ವೀರಾಜಪೇಟೆ: ಶಿಕ್ಷಣ ಇಲಾಖೆ ೨೦೨೪-೨೫ರ ವೀರಾಜಪೇಟೆ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. (ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತç) ಕಲಿಕಾ ಹಬ್ಬ ವೀರಾಜಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಜ ಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ. ಆನಂದ್ ವಹಿಸಿದ್ದರು. ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಸೀತಾ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಿ.ಎ. ಪ್ರವೀಣ, ಶಿಕ್ಷಕರ ಕಛೇರಿ ವ್ಯವಸ್ಥಾಪಕರಾದ ಪೊನ್ನಮ್ಮ, ಬಿ.ಆರ್.ಪಿ. ಗಳಾದ ರುಕ್ಮಿಣಿ, ಶೈಲ, ವಾಮನ, ವಿಶಾಲಾಕ್ಷಿ, ಸಿ.ಆರ್.ಪಿ. ವೆಂಕಟೇಶ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ. ಅನ್ನಮ್ಮ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಮಕ್ಕಳಿಗೆ ಗಟ್ಟಿ ಓದು, ಕೈಬರಹ, ಕಥೆ ಹೇಳುವುದು, ಕಥೆ ಕಟ್ಟುವುದು, ಸಂತೋಷ ದಾಯಕ ಗಣಿತ, ಜ್ಞಾಪಕ ಶಕ್ತಿ, ರಸಪ್ರಶ್ನೆ, ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆದವು. ವೀರಾಜಪೇಟೆ ನಗರದ ಸರಕಾರಿ ಪ್ರಾಥಮಿಕ ಶಾಲೆ, ಸರಕಾರಿ ಶಾಲೆ ಚಿಕ್ಕಪೇಟೆ, ಉರ್ದು ಶಾಲೆ, ಕೊಟ್ಟೋಳಿ ಶಾಲೆ, ಕೆದಮುಳ್ಳೂರು ಶಾಲೆ, ತೋಮರ ಶಾಲೆ, ಪಾಲಂಗಾಲ ಶಾಲೆಗಳ ಒಂದರಿAದ ಐದನೇ ತರಗತಿಯ ಮಕ್ಕಳು ಭಾಗವಹಿಸಿದ್ದರು.ಸೋಮವಾರಪೇಟೆ : ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಸಂಘದ ವತಿಯಿಂದ ರಾಷ್ಟಿçÃಯ ವಿಜ್ಞಾನ ದಿನಾಚರಣೆ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯಶಿಕ್ಷಕರಾದ ಎಂ.ಎA. ಯಶ್ವಂತ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಮತ್ತು ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ಪ್ರಶ್ನೆ ಮಾಡದೆ ಯಾವುದೇ ತರ್ಕವನ್ನು ಒಪ್ಪಬಾರದು. ಇಂದು ವಿಜ್ಞಾನದಿಂದ ಆಧುನಿಕ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದೆ. ಇದರಿಂದ ನಮ್ಮ ಜೀವನವಿಧಾನ ಕೂಡ ಸುಧಾರಣೆಗೊಂಡಿದೆ. ಸರಕಾರಿ ಶಾಲೆಗಳಲ್ಲಿ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯಗಳು ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದರು.

ರಾಷ್ಟಿçÃಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿಯನ್ನು ವಿಜ್ಞಾನ ಶಿಕ್ಷಕರಾದ ಎಸ್.ಎಸ್. ರಂಜಿನಿ ಭೋದಿಸಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನೀಡಲಾದ ವಿಜ್ಞಾನ ಕಿಟ್‌ನ ಕಲಿಕಾ ಸಾಮಗ್ರಿಗಳನ್ನು ಬಳಸಿಕೊಂಡು ವಿಜ್ಞಾನ ವಸ್ತು ಪ್ರದರ್ಶನ ಮತ್ತು ಮಾದರಿ ತಯಾರಿಕೆ ಹಾಗೂ ಪ್ರಾತ್ಯಕ್ಷಿಕೆ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು.

ಲೆಮನ್ ಬ್ಯಾಟರಿ,ಡೆನ್‌ಸಿಟಿ ಟವರ್, ಬ್ರೆöÊನ್ ಕ್ಯಾಪ್, ಬೆಳಕಿನ ವಕ್ರೀಭವನ, ಹ್ಯಾಂಡ್ ಪಂಪ್ ಸೇರಿದಂತೆ ಹಲವು ಮಾದರಿಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ವಿಜ್ಞಾನ ಗೀತೆಯನ್ನು ಹಾಡಿದರು.ಒಟ್ಟು ೧೬ ತಂಡಗಳು ಪಾಲ್ಗೊಂಡಿದ್ದವು. ವಿಜೇತರಿಗೆ ವಿಜ್ಞಾನ ಸಂಘದ ವತಿಯಿಂದ ಬಹುಮಾನ ನೀಡಲಾಯಿತು.*ಗೋಣಿಕೊಪ್ಪ : ಐವತ್ತು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ಗೋಣಿಕೊಪ್ಪದ ಸೈಕ್ಲೋನ್ ನೃತ್ಯ ಶಾಲೆಯ ವಿದ್ಯಾರ್ಥಿಗಳು ನೇಪಾಳದಲ್ಲಿ ನಡೆಯುವ ಅಂತರಾಷ್ಟಿçÃಯ ಮಟ್ಟದ ನೃತ್ಯ ಸ್ವರ್ದೆಗೆ ಆಯ್ಕೆಯಾಗಿದ್ದಾರೆ.

ಗೋವಾ ರಾಜ್ಯದ ಮಾರ್ಗೋ ರವೀಂದ್ರ ಭವನ ಸಭಾಂಗಣದಲ್ಲಿ ಎರಡು ದಿನಗಳು ಸ್ವಧೆೆð ನಡೆಯಿತು. ಹತ್ತನೇ ವರ್ಷದ ರಾಷ್ಟಿçÃಯ ಸ್ಪೋರ್ಟ್ಸ್ ಡಾನ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ೫೦ ವಿದ್ಯಾರ್ಥಿಗಳು ೧೨ ವರ್ಷ, ೧೫ ವರ್ಷ, ೧೭ ವರ್ಷದ ವಿಭಾಗದವರು ಭಾಗವಹಿಸಿದರು.

ಗೋವಾದ ಸ್ಪೋರ್ಟ್ಸ್ ಅಸೋಸಿಯೇಷನ್, ಸ್ಪೋರ್ಟ್ ಡಾನ್ಸ್ ಫೆಡರೇಶನ್ ಆಫ್ ಇಂಡಿಯಾ, ಏಷ್ಯನ್ ಸ್ಪೋರ್ಟ್ ಡಾನ್ಸ್ ಕೌನ್ಸಿಲ್, ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಫೆಡರೇಶನ್, ಅಂತರರಾಷ್ಟಿçÃಯ ನೃತ್ಯ ಮಂಡಳಿ, ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ, ಇಂರ್ಟನ್ಯಾಷನಲ್ ಕೌನ್ಸಿಲ್ ಆಫ್ ಸ್ಪೋರ್ಟ್ ಸೈನ್ಸ್ ಮತ್ತು ಫಿಸಿಕಲ್ ಎಜುಕೇಶನ್ ಸಹಯೋಗದಲ್ಲಿ ನಡೆಯಿತು.ಕಣಿವೆ: ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಪಾತ್ರವಾಗಿದೆ ಕೊಡಗು ವಿಶ್ವವಿದ್ಯಾಲಯ.

ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವೀರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು ೯೫ ವಿದ್ಯಾರ್ಥಿಗಳು ಹಾಜರಾಗಿದ್ದರು. ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾ ವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ಮತ್ತು ಹೊರಗಿನ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬAಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUಒS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUಅಒS ಅಥವಾ ಕೊಡಗು ವಿಶ್ವ ವಿದ್ಯಾಲಯದ ವೆಬ್‌ಸೈಟ್ ಏUಏ.ಏಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ. ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್‌ಲೈನ್ ತಂತ್ರಾAಶದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ. ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ. ರವಿಶಂಕರ್ ಎಂ.ಎನ್. ಮತ್ತು UUಅಒS ಸಿಬ್ಬಂದಿ ಉಪಸ್ಥಿತರಿದ್ದರು.

ಸೋಮವಾರಪೇಟೆ : ಅಗಸ್ತö್ಯ ಫೌಂಡೇಶನ್ ಮತ್ತು ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಚನ್ನಬಸಪ್ಪ ಸಭಾಂಗಣದಲ್ಲಿ ರಾಷ್ಟಿçÃಯ ವಿಜ್ಞಾನ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿ ತಯಾರಿಕೆ ಮತ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಮಾದರಿ ಪ್ರಾಥಮಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಜ್ಞಾನ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ವಿಜ್ಞಾನಕ್ಕೆ ಸಂಬAಧಿಸಿದ ವಿವಿಧ ಮಾದರಿಗಳ ಪ್ರದರ್ಶನ ಮತ್ತು ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳು ಜಲಸಂರಕ್ಷಣೆ, ಹನಿ ನೀರಾವರಿ, ಸೋಲಾರ್ ಸಿಸ್ಟಮ್, ಖಗೋಳ ವಿಜ್ಞಾನ ಸೇರಿದಂತೆ ವಿವಿಧ ಮಾದರಿಗಳನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.

ಈ ಸಂದರ್ಭ ಸರ್ಕಾರಿ ಮಾದರಿ ಪ್ರಾಥಮಿಕ ಮಡಿಕೇರಿ : ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಮಾಯಮುಡಿ ಗ್ರಾ.ಪಂ. ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಅಭಿಪ್ರಾಯಪಟ್ಟಿದ್ದಾರೆ.

ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಾಯಮುಡಿ ಕ್ಲಸ್ಟರ್ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಕಲಿಕಾ ಹಬ್ಬವು ಒಂದು. ಇದು ವಿದ್ಯಾರ್ಥಿಗಳ ಕಲಿಕೆಯನ್ನು ಉತ್ತಮಪಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ಕಲಿಕಾ ಹಬ್ಬ, ಗಣಿತ ಆಂದೋಲನ, ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಹಾಯಕವಾಗಿದೆ. ಬಿಸಿಯೂಟದೊಂದಿಗೆ ಆರು ದಿನವೂ ಮೊಟ್ಟೆ, ಹಾಲು, ರಾಗಿ, ಸಿರಿಧಾನ್ಯವನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ವಿದ್ಯಾರ್ಥಿ ವೇತನ, ಪಠ್ಯಪುಸ್ತಕ, ಸಮವಸ್ತç, ಶೂ ಮತ್ತು ಸಾಕ್ಸ್ ಸೌಲಭ್ಯವನ್ನು ಕೂಡ ಕಲ್ಪಿಸುತ್ತಿದೆ. ಇದೆಲ್ಲವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಗುರಿ ಸಾಧಿಸಬೇಕೆಂದು ಎ.ಎಸ್. ಟಾಟು ಮೊಣ್ಣಪ್ಪ ಕರೆ ನೀಡಿದರು.

ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಲಸ್ಟರ್‌ನ ಸಿಆರ್‌ಪಿ ಅರುಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಯಮುಡಿ ಗ್ರಾ.ಪಂ. ಸದಸ್ಯರಾದ ಸುಮಿತ್ರ, ನೋಡಲ್ ಅಧಿಕಾರಿ, ಡಯಟ್ ಉಪನ್ಯಾಸಕ ಹೇಮಂತ್, ವೀರಾಜಪೇಟೆ ತಾಲೂಕಿನ ಸಿಆರ್‌ಪಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಚೆನ್ನAಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗಿರಿಜಾ, ಪೊನ್ನಪ್ಪಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಶೀಲ, ಮಾಯಮುಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ.ಸಿ.ವಾಣಿ, ನಲ್ಲೂರು ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಸಂಧ್ಯಾ, ಬೆಸಗೂರು ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಪ್ರತಾಪ್, ಸಿಆರ್‌ಪಿಗಳಾದ ಸೌಮ್ಯ, ಮುರುಗನ್, ವೆಂಕಟೇಶ್, ರಾಧಾ ಹಾಗೂ ಮಾಯಮುಡಿ ಕ್ಲಸ್ಟರ್‌ಗೆ ಸೇರಿದ ಆರು ಶಾಲೆಗಳ ಮುಖ್ಯ ಶಿಕ್ಷಕರುಗಳು, ಸಹ ಶಿಕ್ಷಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾಯಮುಡಿ ಶಾಲೆಯ ಮುಖ್ಯ ಶಿಕ್ಷಕಿ ಜಯಮ್ಮ ಸ್ವಾಗತಿಸಿ, ಶಿಕ್ಷಕಿ ಕೆ.ಬಿ. ಪುಷ್ಪ ನಿರೂಪಿಸಿ, ಲೀಲಾ ವಂದಿಸಿದರು.

ಸಿದ್ದಾಪುರ: ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆಯಿAದ ಸಿದ್ದಾಪುರದ ಸರಕಾರಿ ಮಾದರಿ ಪ್ರಾಥಮಿಕ ಮಲಯಾಳಂ ಶಾಲೆಯಲ್ಲಿ ಶ್ರಮದಾನ ಮಾಡಿ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳು ಮತ್ತು ಶಾಲೆಗೆ ವಿವಿಧ ಸಾಮಗ್ರಿಗಳನ್ನು ವಿತರಿಸಲಾಯಿತು.

ಸಂಸ್ಥೆಯ ೪೦ ಮಂದಿ ಸ್ವಯಂಸೇವಕರು ಶಾಲೆ ರಂಗಮAದಿರ ಹಾಗೂ ಕೊಠಡಿಗಳಿಗೆ ಬಣ್ಣ ಬಳಿದರು. ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ವಿತರಿಸಿದರು.

ಈ ಸಂದರ್ಭ ಟ್ರಸ್ಟ್ನ ಆಡಳಿತ ಮಂಡಳಿ ಅಧಿಕಾರಿ ಕಣ್ಣನ್, ಖಜಾಂಜಿ ಕೆ. ಶರಣು, ನೋಯಲ್, ಸಿಸ್ಕೋ ಸಂಸ್ಥೆಯ ಸ್ವಯಂಸೇವಕರು ಹಾಗೂ ಮುಖ್ಯ ಶಿಕ್ಷಕಿ ಟಿ.ಕೆ. ಪ್ರೇಮ ಹಾಗೂ ಶಿಕ್ಷಕರು ಹಾಜರಿದ್ದರುಚೆಯ್ಯಂಡಾಣೆ: ಮರಂದೋಡ ಯವಕಪಾಡಿ ನಾಲಡಿ ಗೌಡ ಸಮಾಜ ವತಿಯಿಂದ ಕಕ್ಕಬ್ಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಕಾರ್ಯಕ್ರಮ ನಡೆಯಿತು.

ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಒಟ್ಟು ೪೫ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಒಳಗೊಂಡ ತಂಡ ಪ್ರಸಿದ್ಧ ಪ್ರವಾಸಿ ತಾಣವಾದ ಚೇಲಾವರ ಜಲಪಾತ, ಕಬ್ಬೆಬೆಟ್ಟದ ವ್ಯೂ ಪಾಯಿಂಟ್ ಹಾಗೂ ಮರಂದೋಡ ಬೆಟ್ಟದ ವ್ಯೂ ಪಾಯಿಂಟ್‌ಗಳಿಗೆ ಭೇಟಿ ನೀಡಿದರು. ಚಾರಣದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗೌಡ ಸಮಾಜ ವತಿಯಿಂದ ನೋಟ್ ಪುಸ್ತಕ, ಪೆನ್, ಪೆನ್ಸಿಲ್‌ಗಳನ್ನು ನೀಡಲಾಯಿತು. ಈ ಸಂದರ್ಭ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಮುಖ್ಯ ಶಿಕ್ಷಕಿ ರಜೀನಾ, ಗೌಡ ಸಮಾಜದ ಗೌರವ ಕಾರ್ಯದರ್ಶಿ ಚಂಡೀರ ರೋಷನ್, ನಿರ್ದೇಶಕರಾದ ಚಂಡೀರ ರ‍್ಯಾಲಿ ಗಣಪತಿ, ಬಾರಿಕೆ ಗಿರೀಶ್, ಪ್ರವೀಣ್ ಗೌಡ, ಮುಕ್ಕಾಟಿ ಚಿಣ್ಣಪ್ಪ, ಚಿದಾನಂದ ಗೌಡ,

ಮರಂದೋಡ ರಿಕ್ರಿಯೇಷನ್ ಕ್ಲಬ್‌ನ ಮುಕ್ಕಾಟಿ ದಿಲೀಪ್ ಗೌಡ, ವೇಣು ದೇವೇಂದ್ರ, ಅಜಿತ್ ಗೌಡ, ಮುಕ್ಕಾಟಿ ನವೀನ್, ಮಂಜು ಗೌಡ, ಬಾರಿಕೆ ಸಂಚಿತ್ ಗೌಡ, ಎಸ್‌ಎಂಎಸ್ ಶಾಲೆಯ ವಿದ್ಯಾರ್ಥಿ ಪದವಿ ಪೊನ್ನಮ್ಮ, ಚಂಡೀರ ಡೇನಾ, ಪದಕ್ ಪೊನ್ನಣ್ಣ, ಶಾಲೆಯ ಅತಿಥಿ ಶಿಕ್ಷಕಿಯರಾದ ಜಲಜಾಕ್ಷಿ, ಆಶಾ, ಶಾಲೆಯ ಸಿಬ್ಬಂದಿಗಳು ಹಾಜರಿದ್ದರು.ಸಿದ್ದಾಪುರ: ಕ್ಲಸ್ಟರ್ ಮಟ್ಟದ ಕಲಿಕಾಹಬ್ಬ ಚೆನ್ನಯ್ಯನಕೋಟೆ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಮಕ್ಕಳ ಕಲಿಕೆಯ ಆಸಕ್ತಿ ಹೆಚ್ಚಿಸಲು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳಿಂದ ಸಾಧ್ಯವಾಗಲಿದೆ ಎಂದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ರುಕ್ಮಿಣಿ ಮಾತನಾಡಿ ಸರ್ಕಾರದ ವಿನೂತನ ಕಾರ್ಯಕ್ರಮದಿಂದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು. ಶಾಲಾ ಮುಖ್ಯ ಶಿಕ್ಷಕಿ ಎಚ್.ಎ. ರಾಜಮ್ಮ ಮಾತನಾಡಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಶಿಕ್ಷಕರುಗಳು ಮುಂದಾಗಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರ ನೀಡುತ್ತಿದ್ದಾರೆ ಎಂದರು.

ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಣಿಕಂಠ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜಸೇವಕ ವಾಟೇರಿರ ಸುರೇಶ್ ಸೋಮಯ್ಯ, ಸಿಆರ್‌ಪಿಗಳಾದ ಕೇಶವಮೂರ್ತಿ, ಕರುಂಬಯ್ಯ, ಪ್ರವೀಣ್, ವಿದ್ಯಾ, ಕೆ.ಕೆ. ಸುಷ್ಮಾ, ಬಿಐಆರ್‌ಟಿ ವಿಠಲ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಂಕರ್, ಮಾಲ್ದಾರೆ ಶಾಲೆಯ ಮುಖ್ಯ ಶಿಕ್ಷಕ ವಿಜಯ್ ಕುಮಾರ್, ಪಂಚಾಯಿತಿ ಸದಸ್ಯರಾದ ವಿಜು, ನಾರಾಯಣ್, ಪ್ರಮುಖರಾದ ಶಶಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರುಗಳು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು. ಪ್ರತ್ಯೇಕ ಕೊಠಡಿಗಳಲ್ಲಿ ಮಕ್ಕಳಿಗೆ ರಸಪ್ರಶ್ನೆ, ಜ್ಞಾಪಕಶಕ್ತಿ, ಕಲಿಕೆ, ಗಟ್ಟಿ ಓದು, ಸಂತೋಷದಾಯಕ ಗಣಿತ, ಕೈಬರಹ, ಕಥೆ ಹೇಳುವುದು ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು. ವಿಜೇತರರಿಗೆ ಬಹುಮಾನ ವಿತರಿಸಲಾಯಿತು.

ಕೂಡಿಗೆ: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಇಕೋ ಕ್ಲಬ್, ಎನ್.ಎಸ್.ಎಸ್.ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವ ಜನತೆಯ ಸಬಲೀಕರಣ ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟಿçÃಯ ವಿಜ್ಞಾನ ದಿನಾಚರಣೆ-೨೦೨೫ ಹಾಗೂ ವಿಜ್ಞಾನ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿಜ್ಞಾನ ದಿನಾಚರಣೆಯ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವ ಕುರಿತು ಭಾರತೀಯ ಸಂವಿಧಾನದ ೫೧ (ಎಚ್) ವಿಧಿಯ ಮಹತ್ವ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತಾದ ಪ್ರತಿಜ್ಞಾ ವಿಧಿಬೋಧಿಸಿ ವಿಜ್ಞಾನ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ವಿಜ್ಞಾನ ಕಾರ್ಯಕ್ರಮಗಳ ಸಂಘಟಕ ಟಿ.ಜಿ. ಪ್ರೇಮಕುಮಾರ್, ವಿಜ್ಞಾನ ಎಲ್ಲರಿಗೂ ಅಗತ್ಯವಾಗಿದೆ.

ಭಾರತವು ವಿಶ್ವಮಟ್ಟದಲ್ಲಿ ವಿಜ್ಞಾನದ ಪ್ರಗತಿಗೆ ತನ್ನದೇ ಆದ ವಿಶೇಷ ಕೊಡುಗೆ ನೀಡುತ್ತಾ ಬಂದಿದೆ. ದೇಶೀಯ ವಿಜ್ಞಾನ ಮತ್ತು ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದರು.

ರಾಷ್ಟಿçÃಯ ವಿಜ್ಞಾನ ದಿನದ ಅಂಗವಾಗಿ ಏರ್ಪಡಿಸಿದ್ದ ವಿಜ್ಞಾನ ಮಾದರಿಗಳ ಕುರಿತು ಮಾಹಿತಿ ನೀಡಿದ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಅವರು ಸರ್ ಸಿ.ವಿ. ರಾಮನ್ ಅವರ ರಾಮನ್ ಪರಿಣಾಮಗಳು (ರಾಮನ್ ಎಫೆಕ್ಟ್) ವೈಜ್ಞಾನಿಕ ಸಂಶೋಧನೆ ಕುರಿತು ವಿವರಿಸಿದರು.

ದೇಶದ ಅಭಿವೃದ್ಧಿಗೆ ಭಾರತೀಯ ವಿಜ್ಞಾನಿಗಳ ಕೊಡುಗೆಯನ್ನು ಗುರುತಿಸಲು ಪ್ರತಿ ವರ್ಷ ಫೆ.೨೮ ರಂದು ರಾಷ್ಟಿçÃಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನAದ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.

ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಕೆ.ಟಿ.ಸೌಮ್ಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಳಿನಿ ಇದ್ದರು.

ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ವಸ್ತುಗಳ ಮಾದರಿ ಪ್ರದರ್ಶನದ ಕಾರ್ಯಕ್ರಮದಲ್ಲಿ ಸ್ಥಳೀಯ ಕೂಡ್ಲೂರು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಹಬ್ಬ ಅಂಗವಾಗಿ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ವಿಜ್ಞಾನ ಮಾದರಿಗಳ ಪ್ರದರ್ಶನ ಗಮನ ಸೆಳೆಯಿತು.

ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಸೂಕ್ಷö್ಮದರ್ಶಕದಲ್ಲಿ ಸೂಕ್ಷö್ಮ ವಸ್ತುಗಳ ವೀಕ್ಷಣೆ, ಶಕ್ತಿ ಬಳಕೆಯ ಪ್ರಯೋಗಗಳು, ಖಗೋಳ ವಿಜ್ಞಾನ ಮತ್ತು ಸೌರವ್ಯೂಹ ವ್ಯವಸ್ಥೆ, ಭೌತಶಾಸ್ತçದಲ್ಲಿ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ಸಾಧನೆಗಳು ಗಮನ ಸೆಳೆದವು.