ಕಣಿವೆ, ಮಾ. ೯ : ಬೇಸಿಗೆಯ ಧಗೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಕೆರೆ - ಕಟ್ಟೆಗಳಲ್ಲಿ ನೀರಿಲ್ಲದೇ ಜಾನುವಾರುಗಳಿಗೆ ತೊಂದರೆಯಾಗಿದೆ.
ಜೊತೆಗೆ ಕೃಷಿಕರು ಹೊಂದಿರುವ ಕೊಳವೆ ಬಾವಿಗಳಲ್ಲಿ ಅಂತರಗAಗೆ ಪಾತಾಳಕ್ಕೆ ಇಳಿದಿರುವುದರಿಂದ ಹಾರಂಗಿ ಎಡದಂಡೆ ಕಾಲುವೆಯ ಮೂಲಕ ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯ ಶಿರಂಗಾಲದವರೆಗೆ ನಾಲೆಯಲ್ಲಿ ನೀರು ಹರಿಸಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಬ್ಬಾಲೆ ಅಶೋಕ್ ನೀರಾವರಿ ನಿಗಮದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈಗಾಗಲೇ ಕೂಡಿಗೆ, ತೊರೆನೂರು, ಮರೂರು, ಹಳಗೋಟೆ, ಚಿನ್ನೇನಹಳ್ಳಿ, ಸಿದ್ದಲಿಂಗಪುರ ಮತ್ತಿತರ ಗ್ರಾಮಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ. ಜಾನುವಾರುಗಳು ಹಾಗೂ ಕೃಷಿಕರ ಹಿತದೃಷ್ಟಿಯಿಂದ ನಾಲೆಯಲ್ಲಿ ನೀರು ಹರಿಸಿ ಕೆರೆ - ಕಟ್ಟೆಗಳನ್ನು ತುಂಬಿಸ ಬೇಕೆಂದು ಅವರು ಒತ್ತಾಯಿಸಿದ್ದಾರೆ.