ತ ವರ್ಷದಲ್ಲಿ ೧೦೦ ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.

* ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ ಆಯ್ದ ೧೦೦ ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಒಟ್ಟಾರೆ ೪೦೦ ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ ೧೦೦ ಕೋಟಿ ರೂ. ಒದಗಿಸಲಾಗಿದೆ.

* ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ದಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ ೧೫೦ ಕೋಟಿ ರೂ. ಒದಗಿಸಲಾಗಿದೆ.

* ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಾಗುವುದು.

* ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ ೨೫೦ ಕೋಟಿ ರೂ. ಒದಗಿಸಲಾಗುವುದು.

* ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್‌ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ೬,೦೦೦ ರೂ. ಗಳಿಗೆ ಹೆಚ್ಚಿಸಲಾಗುವುದು. ಸಿಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್‌ಗಳಿಗೆ ನೀಡುವ ಮಾಸಿಕ ಗೌರವಧನವನ್ನು ೫,೦೦೦ ಗೆ ಹೆಚ್ಚಿಸಲಾಗುವುದು.

ಅಲ್ಪಸಂಖ್ಯಾತರಿಗೆ ವಿವಿಧ ಸೌಲಭ್ಯ

* ಜೈನ, ಬೌದ್ಧ