ಕುಶಾಲನಗರ, ಮಾ. ೧೧: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಡಿ ಎನ್ ಶಶಿ (೪೭)ಎಂಬವರು ಮೃತಪಟ್ಟ ವ್ಯಕ್ತಿ. ಬೆಳಗ್ಗೆ ತಮ್ಮ ಮಕ್ಕಳನ್ನು ಶಾಲೆಗೆ ಬಿಟ್ಟು ಬೈಲುಕುಪ್ಪೆ ಕಡೆಗೆ ಬೈಕ್‌ನಲ್ಲಿ (ಏಂ೧೨ಎ೪೩೩೪) ತೆರಳುತ್ತಿದ್ದ ಸಂದರ್ಭ ಹೊನ್ನೂರು ಜಂಕ್ಷನ್ ಬಳಿ ಲಾರಿಗೆ (ಏಂ೪೨ಃ೩೬೧೧) ಅಪ್ಪಳಿಸಿ ಬೈಕ್ ಸವಾರ ಲಾರಿಯ ಚಕ್ರದ ಅಡಿಗೆ ಸಿಲುಕಿರುವದಾಗಿ ಪೊಲೀಸರು ತಿಳಿಸಿದ್ದಾರೆ.

ಬೈಲುಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಲಾರಿ ಚಾಲಕನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮೃತರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.