ಪೊನ್ನಂಪೇಟೆ, ಮಾ. ೮: ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾ.ಪಂ. ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಕ್ಕೇರ ಸೂರ್ಯ ಅಯ್ಯಪ್ಪ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಕಾಟಿಮಾಡ ಶರೀನ್ ಮುತ್ತಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ, ತಾಲೂಕು ಮೀನುಗಾರಿಗೆ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಮಾಹಿತಿ ನೀಡಿದ್ದಾರೆ. ನಿಕಟಪೂರ್ವ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ಗ್ರಾ.ಪಂ. ಅಧ್ಯಕ್ಷ ಅಮ್ಮಣಿ ಬೆಂಡೆಕುತ್ತಿ, ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು, ರಾಜು, ಅಮ್ಮಯ್ಯ, ಸುಮತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಪ್ರಮುಖರಾದ ಕೊಟ್ಟಂಗಡ ಮಂಜುನಾಥ್, ಮಾಚಂಗಡ ವಿಕಾಸ್, ಪೊನ್ನಿಮಾಡ ಸಂತೋಷ್, ಅಳಮೇಂಗಡ ಸೋಮಯ್ಯ, ಚಕ್ಕೇರ ಬೋಪಣ್ಣ ಹಾಗೂ ಇತರರು ಇದ್ದರು.