ಮಡಿಕೇರಿ ಮಾ.೯ : ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಹಿನ್ನೆಲೆ ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಕ್ಕೊತ್ತಾಯ ಮಂಡಿಸಿತು.

ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ವಿವಿಧ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟçಪತಿ, ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹಮಂತ್ರಿಗಳಿಗೆ ಸೇರಿ ಇತರ ಪ್ರಮುಖರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭ ಮಾತನಾಡಿದ ಎನ್.ಯು. ನಾಚಪ್ಪ ಅವರು, ಮಹಿಳೆಯರ ಸಾಂಸ್ಕöÈತಿಕ, ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಗುರುತಿಸಲು ಅಂತರರಾಷ್ಟಿçÃಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಲಿಂಗ ಪಕ್ಷಪಾತ, ತಾರತಮ್ಯವನ್ನು ಕೊನೆಗೊಳಿಸಲು ಮತ್ತು ಲಿಂಗ ಸಮಾನತೆಯನ್ನು ಸಾಧಿಸುವ ಪ್ರಯತ್ನಗಳನ್ನು ಪ್ರೇರೇಪಿಸಲು ಇದು ಸಹಕಾರಿಯಾಗಿದೆ ಎಂದರು. ದೇಶಾದ್ಯಂತ ಕೊಡವ ಮಹಿಳೆಯರಿಗೆ ಶೇ.೩೩ ಮೀಸಲಾತಿ ಆಂತರಿಕ ಕೋಟಾದಡಿ ನೀಡಬೇಕು. ಸ್ವಾಧೀನಪಡಿಸಿಕೊಂಡಿರುವ ಮತ್ತು ಅಡಮಾನ ಇಟ್ಟಿರುವ ಪೂರ್ವಜರ ಪರಂಪರೆಯ ಆಸ್ತಿಗಳನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಕೊಡವ ಮಹಿಳೆಯರು ಈ ಹಿಂದೆಯೂ ಕಷ್ಟ ಅನುಭವಿಸಿದರು ಮತ್ತು ಈಗಲೂ ಸಹ ಬಳಲುತ್ತಿದ್ದಾರೆ. ಆದ್ದರಿಂದ ಅವರಿಗೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಬೇಕು ಎಂದರು.

ದೇಶದ ಹೊಸ ಸಂಸತ್ತಿನಲ್ಲಿ ಕೊಡವ ಮಹಿಳೆಯರಿಗೆ ಸಾಕಷ್ಟು ಪ್ರಾತಿನಿಧ್ಯ ನೀಡಬೇಕು. ಸರ್ಕಾರವು ಯುದ್ಧೋಪಾದಿಯಲ್ಲಿ ಕೊಡವ ಮಹಿಳೆಯರಿಗೆ ಬಂದೂಕು ವಿನಾಯಿತಿ ಪ್ರಮಾಣಪತ್ರವನ್ನು ನೀಡಬೇಕು. ಶೇ.೮೦ರಷ್ಟು ಕೊಡವ ಬುಡಕಟ್ಟು ಜನಾಂಗದ ಮಂದಿ ಬಡತನದಲ್ಲಿದ್ದಾರೆ. ಆದ್ದರಿಂದ ಕೊಡವತಿ ವಧುವಿಗೆ "ಪತ್ತಾಕ್ ಭಾಗ್ಯ"ವನ್ನು ನೀಡಬೇಕು. "ಸೀಮಂತ ಭಾಗ್ಯ" ಕ್ಕೆ ಬದಲಾಗಿ ಬಡ ಕೊಡವತಿ ಗರ್ಭಿಣಿಯರಿಗೆ "ಕೂಪದಿ ಕೂಳ್ ಭಾಗ್ಯ" ಘೋಷಿಸಬೇಕು. ಕೊಡವ ವಿದ್ಯಾರ್ಥಿನಿಯರು ಹಾಗೂ ಕೊಡವ ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ವೇತನ ಸಹಿತ ರಜೆ ನೀಡುವ ಕಾನೂನನ್ನು ಸಂಸತ್ತಿನಲ್ಲಿ ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಈ ಸಂದರ್ಭ ಕಲಿಯಂಡ ಮೀನಾ ಪ್ರಕಾಶ್, ಬೊಟ್ಟಂಗಡ ಸವಿತಾ ಗಿರೀಶ್, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಪಟ್ಟಮಾಡ ಲಲಿತಾ ಗಣಪತಿ, ರೇಖಾ ನಾಚಪ್ಪ, ಅಪ್ಪಚ್ಚಿರ ರೀನಾ ರಮ್ಮಿ, ಅಜ್ಜಿನಿಕಂಡ ಇನಿತಾ ಮಾಚಯ್ಯ, ಅರೆಯಡ ಸವಿತಾ ಗಿರೀಶ್, ಮುದ್ದಿಯಡ ಲೀಲಾವತಿ, ಚೋಳಪಂಡ ಜ್ಯೋತಿ ನಾಣಯ್ಯ, ನಂದಿನೆರವAಡ ನಿಶಾ ಅಚ್ಚಯ್ಯ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಬಾಚಿರಣಿಯಂಡ ಚಿಪ್ಪಣ್ಣ, ಕಿರಿಯಮಾಡ ಶೆರಿನ್, ಅಪ್ಪಚ್ಚಿರ ರಮ್ಮಿ ನಾಣಯ್ಯ, ಬೇಪಡಿಯಂಡ ಬಿದ್ದಪ್ಪ, ಕಾಟುಮಣಿಯಂಡ ಉಮೇಶ್, ಬೇಪಡಿಯಂಡ ದಿನು, ಮಣವಟಿರ ಚಿಣ್ಣಪ್ಪ, ಪುಟ್ಟಿಚಂಡ ಡಾನ್ ದೇವಯ್ಯ, ಚೋಳಪಂಡ ನಾಣಯ್ಯ, ಬಾಚಿನಾಡಂಡ ಗಿರಿ, ಕೂಪದಿರ ಸಾಬು, ನಂದಿನೆರವAಡ ವಿಜು, ತೋಲಂಡ ಸೋಮಯ್ಯ, ಅಜ್ಜಿನಿಕಂಡ ಸನ್ನಿ ಮಾಚಯ್ಯ, ಪಟ್ರಪಂಡ ಸೋಮಣ್ಣ ಪಾಲ್ಗೊಂಡಿದ್ದರು.