ಮಡಿಕೇರಿ, ಮಾ. ೮: ಕೃತಕ ಬುದ್ಧಿ ಮತ್ತೆ ಅಥವಾ (ಎಐ) ತಂತ್ರಜ್ಞಾನದ ಬಗ್ಗೆ ಸೂಕ್ತ ಅರಿವು ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಸಿಐಟಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ರಾಮಕೃಷ್ಣ ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಗೋಣಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ನಾವು ಕೃತಕ ಬುದ್ಧಿ ಮತ್ತೆ ಅಥವಾ (ಎಐ) ತಂತ್ರಜ್ಞಾನದ ಕಾಲಘಟ್ಟದಲ್ಲಿದ್ದು, ಈ ಆವಿಷ್ಕಾರಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಬಾಲ್ಯದಿಂದಲೇ ವಿಜ್ಞಾನದ ಅರಿವು ನಮ್ಮಲ್ಲಿ ಜಾಗೃತವಾಗಿರಬೇಕು. ಎಐ ತಂತ್ರಜ್ಞಾನವನ್ನು ನಕಾರಾತ್ಮಕ ಕಾರ್ಯಗಳಿಗೆ ಬಳಸಿಕೊಳ್ಳಬಾರದು. ಬದಲಿಗೆ ರಾಷ್ಟçದ ಮತ್ತು ಸಮಾಜದ ಹಿತಕ್ಕೆ ಪೂರಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಸಿಐಟಿ ಕಾಲೇಜಿನ ಮತ್ತೊಬ್ಬ ಸಹ ಪ್ರಾಧ್ಯಾಪಕರಾದ ಡಾ. ಕಿಶನ್ ಕರುಂಬಯ್ಯ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ರೋಬೊಟಿಕ್ ಶಸ್ತ್ರಚಿಕಿತ್ಸೆಯಂತಹ ಆವಿಷ್ಕಾರಗಳು ನಡೆಯುತ್ತಿವೆ. ಇದಲ್ಲದೆ ಚಾಲಕ ರಹಿತ ಕಾರುಗಳನ್ನೂ ಸಹ ನಾವು ಕಾಣುತ್ತಿದ್ದು, ಪ್ರತಿ ದಿನವೂ ಹಲವಾರು ನೂತನ ವಿದ್ಯಮಾನಗಳು ನಮ್ಮ ನಡುವೆ ನಡೆಯುತ್ತಿವೆ. ಈ ಬಗ್ಗೆ ಅರಿವು ಹೊಂದಿರಬೇಕು ಎಂದು ತಿಳಿಸಿದರು.

ರಾಷ್ಟಿçÃಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ ಸ್ಫರ್ಧೆಯನ್ನು ಏರ್ಪಡಿಸಲಾಗಿತ್ತು. ಗೋಣಿಕೊಪ್ಪ ಪ್ರೌಢ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಸೌಮ್ಯ ಪ್ರಥಮ, ಕೀರ್ತನಾ ದ್ವಿತೀಯ ಮತ್ತು ನಿಶಾಂತ್ ತೃತೀಯ ಬಹುಮಾನ ಪಡೆದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳಿಂದ ವಿಜ್ಞಾನದ ಪ್ರಯೋಗವನ್ನು ಮಾಡಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಲಾಯಿತು. ಬಳಿಕ ರಾಷ್ಟಿçÃಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕೊಡಗು ಜಿಲ್ಲಾ ಪಂಚಾಯಿತಿ ಎನ್.ಆರ್.ಡಿ.ಎಂ.ಎಸ್ ವಿಭಾಗದ ಪ್ರಾಜೆಕ್ಟ್ ಅಸೋಸಿಯೇಟ್ ಇಂಚರ, ಶಾಲಾ ಮುಖ್ಯೋಪಾಧ್ಯಾಯ ಮಹೇಶ್ ಹಾಜರಿದ್ದರು.