ಮುಳ್ಳೂರು, ಮಾ. ೭: ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕಿ ರಿಜ್ವಾನ ಬಾನುಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡುವ ಸಾವಿತ್ರಿ ಬಾಯಿ ಪುಲೆ ರಾಜ್ಯ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಮಂಡ್ಯದ ವಿಶ್ವ ವಿದ್ಯಾನಿಲಯದಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಿಜ್ವಾನ ಬಾನುಗೆ ಪ್ರಶಸ್ತಿ ವಿತರಣೆ ಮಾಡಿದರು.