ಸಿದ್ದಾಪುರ, ಮಾ. ೧೧: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಕಾರ್ಮಿಕ ವರ್ಗದ ಬೇಡಿಕೆಗಳ ಈಡೇರಿಕೆಗಾಗಿ, ದುಡಿಯುವ ಜನರ ಅಹೋರಾತ್ರಿ ಧರಣಿ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಪ್ರಚಾರ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಯಿತು. ನೆಲ್ಲಿಹುದಿಕೇರಿಯಲ್ಲಿ ಪ್ರಚಾರ ಸಭೆಯನ್ನು ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಸಿಐಟಿಯು ಕೊಡಗು ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮತ್ತು ಸಿಐಟಿಯು ಜಿಲ್ಲಾ ಖಜಾಂಚಿ ಎನ್.ಡಿ. ಕುಟ್ಟಪ್ಪ ಮಾತನಾಡಿದರು.

ಸಭೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಮೋನಪ್ಪ, ರೈತ ಮುಖಂಡ ಉದಯಕುಮಾರ್, ಸಿಐಟಿಯು ಪ್ರಮುಖ ರಘು, ಚಂದ್ರ, ಬೋಜಿ, ಮುತ್ತು, ರಾಜು, ಶಿವರಾಮ, ಹಬೀಬ್, ಯೂಸಫ್, ರವಿ, ಮಣಿ, ಲಲಿತ, ಇನ್ನಿತರರು ಭಾಗಿಯಾಗಿದ್ದರು.