ಮಡಿಕೇರಿ, ಮಾ. ೮: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷದತ್ತ ಚಾಮರಾಜ ಒಡೆಯರ್ ಅವರು ಶುಕ್ರವಾರ ನಗರಕ್ಕೆ ಭೇಟಿ ನೀಡಿ, ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ ಯೋಜನೆಯ ಕುರಿತು ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಕಾರ್ಯಪಾಲಕ ಇಂಜಿನಿಯರ್ ಆರ್. ಭಾಸ್ಕರ್ ಜಿಲ್ಲೆಯಲ್ಲಿ ಒಟ್ಟು ೪೫೭ ಗ್ರಾಮೀಣ ಜನವಸತಿ ಕಾಮಗಾರಿಗಳಿದ್ದು, ಇದರಲ್ಲಿ ಒಟ್ಟು ೩೪೩ ಕಾಮಗಾರಿಗಳು ಪೂರ್ಣಗೊಂಡಿದೆ. ಹಾಗೆಯೇ ೧೧೨ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಭೆಯಲ್ಲಿ ವಿವರಿಸಿದರು.
ನಂತರ ಸಂಸದರಾದ ಯದುವೀರ್ ಕೃಷದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ಅಂಕಿ ಅಂಶಗಳ ಪ್ರಕಾರ ಪ್ರಗತಿ ಸಾಧಿಸಿದ್ದು, ಕೆಲವು ಜನವಸತಿಗಳಲ್ಲಿ ಟ್ಯಾಂಕ್, ಪೈಪ್‌ಲೈನ್ ಮೂಲಕ ನಲ್ಲಿ ಸಂಪರ್ಕ ಕಲ್ಪಿಸಿರುವುದಿಲ್ಲ ಎಂದು ದೂರುಗಳು ಬಂದಿವೆ ಎಂದು ಅಧಿಕಾರಿಗಳಿಗೆ ತಿಳಿಸಿ ಸ್ಪಷ್ಟನೆ ಪಡೆದರು.
ಕಾರ್ಯಪಾಲಕ ಇಂಜಿನಿಯರ್ ಭಾಸ್ಕರ್ ಮಾತನಾಡಿ, ಕೊಡಗಿನಲ್ಲಿ ಯಾವುದೇ ಬಹುಗ್ರಾಮ ಕುಡಿಯುವ ನೀರು ಯೋಜನೆ ಇರುವುದಿಲ್ಲ. ಬೇಸಿಗೆಯಲ್ಲಿ ಬೋರ್‌ವೆಲ್‌ಗಳು ಬತ್ತಿ ಹೋಗುತ್ತಿದ್ದು, ಶಾಶ್ವತವಾಗಿ ನದಿ ನೀರನ್ನು ಶುದ್ಧೀಕರಿಸಿ ಕೊಡಗು ಜಿಲ್ಲೆಯ ಹಲವಾರು ಗ್ರಾಮಗಳಿಗೆ ಶುದ್ಧ ನೀರನ್ನು ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.

x