ಮಡಿಕೇರಿ, ಮಾ. ೧೦: ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಮತ್ತು ಅತ್ಯುತ್ತಮ ವರದಿಗಳಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ನಡೆಯಿತು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಬೆಂಗಳೂರಿನ ವಿಜಯ ದರ್ಪಣ ಪತ್ರಿಕೆ ಸಂಪಾದಕ ಮಂಡಿಬೆಲೆ ರಾಜಣ್ಣ ಮಾತನಾಡಿ, ಪತ್ರಕರ್ತರು ತಮ್ಮ ವೃತ್ತಿಗೆ ಗೌರವ ತರುವ ಕೆಲಸವನ್ನು ಮಾಡಬೇಕು ಎಂದರು.
ಉದ್ಯಮಿ ನಾಪಂಡ ಮುತ್ತಪ್ಪ ಮಾತನಾಡಿ, ಸಾಕಷ್ಟು ಸವಲತ್ತುಗಳನ್ನು ಸರ್ಕಾರ ಪತ್ರಕರ್ತರಿಗೆ ನೀಡಿದರೂ, ಅವುಗಳಿಗೆ ವಿಧಿಸಿರುವ ಮಾನದಂಡದಿAದಾಗಿ ಅದು ಎಲ್ಲಾ ಪತ್ರಕರ್ತರಿಗೆ ಸಿಗುತ್ತಿಲ್ಲ ಎಂದರಲ್ಲದೆ ಗ್ರಾಮೀಣ ಪತ್ರಕರ್ತರಿಗೆ ವಿಶೇಷ ಮಾನದಂಡಗಳನ್ನು ಸರ್ಕಾರ ಮಾಡಬೇಕೆಂದು ಹೇಳಿದರು.
ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಮಾತನಾಡಿ, ಬರವಣಿಗೆಯನ್ನು ಸಮಾಜದ ಹಿತಕ್ಕಾಗಿ ಬಳಸಬೇಕು. ಒಗ್ಗಟ್ಟಿನಿಂದ ಯಾವುದೇ ಕೆಲಸ ಮಾಡಿದರೂ, ಅದರಿಂದ ಯಶಸ್ಸು ಸಾಧ್ಯ ಎಂದರು.
ಕೊಡಗು ಪತ್ರಿಕಾ ಭವನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ಮಾತನಾಡಿ, ಸಂಘಟನೆಗಳಲ್ಲಿ ಸದಸ್ಯರೆಲ್ಲರೂ ಒಂದಾಗಿ ಸಂಘದ ಧ್ಯೇಯೋದ್ಧೇಶಗಳ ಈಡೇರಿಕೆಗಾಗಿ ದುಡಿಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ವಹಿಸಿದ್ದರು. ವೇದಿಕೆಯಲ್ಲಿ ಪತ್ರಿಕಾಭವನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್, ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಉಪಸ್ಥಿತರಿದ್ದರು.
ಪ್ರಶಸ್ತಿ ವಿತರಣೆ; ಅತ್ಯುತ್ತಮ ರಾಜಕೀಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ‘ಪ್ರಜಾಪ್ರಭುತ್ವದ ದೇಗುಲದೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ದುಷ್ಕರ್ಮಿಗಳು’ ಎಂಬ ವರದಿಗೆ ಎಚ್.ಟಿ. ಅನಿಲ್, ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಯನ್ನು ವಿಜಯವಾಣಿಯಲ್ಲಿ ಪ್ರಕಟಗೊಂಡ ‘ಸೌಲಭ್ಯ ವಂಚಿತ ನಾಗರ ಹೊಳೆ ಆಶ್ರಮ ಶಾಲೆ’ ಎಂಬ ವರದಿಗೆ ವಿನೋದ್ ಮೂಡಗದ್ದೆ, ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿಯನ್ನು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ‘ಏಲಕ್ಕಿ ಕೃಷಿಯಲ್ಲಿ ಯಶಸ್ಸು ಕಂಡ’ ದಂಪತಿ ಎಂಬ ವರದಿಗೆ ಡಿ.ಪಿ. ಲೋಕೇಶ್, ಕ್ರೀಡಾ ವರದಿ ಪ್ರಶಸ್ತಿಯನ್ನು ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ‘ಏಷ್ಯನ್ ಗೇಮ್ಸ್ಗೆ ಪುಟ್ಟ ಜಿಲ್ಲೆ ಕೊಡಗಿನ ಕ್ರೀಡಾಪಟುಗಳು’ ಎಂಬ ವರದಿಗೆ ವಿಘ್ನೇಶ್ ಭೂತನಕಾಡು, ಸಂಘದ ಸಲಹೆಗಾರರು ಹಾಗೂ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷಿö್ಮ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ವಿಜಯವಾಣಿಯಲ್ಲಿ ಪ್ರಕಟಗೊಂಡ ‘ಆದಿವಾಸಿಗಳಿಗೆ ಬೇಕಿದೆ ಜಾಗೃತಿ ಬಾಲ್ಯವಿವಾಹ ತಂದಿಟ್ಟ ಸಂಕಷ್ಟ’ ಎಂಬ ವರದಿಗೆ ಉಷಾ ಪ್ರೀತಮ್ ಪಡೆದುಕೊಂಡರು.
ದೃಶ್ಯಮಾಧ್ಯಮ ವಿಭಾಗದಲ್ಲಿ ಮಾನವೀಯ ವರದಿ ಪ್ರಶಸ್ತಿಯನ್ನು ‘ಕಾಡಂಚಿನಿAದ ನಾಡಿಗೆ ಬಂದವರ ಶೋಚನೀಯ ಸ್ಥಿತಿ’ ಎಂಬ ವರದಿಗೆ ಕೊಡಗು ಚಾನಲ್‌ನ ಟಿ.ಜೆ. ಪ್ರವೀಣ್, ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತ ವರದಿ ಪ್ರಶಸ್ತಿಯನ್ನು ‘ಸಾಲು ಸಾಲು ರಜೆಯಲ್ಲಿ ಮಂಜಿನ ನಗರಿಯಲ್ಲಿ ಕಾಡುವ ಟ್ರಾಫಿಕ್ ಸಮಸ್ಯೆ’ ಎಂಬ ವರದಿಗೆ ಅನಿಲ್ ಹೆಚ್.ಟಿ. ಸ್ವೀಕರಿಸಿದರು.