ಗೋಣಿಕೊಪ್ಪಲು, ಮಾ. ೧೦ : ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಕುಟ್ಟ ಗ್ರಾಮದ ಮುಕ್ಕಾಟಿರ ಶಿವು ಮಾದಪ್ಪ (೪೯) ನಿನ್ನೆ ರಾತ್ರಿ ಮೈಸೂರು ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು.
ದಕ್ಷಿಣ ಕೊಡಗಿನ ಶ್ರೀಮಂಗಲ, ಕುಟ್ಟ ಜಿ.ಪಂ. ಕ್ಷೇತ್ರದ ಸದಸ್ಯರಾಗಿ ಕುಟ್ಟ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿದ್ದ ಮುಕ್ಕಾಟಿರ ಶಿವು ಮಾದಪ್ಪ ಯುವ ಮುಂದಾಳುವಾಗಿ ಕಾಂಗ್ರೆಸ್ ಪಕ್ಷವನ್ನು ಕೊಡಗು ಜಿಲ್ಲೆಯಲ್ಲಿ ಮುನ್ನಡೆಸಿದ್ದರು.
ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸುದ್ದಿ ತಿಳಿಯುತ್ತಿದ್ದಂತೆಯೇ ವಿಧಾನ ಸಭೆಯಲ್ಲಿ ಅಧಿವೇಶನವನ್ನು ಬದಿಗೊತ್ತಿ ಹೆಲಿಕಾಪ್ಟರ್ ಮೂಲಕ ಹುದಿಕೇರಿ ಶಾಲಾ ಮೈದಾನಕ್ಕೆ ಆಗಮಿಸಿ ನಂತರ ವಾಹನದ ಮೂಲಕ ಕುಟ್ಟ ಗ್ರಾಮಕ್ಕೆ ತೆರಳಿ ಶಿವು ಮಾದಪ್ಪ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
ಸAತಾಪ : ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಿ.ಎಸ್. ಅರುಣ್ ಮಾಚಯ್ಯ, ಶಾಂತೆಯAಡ ವೀಣಾ ಅಚ್ಚಯ್ಯ, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್,
(ಮೊದಲ ಪುಟದಿಂದ) ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟೀರ ಕಿಲನ್ ಗಣಪತಿ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ಕುಟ್ಟಂಡ ಅಜಿತ್ ಕರುಂಬಯ್ಯ ಸೇರಿದಂತೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರುಗಳು, ವಿವಿಧ ಪಕ್ಷದ ನಾಯಕರು ಆಗಮಿಸಿ ಸಂತಾಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಬೊಟ್ಟೋಳಂಡ ಮಿಟ್ಟು ಚಂಗಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಬಿ.ಎ. ಹರೀಶ್, ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ
ಎಂ.ಬಿ. ಹಮೀದ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್. ಟಾಟೂ ಮೊಣ್ಣಪ್ಪ, ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಸೋಮವಾರಪೇಟೆ ಪ.ಪಂ. ನಾಮನಿರ್ದೇಶಿತ ಸದಸ್ಯ ಹೆಚ್.ಎ. ನಾಗರಾಜು ಸಂತಾಪ ಸೂಚಿಸಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಜನರು ತಂಡೋಪತAಡವಾಗಿ ಆಗಮಿಸಿದ್ದರು ಸಂಜೆ ನಾಲ್ಕು ಗಂಟೆಯ ಸಮಯದಲ್ಲಿ ಮನೆಯ ಅನತಿ ದೂರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.