ಮಡಿಕೇರಿ, ಮಾ. ೮: ಕೇವಲ ೨೭ ವರ್ಷ ಬದುಕಿದ ಕೊಡಗಿನ ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅತ್ಯದ್ಭುತ ಮತ್ತು ಅನನ್ಯ ಎಂದು ಮೈಸೂರು ಯುವರಾಜ ಕಾಲೇಜಿನ ಉಪನ್ಯಾಸಕಿ ಎಚ್ ನಿವೇದಿತಾ ಬಣ್ಣಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪಿಎಂ ಶ್ರೀ ಮಾದರಿ ಪ್ರಾಥಮಿಕ ಶಾಲೆ ಮೂರ್ನಾಡು ಸಂಯುಕ್ತ ಆಶ್ರಯದಲ್ಲಿ ಜರುಗಿದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.
ತಮ್ಮ ಜೀವಿತಾವಧಿಯಲ್ಲಿ ಅವರು ೨೧ ಕಥೆಗಳನ್ನು ಬರೆದರು. ಅದರಲ್ಲಿ ಮಹಿಳಾ ಸ್ವಾತಂತ್ರ‍್ಯ, ವಿಧವಾ ವಿವಾಹ, ಬಾಲ್ಯ ವಿವಾಹ, ವಿಧವಾ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿದ್ದಾರೆ. ನೇರವಾಗಿ ಸ್ವಾತಂತ್ರ ಹೋರಾಟಕ್ಕೆ ಇಳಿಯದಿದ್ದರೂ ಗಾಂಧೀಜಿಯವರು ೧೯೩೪ರಲ್ಲಿ ಶೋಷಿತ ಸಮುದಾಯಗಳ ನಿಧಿ ಸಂಗ್ರಹಿಸಲು ಕರ್ನಾಟಕದಲ್ಲಿ ೧೨ ದಿನಗಳ ಪ್ರವಾಸವನ್ನು ಕೈಗೊಂಡು ನಿಧಿ ಸಂಗ್ರಹಿಸುತ್ತಿದ್ದಾಗ, ಗೌರಮ್ಮ ತಾವು ಧರಿಸಿದ್ದ ಅನೇಕ ಆಭರಣಗಳನ್ನು ಸ್ವಾತಂತ್ರ‍್ಯ ಹೋರಾಟದ ನಿಧಿಗಾಗಿ ಗಾಂಧಿಯವರಿಗೆ ನೀಡಿದ್ದರು. ಕಿವಿಯೋಲೆ, ಮೂಗುತಿ ಮತ್ತು ಮಂಗಳ ಸೂತ್ರವನ್ನು ಹೊರತುಪಡಿಸಿ ಹೆಚ್ಚಿನ ಆಭರಣಗಳನ್ನು ಗೌರಮ್ಮ ಗಾಂಧಿಯವರಿಗೆ ದಾನ ಮಾಡಿದ್ದರು ಎಂದು ಸ್ಮರಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ೨೧ ವರ್ಷಗಳಿಂದ ಕೊಡಗಿನ ಮಹಿಳಾ ಲೇಖಕಿಯರಿಗೆ ಗೌರವಿಸುವ ಕೊಡಗಿನ ಗೌರಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಈ ಬಾರಿ ಕೂಡಕಂಡಿ ಓಂ ಶ್ರೀ ದಯಾನಂದ ಅವರ ಪುಟಾಣಿ ರೈಲು ಅಂದದ ಕಥೆಗಳ ಲೋಕದಲ್ಲಿ ಒಂದು ಸುಂದರ ಪಯಣ ಮಕ್ಕಳ ಕಥೆ ಪುಸ್ತಕಕ್ಕೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಓಂ ಶ್ರೀ ದಯಾನಂದÀನವರು ಕೊಡಗಿನ ಗೌರಮ್ಮ ಪ್ರಶಸ್ತಿ ಮೊದಲ ಪುಸ್ತಕಕ್ಕೆ ಬಂದದ್ದು ಖುಷಿ ಕೊಟ್ಟಿದೆ. ಇಂದು ಇಂಟರ್ನೆಟ್ ಯುಗದಲ್ಲಿ ಮಕ್ಕಳಿಗೆ ನಾವು ಕಥೆಗಳನ್ನು ಹೇಳಿಕೊಡುತ್ತಿಲ್ಲ, ಮಕ್ಕಳಿಗೆ ಅದರ ಅವಶ್ಯಕತೆ ಇದೆ. ಹಿಂದಿನ ಕಾಲದಲ್ಲಿ ತಾವು ಧರಿಸಿದ್ದ ಅನೇಕ ಆಭರಣಗಳನ್ನು ಸ್ವಾತಂತ್ರ‍್ಯ ಹೋರಾಟದ ನಿಧಿಗಾಗಿ ಗಾಂಧಿಯವರಿಗೆ ನೀಡಿದ್ದರು. ಕಿವಿಯೋಲೆ, ಮೂಗುತಿ ಮತ್ತು ಮಂಗಳ ಸೂತ್ರವನ್ನು ಹೊರತುಪಡಿಸಿ ಹೆಚ್ಚಿನ ಆಭರಣಗಳನ್ನು ಗೌರಮ್ಮ ಗಾಂಧಿಯವರಿಗೆ ದಾನ ಮಾಡಿದ್ದರು ಎಂದು ಸ್ಮರಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಓಂ ಶ್ರೀ ದಯಾನಂದÀನವರು ಕೊಡಗಿನ ಗೌರಮ್ಮ ಪ್ರಶಸ್ತಿ ಮೊದಲ ಪುಸ್ತಕಕ್ಕೆ ಬಂದದ್ದು ಖುಷಿ ಕೊಟ್ಟಿದೆ. ಇಂದು ಇಂಟರ್ನೆಟ್ ಯುಗದಲ್ಲಿ ಮಕ್ಕಳಿಗೆ ನಾವು ಕಥೆಗಳನ್ನು ಹೇಳಿಕೊಡುತ್ತಿಲ್ಲ, ಮಕ್ಕಳಿಗೆ ಅದರ ಅವಶ್ಯಕತೆ ಇದೆ. ಹಿಂದಿನ ಕಾಲದಲ್ಲಿ ನೀಡಲು ಲೇಖಕರನ್ನು ಹುಡುಕಬೇಕಿತ್ತು, ಆದರೆ ಇಂದು ಪ್ರಶಸ್ತಿಗೆ ಆಹ್ವಾನ ಮಾಡಿದಾಗ ೧೬ ಲೇಖಕರು ತಮ್ಮ ಪುಸ್ತಕಗಳನ್ನು ಕಳುಹಿಸಿಕೊಟ್ಟಿದ್ದರು. ಅವನ್ನು ಜಿಲ್ಲೆಯ ಹಿರಿಯ ಮೂರು ಸಾಹಿತಿಗಳು ಸಂಪೂರ್ಣವಾಗಿ ಓದಿ ನೀಡಿದ ಅಭಿಪ್ರಾಯದಂತೆ ಪ್ರಶಸ್ತಿ ನೀಡಲಾಗಿದೆ. ಶತಮಾನ ಕಳೆದರೂ ಗೌರಮ್ಮನವರ ಕೃತಿಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಬಿ.ಎಸ್ ಲೋಕೇಶ್ ಸಾಗರ್ ಮಾತನಾಡುತ್ತಾ, ಕೊಡಗಿನ ಗೌರಮ್ಮ ಕೇವಲ ಲೇಖಕಿ ಮಾತ್ರವಾಗಿರಲಿಲ್ಲ. ಅಂದಿನ ದಿನಗಳ ಮೌಲ್ಯದ ಕುರಿತು ಹೋರಾಟ ಮಾಡಿದಂತಹ ವ್ಯಕ್ತಿಯಾಗಿರುತ್ತಾರೆ ಎಂದರು.
ವೇದಿಕೆಯಲ್ಲಿ ಪಿ.ಎಂ.ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಸಿ ವೆಂಕಪ್ಪ, ಮುಖ್ಯೋಪಾಧ್ಯಾಯಿನಿ ಬಿ.ಎನ್ ಪುಷ್ಪಾವತಿ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆÀ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಸಮಾಜ ಸೇವಕರಾದ ವಿ.ಎಂ. ಧನಂಜಯ, ಸಿ.ಎಸ್ ಸೂರಜ್ ತಮ್ಮಯ್ಯ ಮತ್ತು ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೂಡಕಂಡಿ ದಯಾನಂದ ಉಪಸ್ಥಿತರಿದ್ದರು.
ಸಭೆಯಲ್ಲಿ ಗೌರಮ್ಮ ದತ್ತಿ ಪ್ರಶಸ್ತಿ ವಿಜೇತರಾದ ಡಾ. ಕೋರನ ಸರಸ್ವತಿ, ಸಹನಾ ಕಾಂತಬೈಲು, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ ಅನಂತಶಯನ, ಸರ್ವೋದಯ ಸಮಿತಿಯ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯರು ಸಾಹಿತಿಗಳು ಆದ ಕಿಗ್ಗಾಲು ಗಿರೀಶ್, ಸದಸ್ಯರುಗಳಾದ ದಂಬೆಕೋಡಿ ಸುಶೀಲ, ಈರಮಂಡ ಸೋಮಣ್ಣ, ಎಂ.ಯು. ಮಹಮದ್, ಕೊಂಪುಳಿರ ಮಮತಾ, ಅಪ್ಪಚಂಡ ಸುಚಿತಾ ಡೈಜಿ, ಗ್ರೇಸಿ, ಮುಂಡAಡ ವಿಜು, ಮೀನಾಕ್ಷಿ ಕೇಶವ, ಪ್ರಿಯಾ, ಕಲ್ಪನಾ ಸಾಮ್ರಾಟ್, ತಿರಚಿಕ್ರ ಸುಮಿತ್ರಾ, ಭವಾನಿ, ಅಮ್ಮಟಂಡ ವಿಂಧ್ಯ, ರಾಜೇಶ್, ಗಂಗಮ್ಮ ಪಿ.ಎಂ.ಶ್ರೀ ಶಾಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪಿ.ಎಂ.ಶ್ರೀ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಮತ್ತು ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನಿರೂಪಿಸಿದರು. ಈರಮಂಡ ಹರಿಣಿ ವಿಜಯ್ ಸ್ವಾಗತಿಸಿದರು. ಕಡ್ಲೇರ ತುಳಸಿ ಮೋಹನ್ ಮತ್ತು ಮೂರ್ನಾಡು ಕ.ಸಾ.ಪ. ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ ಅತಿಥಿಗಳ ಪರಿಚಯ ಮಾಡಿದರು.