ಸೋಮವಾರಪೇಟೆ : ಮಹಿಳಾ ಸಬಲೀಕರಣದಿಂದ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಅಭಿಪ್ರಾಯಿಸಿದರು.

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇತರ ೪ ಮಂಡಲಗಳ ಆಶ್ರಯದಲ್ಲಿ, ಸೋಮವಾರಪೇಟೆ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜನೆಗೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುಂಚೂಣಿಯಲ್ಲಿದ್ದು, ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಬೇಕಾಗಿದೆ. ಕೇಂದ್ರ ಸರ್ಕಾರವು ಮಹಿಳಾ ಸ್ವಾವಲಂಬನೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಮಾಹಿತಿ ತಿಳಿಸುವ ಕೆಲಸ ಆಗಬೇಕಿದೆ ಎಂದರು.

ಮಹಿಳೆಯರು ಇಂದು ಔದ್ಯೋಗಿಕ ಕ್ಷೇತ್ರದಲ್ಲೂ ಹೆಸರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವು ಸ್ವ ಉದ್ಯೋಗಕ್ಕೆ ಹಣಕಾಸಿಕ ನೆರವು ಒದಗಿಸುತ್ತಿದೆ. ಹಲವಷ್ಟು ಯೋಜನೆಗಳನ್ನು ಸ್ಥಳೀಯ ಬ್ಯಾಂಕ್‌ಗಳ ಮೂಲಕ ಅನುಷ್ಠಾನ ಗೊಳಿಸುತ್ತಿದೆ. ಮಹಿಳೆಯರು ಸ್ವ ಉದ್ಯೋಗದತ್ತಲೂ ಆಸಕ್ತಿ ಹೊಂದಬೇಕು. ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಇದರೊAದಿಗೆ ಪಕ್ಷದ ರಾಜ್ಯ ಘಟಕದಿಂದ ಅಂಗಾAಗ ದಾನಗಳ ಮಹತ್ವ ಸಾರುವ ಜಾಗೃತಿಯನ್ನು ಮೂಡಿಸುವ ಬಗ್ಗೆ ಸೂಚನೆ ಬಂದಿದೆ. ಮಹಿಳೆಯರೂ ಸಹ ಅಂಗಾAಗ ದಾನಕ್ಕೆ ಹೆಸರು ನೋಂದಣಿ ಮಾಡಿಸಬೇಕು. ಅಂಗಾAಗ ದಾನದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕೆಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಹಿರಿದು. ಪ್ರಸ್ತುತ ಎಲ್ಲಾ ರಂಗದಲ್ಲೂ ಮಹಿಳೆಯರು ಪ್ರಗತಿ ಸಾಧಿಸುತ್ತಿದ್ದು, ದೇಶದ ಪ್ರಗತಿಗೆ ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ ಎಂದರು.

ವೇದಿಕೆಯಲ್ಲಿ ಸೋಮವಾರಪೇಟೆ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಮಡಿಕೇರಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌಮ್ಯ, ಪ.ಪಂ. ಅಧ್ಯಕ್ಷೆ ಜಯಂತಿ ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ನಾಗೇಶ್, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ, ಪ್ರಮುಖರಾದ ದರ್ಶನ್ ಜೋಯಪ್ಪ, ಎಸ್.ಆರ್. ಸೋಮೇಶ್, ಶರತ್‌ಚಂದ್ರ ಅವರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವ ಉದ್ಯೋಗ ಯೋಜನೆಯಡಿ ಉದ್ಯಮ ಆರಂಭಿಸಿ ಆರ್ಥಿಕ ಸಬಲತೆ ಸಾಧಿಸಿರುವ ಅಬ್ಬೂರುಕಟ್ಟೆಯ ಉದ್ಯಮಿ ರೂಪಾ ಹೆಬ್ಬಾರ್ ಹಾಗೂ ಪ.ಪಂ. ಅಧ್ಯಕ್ಷೆಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಜಯಂತಿ ಶಿವಕುಮಾರ್ ಅವರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಅಂಗಾAಗ ದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.ಶನಿವಾರಸಂತೆ: ಶೋಷಿತ ಮಹಿಳೆಯರ ಶಕ್ತಿ ಸಂವರ್ಧನೆಯೇ ಮಹಿಳಾ ಸಬಲೀಕರಣವಾಗಿದ್ದು; ಸ್ವಾಭಿಮಾನ ಮತ್ತು ಆತ್ಮವಿಶ್ವಾಸವಿದ್ದರೇ ಆ ಹೆಣ್ಣು ಸಬಲಳಾಗುತ್ತಾಳೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಹಿಳಾ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳಾಪರ ಕಾರ್ಯಕ್ರಮದಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಾಗ ಅರ್ಥಪೂರ್ಣ ವೆನಿಸುತ್ತದೆ. ಗಂಡಿನ ಜೀವನದಲ್ಲಿ ಹೆಣ್ಣಿನ ಪಾತ್ರ ಬಹುಮುಖ್ಯವಾಗಿದ್ದು ಕೇವಲ ಹೆಣ್ಣೆಂಬ ಸಂಕುಚಿತ ಭಾವನೆ ಮೊದಲಿಗೆ ದೂರವಾಗಬೇಕು. ಗ್ರಾಮ ಪಂಚಾಯಿತಿಯೂ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿಗೆ ಉಪಯುಕ್ತ ಮಾಹಿತಿ ನೀಡುತ್ತದೆ ಎಂದರು.

ಮುಖ್ಯ ಅತಿಥಿ ಸಾಹಿತಿ ಶ.ಗ. ನಯನತಾರಾ ಮಾತನಾಡಿ, ಸೃಷ್ಟಿಗೆ ಮೂಲ ಕಾರಣಳಾದ ಮಹಿಳೆ ಅನಾಧಿ ಕಾಲದಿಂದಲೂ ಮನೆಯೆಂಬ ಪಂಜರದಲ್ಲಿ ಬೆಳೆದ ಗಿಣಿಯಾದರೂ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾಳೆ. ಸುಶಿಕ್ಷಕಿತ ಮಹಿಳೆ ಕುಟುಂಬ ಸದಸ್ಯರಲ್ಲಿ ಉತ್ತಮ ಸಾಮಾಜಿಕ ಮೌಲ್ಯಗಳನ್ನು ಬೆಳೆಸುತ್ತಾಳೆ. ಸ್ತಿçÃ-ಪುರುಷರಲ್ಲಿ ಮೇಲು-ಕೀಳಿನ ಬೇಧವಿಲ್ಲದೇ ಇಬ್ಬರು ಸೇರಿಯೇ ಜೀವನ ಪರಿಪೂರ್ಣಗೊಳ್ಳುತ್ತದೆ. ಆಧುನಿಕ ಕಾಲದಲ್ಲೂ ಮಹಿಳೆಯ ಜವಾಬ್ದಾರಿ ಇಮ್ಮಡಿಯಾಗಿ ಮನೆಯೊಳಗೆ-ಮನೆಯ ಹೊರಗೆ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಪುರುಷನಿಗೆ ಸರಿಸಮಾನವಾಗಿ ದುಡಿಯುತ್ತಾ ಯಶಸ್ವಿಯಾಗಿದ್ದಾಳೆ ಎಂದರು.

ವಕೀಲರಾದ ಶಂಕರ್ ಮಾತನಾಡಿ, ಮಹಿಳೆಯರ ಬದುಕಿನಲ್ಲಿ ಸಮಾನತೆ ತರಲು ಮಹಿಳಾ ದಿನಾಚರಣೆ ಕಾರ್ಯಕ್ರಮ ಅರ್ಥಗರ್ಭಿತ ಎನಿಸುತ್ತದೆ. ಮೀಸಲಾತಿಯ ಹಕ್ಕುಗಳಿಂದ ಮಹಿಳೆಯರಿಗೆ ಸ್ಥಾನಮಾನಗಳು ಲಭ್ಯವಾಗುತ್ತಿವೆ. ಶಿಕ್ಷಣದ ಹಕ್ಕಿನಿಂದಲು ಮಹಿಳೆ ಸಬಲಳಾಗುತ್ತಿದ್ದಾಳೆ. ಡಾ. ಅಂಬೇಡ್ಕರ್ ಅವರ ಸಂವಿಧಾನ ಲಿಂಗ ಅಸಮಾನತೆಯನ್ನು ಹೋಗಲಾಡಿಸಿ ಸಮಾನ ಹಕ್ಕುಗಳನ್ನು ನೀಡಿದೆ ಎಂದರು.

ವೈದ್ಯಾಧಿಕಾರಿ ಡಾ.ಅಶೋಕ್ ಮಾತನಾಡಿ, ಕುಟುಂಬದಲ್ಲಿ ತಾಯಿಯ ಪಾತ್ರ ಮಹತ್ವದ್ದಾಗಿದೆ. ಉತ್ತಮ ಶಿಕ್ಷಣದಿಂದ ಹೆಣ್ಣುಮಕ್ಕಳಿಗೆ ಸ್ಥಾನ-ಮಾನ ದೊರೆಯುತ್ತದೆ.ಹೆಣ್ಣುಮಕ್ಕಳ ದೈಹಿಕ ಆರೋಗ್ಯಕ್ಕೂ ಪ್ರಾಮುಖ್ಯತೆ ನೀಡಿ ಕಬ್ಬಿಣಾಂಶವಿರುವ ಆಹಾರಗಳನ್ನು ಕೊಡಬೇಕು.ಸಮತೋಲನ ಆಹಾರ ಸೇವನೆ, ವ್ಯಾಯಾಮ, ಸಾಂಕ್ರಾಮಿಕ ರೋಗಗಳನ್ನು ಮನೆಯಿಂದ ಹೊರಗಿಟ್ಟಾಗ ಹೆಣ್ಣುಮಕ್ಕಳ ಆರೋಗ್ಯದ ಜತೆಗೆ ಆ ಕುಟುಂಬವೂ ಏಳಿಗೆಯಾಗುತ್ತದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯೆ ಸರೋಜಾಶೇಖರ್ ಮಾತನಾಡಿ, ಮಹಿಳೆಯರಿಗೆ ಸಿಕ್ಕಿರುವ ಸ್ಥಾನ-ಮಾನ ಹಾಗೂ ಹಕ್ಕುಗಳು ಸದುಪಯೋಗವಾಗಲು ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಆಯ್ಕೆ ಸ್ವಾತಂತ್ರö್ಯವೂ ಮುಖ್ಯವಾಗಿರಬೇಕು ಎಂದರು.

ಆಶಾ ಕಾರ್ಯಕರ್ತೆ ಉಷಾಜಯೇಶ್ ಮಾತನಾಡಿ, ಹೆಣ್ಣು ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಶಿಕ್ಷಣ ಕೊಡಿಸಿ ಆಕೆಯ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು. ಗಂಡು-ಹೆಣ್ಣೆAಬ ತಾರತಮ್ಯ ತೋರದೆ ಬಾಲ್ಯ ವಿವಾಹ ತಡೆಗಟ್ಟಬೇಕು. ಶಿಕ್ಷಣದಿಂದ ಮಾತ್ರ ಹೆಣ್ಣು ಪರಿಪೂರ್ಣಳಾಗಬಲ್ಲಳು ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಹಕ್ಕುಗಳು, ಫಲಾನುಭವಿ ಮಹಿಳೆಯರಿಗೆ ಆಯ್ಕೆ ಮೂಲಕ ಸಿಗುವ ವಸತಿ, ಮೂಲಭೂತ ಅವಶ್ಯಕತೆ ಇತ್ಯಾದಿ ಸೌಲಭ್ಯಗಳ ಮಾಹಿತಿ ನೀಡಿದರು.

ಪೊಲೀಸ್ ಹೆಡ್ ಕಾನ್ಸಟೇಬಲ್ ಪ್ರದೀಪ್ ಕುಮಾರ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ವುಮನ್ ಡೆಸ್ಕ್ ಸ್ಥಾಪಿಸಲ್ಪಟ್ಟಿದ್ದು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಿಗುವ ಕಾನೂನಾತ್ಮಕ ರಕ್ಷಣೆ, ದೂರವಾಣಿ ಮೂಲಕ ದೂರು ಸಲ್ಲಿಸುವ ಅವಕಾಶದ ಬಗ್ಗೆ ಮಾಹಿತಿ ನೀಡಿದರು. ಪೋಷಕರು ಮಕ್ಕಳಿಗೆ ಬಾಲ್ಯದಿಂದಲೇ ಗುಡ್ ಟಚ್-ಬ್ಯಾಡ್ ಟಚ್ ಬಗ್ಗೆ ತಿಳಿಸಿಕೊಡುವಂತೆ ಕರೆ ನೀಡಿದರು.

ಪಂಚಾಯಿತಿ ಸದಸ್ಯೆ ಸರಸ್ವತಿ, ಕಾರ್ಯದರ್ಶಿ ದೇವರಾಜ್, ಸಿಬ್ಬಂದಿ ವಸಂತ್ ಕುಮಾರ್, ಫೌಜಿಯಾ, ರಾಜೇಶ್ವರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಇತರರು ಹಾಜರಿದ್ದರು.ಕುಶಾಲನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಂತರ್ ಗೌಡ ಅವರು ಪ್ರತಿಯೊಬ್ಬ ಮಹಿಳೆಯರು ತನ್ನ ಬದುಕನ್ನು ಕುಟುಂಬಕ್ಕಾಗಿ ಮೀಸಲಿರುವ ಶಕ್ತಿಯಾಗಿದ್ದು ಆಕೆಯ ಶ್ರಮ ನಿಜಕ್ಕೂ ಅದ್ಭುತವಾಗಿದೆ. ಇದೀಗ ಸಮಾಜದ ವಿವಿಧ ಮಜಲುಗಳಲ್ಲಿ ಬಹುತೇಕ ಜವಾಬ್ದಾರಿಯನ್ನು ನಿಭಾಯಿಸುವ ಹಾಗೂ ಮುನ್ನಡೆಸುವ ಶಕ್ತಿ ಮಹಿಳೆಯರಿಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ತಿçà ಶಕ್ತಿ ಒಕ್ಕೂಟದ ರಾಜ್ಯಾಧ್ಯಕ್ಷೆ ರೆಹನಾ ಸುಲ್ತಾನ್, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥವಾಗಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ ಎಂದರು. ತಮ್ಮ ಜವಾಬ್ದಾರಿ ನಡುವೆ ಸಾಧನೆಗಳನ್ನು ಮಾಡಿರುವ ಮಹಿಳೆಯರನ್ನು ಗುರುತಿಸಿ ಸನ್ಮಾನ ಮಾಡುವುದು ನಿಜಕ್ಕೂ ಸಂತಸದ ವಿಷಯ ಎಂದರು. ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಬೇಕು ಆತ್ಮಸ್ಥೆöÊರ್ಯ ತುಂಬುವ ಮೂಲಕ ಮಹಿಳೆಯರ ಶೋಷಣೆಯನ್ನು ತಪ್ಪಿಸಲು ಸಾಧ್ಯ ಎಂದರು. ಹುಟ್ಟು ಹಾಗೂ ಸಾವಿನ ನಡುವೆ ಸ್ವಾರ್ಥ ರಹಿತ ಬದುಕು ನಡೆಸುವುದು ಎಲ್ಲರ ಗುರಿಯಾಗಬೇಕು. ಹಿರಿಯರ ಮಾರ್ಗದರ್ಶನ ಮೂಲಕ ಪ್ರತಿಯೊಬ್ಬರು ಆರ್ಥಿಕ ಶೈಕ್ಷಣಿಕವಾಗಿ ಬೆಳವಣಿಗೆ ಕಾಣುವಂತಾಗಬೇಕು ಎಂದರು.

ಮುಖ್ಯ ಭಾಷಣಕಾರ ಉಪನ್ಯಾಸಕ ಜಯಕುಮಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಸಮಾಜದ ಎಲ್ಲಾ ಸ್ಥರಗಳಲ್ಲಿ ಮಹಿಳೆಯರು ಬೆಳವಣಿಗೆ ಕಂಡಿದ್ದು ತನ್ನ ಜೀವನದಲ್ಲಿ ಎಲ್ಲಾ ಕಷ್ಟಗಳನ್ನು ಸಹನೆ ಮೂಲಕ ದಾಟಿ ಮುನ್ನಡೆಯುತ್ತಿರುವುದು ಶ್ಲಾಘನೀಯ ಅಂಶವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ಪಿ ಚಂದ್ರಕಲಾ ಮಾತನಾಡಿ ಮಹಿಳೆಯರು ಕುಟುಂಬದ ಆಧಾರ ಸ್ತಂಭವಾಗಿ ಕಾರ್ಯನಿರ್ವಹಿಸುತ್ತಾರೆ. ಆರ್ಥಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಬೆಳೆಯಲು ಪ್ರತಿಯೊಬ್ಬರ ಪ್ರೋತ್ಸಾಹದ ಅಗತ್ಯತೆ ಇದೆ ಎಂದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮಹಿಳಾ ದಿನಾಚರಣೆಯ ಶುಭಾಶಯ ಕೋರಿ ಮಾತನಾಡಿ ಮಹಿಳೆಯರು ಧೈರ್ಯದಿಂದ ಜಗತ್ತನ್ನೇ ತಲುಪಬಲ್ಲ ಶಕ್ತಿ ಹೊಂದಿದ್ದಾರೆ ಎಂದರು.

ಸ್ತ್ರೀಶಕ್ತಿ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಹೇಮ ಹೆಚ್ ಎಂ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶ್ರೀದೇವಿ ಬಿ. ಮುಧೋಳ ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷಿö್ಮ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರುಕ್ಮಿಣಿ ಜಿಲ್ಲಾ ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಶಾಂತಿ ಮತ್ತಿತರರು ಇದ್ದರು. ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಸೋಮವಾರಪೇಟೆ ಹಾಗೂ ಕುಶಾಲನಗರ ಸ್ತಿçà ಶಕ್ತಿ ಒಕ್ಕೂಟ ಕಾರ್ಯಕರ್ತರು ಇದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಣಿವೆ: ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಸದೃಢರಾದರೆ ಮಾತ್ರ ಆರೋಗ್ಯವಂತರಾಗಲು ಸಾಧ್ಯ ಎಂದು ಸೋಮವಾರಪೇಟೆ ಸರ್ಕಾರಿ ಹೋಮಿಯೋಪತಿ ಮತ್ತು ಆಯುರ್ವೇದಿಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸೌಪರ್ಣಿಕಾ ಹೇಳಿದರು.

ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಮಿತಿ, ದೈಹಿಕ ಶಿಕ್ಷಣ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ ಆಯೋಜಿಸಲಾದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳೆಯರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕುರಿತು ಮಾಹಿತಿ ನೀಡಿದ ಅವರು, ಯುವ ಜನಾಂಗದಲ್ಲಿ ಉದ್ವೇಗ, ಆತಂಕ, ವಿಪರೀತ ನಿದ್ರೆ, ಉಸಿರಾಟದ ತೊಂದರೆ, ಸುಸ್ತು ಕಂಡುಬರುತ್ತಿದ್ದು ಇದು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವುದಾಗಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗಿ ತಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು.

ಹೆಚ್ಚಿನ ಒತ್ತಡಕ್ಕೆ ಒಳಗಾಗದೆ ಆಗಾಗ ವೈದ್ಯರಲ್ಲಿ ಚಿಕಿತ್ಸೆ ಪಡೆದು ಅವರ ಸಲಹೆಯಂತೆ ನಡೆದುಕೊಳ್ಳಬೇಕು ಎಂದು ಡಾ. ಸೌಪರ್ಣಿಕಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಮಹಿಳಾ ಸಮಿತಿಯ ಸಂಚಾಲಕಿ ವಂದನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕ ಡಾ. ಪುಟ್ಟರಾಜು, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪಿ.ಪಿ. ಜಯಂತಿ, ಅರ್ಥಶಾಸ್ತç ವಿಭಾಗದ ಮುಖ್ಯಸ್ಥರಾದ ರಮೇಶ್ಚಂದ್ರ ಇತರರು ಉಪಸ್ಥಿತರಿದ್ದರು.

ಕೂಡಿಗೆ : ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಗ್ರಾಮದ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾ.ಪಂ. ಅಧ್ಯಕ್ಷೆ ಎಂ. ಆರ್. ಲತಾಬಾಯಿ ಅವರು ಅಧ್ಯಕ್ಷತೆ ವಹಿಸಿದ್ದರು.

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು ಸರ್ಕಾರದ ಎನ್. ಆರ್. ಎಲ್. ಎಂ. ಯೋಜನೆಯ ಪ್ರಯೋಜನವನ್ನು ಎಲ್ಲಾ ಮಹಿಳೆಯರು ಪಡೆದುಕೊಳ್ಳಬೇಕು. ಸ್ವಸಹಾಯ ಸಂಘಗಳು ಆರ್ಥಿಕ ಚಟುವಟಿಕೆಗಳನ್ನು ಕೈಗೊಂಡರೆ ಆರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸಾಧ್ಯ ಎಂದು ಅವರು ಹೇಳಿದರು. ತಮ್ಮ ಮನೆಯ ಕಸವನ್ನು ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ ಗ್ರಾಮ ಪಂಚಾಯಿತಿಯ ವಾಹನಕ್ಕೆ ನೀಡುವುದರ ಮೂಲಕ ಗ್ರಾಮದ ಸ್ವಚ್ಛತೆ ಕಾಪಾಡುವಲ್ಲಿ ಗ್ರಾಮ ಪಂಚಾಯಿತಿ ಜೊತೆ ಸಹಕರಿಸಲು ಕೋರಿದರು. ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಅಭಿವೃದ್ಧಿ ಅಧಿಕಾರಿ ಹೇಮಲತಾ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ, ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ, ಗ್ರಾಮದ ಶುಚಿತ್ವಕ್ಕೆ ಮಹಿಳೆಯರ ಸಹಕಾರ ಸೇರಿದಂತೆ ಹಲವು ಬಗೆಯ ವಿಷಯಗಳ ಬಗ್ಗೆ ತಿಳಿಸಿದರು.

ಸದಸ್ಯರಾದ ಸರಿತಾ, ಭಾಗೀರಥಿ, ಲಕ್ಷ÷್ಮಮ್ಮ, ಸೇರಿದಂತೆ ವಿವಿಧ ಮಹಿಳಾ ಸಂಘಟನೆಯ ಪ್ರಮುಖರು, ಸ್ವಸಹಾಯ ಗುಂಪುಗಳ ಮಹಿಳೆಯರು ಹಾಜರಿದ್ದರು.ನಾಪೋಕ್ಲು: ಚೇರಂಬಾಣೆ ಸಮೀಪದ ಕಾರುಗುಂದ ಗೌಡ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಅವರು ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳಾ ದಿನಾಚರಣೆಯನ್ನು ಇದೇ ಮೊದಲ ಬಾರಿಗೆ ಸಮಾಜದ ವತಿಯಿಂದ ಆಯೋಜಿಸಿದ್ದು ಸಮಾಜದ ಸರ್ವತೋಮುಖ ಬೆಳವಣಿಗೆಗೆ ಮಹಿಳೆಯರು ನೀಡುತ್ತಿರುವ ಸಹಕಾರವನ್ನು ಸ್ಮರಿಸಿಕೊಂಡರು. ಮಹಿಳಾ ಒಕ್ಕೂಟ ಹಾಗೂ ಯುವ ಒಕ್ಕೂಟ ರಚನೆಯಾದಲ್ಲಿ ಸಮಾಜಕ್ಕೆ ಇನ್ನಷ್ಟು ಬಲ ಸಿಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕು ಕಸಾಪ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಮಹಿಳೆಯರ ಸಾಧನೆಯನ್ನು ಗುರುತಿಸುವ ದಿನ ವಿಶ್ವ ಮಹಿಳಾ ದಿನ. ತೊಟ್ಟಿಲ ತೂಗುವ ಕೈ ದೇಶವನ್ನಾಳುವುದು ಎನ್ನುವ ಮಾತಿಗೆ ಉದಾಹರಣೆಯಂತೆ ಇಂದು ದೇಶದ ಅತ್ಯುನ್ನತ ಪದವಿಯಲ್ಲಿ ಮಹಿಳೆಗೆ ಸ್ಥಾನಮಾನ ದೊರೆತಿರುವುದು ಸಾಕ್ಷಿಯಾಗಿದೆ ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನ ಚಾಪುಮೂಡಿಸಿ ಪುರುಷ ಪ್ರಧಾನ ಸಮಾಜದಲ್ಲಿ ಪ್ರತಿ ಪುರುಷನ ಹಿಂದೆ ನೆರಳಾಗಿ ಮಹಿಳೆ ಪ್ರತಿಯೊಂದು ಹಂತದಲ್ಲೂ ತನ್ನ ನಿಲುವನ್ನು ತೋರಿಸುತ್ತಿದ್ದಾಳೆ ಎಂದರು.

ಕಾರ್ಯದರ್ಶಿ ಬೆಳ್ಯನ ಚಂದ್ರಪ್ರಕಾಶ್ ಮಾತನಾಡಿ, ಮಹಿಳಾ ಒಕ್ಕೂಟ ರಚನೆಯಾದಲ್ಲಿ ಸಮಾಜದ ಬಲ ಹೆಚ್ಚುತ್ತದೆ ಹಾಗೂ ಸಂಘಟನೆಯು ಉತ್ತಮವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಸಮಾಜದ ಉಪಾಧ್ಯಕ್ಷ ಕೇಕಡ ದಿನೇಶ್ ಮಾತನಾಡಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಕಾರ್ಯಕ್ರಮದಲ್ಲಿ ಗೌಡ ಸಮಾಜದ ನಿರ್ದೇಶಕರಾದ ನೆಯ್ಯಣಿ ಹೇಮಲತಾ ತಾರೆಂದ್ರ, ಕೊಡಗನ ತೀರ್ಥ ಪ್ರಸಾದ್, ಎಡಿಕೇರಿ ಪ್ರವೀಣ್. ಹಿರಿಯರಾದ ಬೈಮನ ವಿಜಯಲಕ್ಷಿö್ಮ ಸೇರಿದಂತೆ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸಮಾಜದ ಕಾರ್ಯದರ್ಶಿ ಚಂದ್ರಪ್ರಕಾಶ್ ಸ್ವಾಗತಿಸಿ ನೂತನ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ವಂದಿಸಿದರು.ಶನಿವಾರಸAತೆ: ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗ್ರಂಥಾಲಯ ಮೇಲ್ವಿಚಾರಕಿ ಮಮತಾ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ದಿನಾಚರಣೆ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಮಹಿಳಾ ಸದಸ್ಯರಿಗೆ ಆಟೋಟಗಳನ್ನು ಏರ್ಪಡಿಸಿದ್ದು, ವಿಜೇತ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಎನ್. ವಸಂತ್ ದಿನದ ಮಹತ್ವದ ಕುರಿತು ಮಾತನಾಡಿ, ವಿವಿಧ ಕ್ಷೇತ್ರಗಳಿಗೆ ಪ್ರವೇಶಿಸಿ ತಮ್ಮನ್ನು ಉತ್ತಮ ರೀತಿಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರ ಬದುಕು ಅಭಿವೃದ್ಧಿ ಕಾಣುತ್ತಿರುವುದು ಶ್ಲಾಘನೀಯ. ಪೋಷಕರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.

ಸAಘ ಸಂಸ್ಥೆಗಳ ಪದಾಧಿಕಾರಿಗಳಾದ ಕವಿತಾ, ಸೋನಾಕ್ಷಿ, ಯಶೋದಾ, ಮಮತಾ, ಅಕ್ಷತಾ, ನೂರ್‌ಜಹಾನ್, ಆಶಾ, ಗಣೇಶ್, ರಮೇಶ್ ಹಾಜರಿದ್ದರು.