ಮಡಿಕೇರಿ, ಮಾ. ೧೨: ಗೋಣಿಕೊಪ್ಪ ಕಾವೇರಿ ಪಾಲಿಟೆಕ್ನಿಕ್‌ನ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ತಾ. ೧೪ ರಂದು ಏಡ್ಸ್ ಜಾಗೃತಿ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಬೆಳಿಗ್ಗೆ ೧೦ ಗಂಟೆಗೆ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಕ್ತನಿಧಿ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಕರುಂಬಯ್ಯ, ಗೋಣಿಕೊಪ್ಪ ಆಸ್ಪತ್ರೆಯ ಆಪ್ತ ಸಮಾಲೋಚಕ ಎನ್.ಸಿ. ಚಂದ್ರಶೇಖರ್, ರೆಡ್ ರಿಬ್ಬನ್ ಕ್ಲಬ್ ಸಂಚಾಲಕ ಬಿ.ಎನ್. ಮುರುಳಿ, ಸದಸ್ಯರಾದ ಪ್ರಸಾದ್ ರಾವ್, ಜಿ.ಎನ್. ಮಹೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.