ವೀರಾಜಪೇಟೆ, ಮಾ. ೧೦ : ಬಿಸಿಲಿನ ತಾಪಕ್ಕೆ ಬೆಟ್ಟದ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ೩ ರಿಂದ ೪ ಎಕರೆ ಪ್ರದೇಶದಲ್ಲಿ ಬೆಂಕಿ ಹರಡಿದÀ ಘಟನೆ ವೀರಾಜಪೇಟೆ ಮಲೆತಿರಿಕೆ ಬೆಟ್ಟದಲ್ಲಿ ಸಂಭವಿಸಿದೆ.
ಇAದು ಮಧ್ಯಾಹ್ನ ೨.೩೦ರ ವೇಳೆಯಲ್ಲಿ ರಸ್ತೆ ಬದಿಯಲ್ಲಿ ಅಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ನಿವಾಸಿಗಳು ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸ್ ಇಲಾಖೆ ಅಗ್ನಿಶಾಮಕ ದಳಕ್ಕೆ ಈ ಕುರಿತ ಮಾಹಿತಿಯನ್ನು ರವಾನಿಸಿದ್ದು ಅಲ್ಪಸಮಯದಲ್ಲೇ ಸ್ಥಳಕ್ಕೆ ಅಗ್ನಿಶಾಮಕದಳ, ಸಿಬ್ಬಂದಿ ತೆರಳಿ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಪುರಸಭೆಯ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸತತ ೩ ಗಂಟೆಗಳ ಕಾರ್ಯಾಚರಣೆ ಮೂಲಕÀ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ಮಾಡಲಾಯಿತು. ಈ ವೇಳೆ ಗೋಣಿಕೊಪ್ಪಲು ಅಗ್ನಿಶಾಮಕ ದಳದ ಠಾಣಾಧಿಕಾರಿ ಡಿ.ಜಿ. ಮಂಜೇಗೌಡ , ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಕೆ.ವಿ. ಶಿವರಾಂ, ಡಿ.ಆರ್.ಎಫ್.ಒ ಆನಂದ್, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಪುರಸಭಾ ಮುಖ್ಯಾಧಿಕಾರಿ ನಾಚಪ್ಪ, ನಗರ ಠಾಣೆಯ ಪ್ರಭಾರ ಠಾಣಾಧಿಕಾರಿ ವಾಣೀಶ್ರೀ ಹಾಗೂ ಪುರಸಭೆ , ಕಂದಾಯ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಹಾಜರಿದ್ದರು.