ಕೂಡಿಗೆ, ಮಾ. ೧೧: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮಂಡ್ಯದ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಶೈಕ್ಷಣಿಕ ಅಧಿವೇಶನದಲ್ಲಿ ಬ್ಯಾಡಗೊಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಎಂ.ಐ. ರಿಜ್ವಾನ ಬಾನು ಅವರಿಗೆ ರಾಜ್ಯಮಟ್ಟದ ಮಾತೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ರಿಜ್ವಾನ ಬಾನು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಈ ಸಂದರ್ಭ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ, ಶಾಸಕ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ. ಕುಮಾರ್, ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ, ಜಿಲ್ಲಾಧ್ಯಕ್ಷ ಮಂಜುನಾಥ್, ರಾಜ್ಯ ಸಹ ಕಾರ್ಯದರ್ಶಿ ಹೆಚ್.ಎಸ್. ಚೇತನ್ ಸೇರಿದಂತೆ ಅನೇಕ ಗಣ್ಯರು, ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.