ಮಡಿಕೇರಿ, ಮಾ. ೧೧: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ ೧೦ ತಿಂಗಳ ತೋಟಗಾರಿಕೆ ತರಬೇತಿಯು ೨೦೨೫ ರ ಮೇ ೨ ರಿಂದ ೨೦೨೬ ರ ಫೆಬ್ರವರಿ, ೨೮ ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ೨೦೨೫ ರ ತಾ. ೩೧ ರ ಸಂಜೆ ೫.೩೦ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಅರ್ಜಿ ಪಡೆಯಬಹುದು.
ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ಛಾಪಾ ಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸಬೇಕು ಎಂದು ರಾಜ್ಯ ವಲಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.