ಮಡಿಕೇರಿ, ಮಾ. ೧೨ : ಮಡಿಕೇರಿಯ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಈ ಬಾರಿ ರಾಮೋತ್ಸವವನ್ನು ವಿಜೃಂಭಣೆಯಿAದ ಆಚರಿಸಲು ತೀರ್ಮಾನಿಸಲಾಗಿದ್ದು, ಈ ಸಂಬAಧ ಎಲ್ಲರನ್ನೊಳಗೊಂಡ ರಾಮೋತ್ಸವ ಸಮಿತಿಯನ್ನು ರಚಿಸಲಾಗಿದ್ದು, ಉತ್ಸವಕ್ಕೆ ಅದ್ದೂರಿ ಸಿದ್ಧತೆ ನಡೆದಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೋದಂಡ ರಾಮೋತ್ಸವ ಸಮಿತಿ ಅಧ್ಯಕ್ಷ ಕೆ.ಎಂ. ಗಣೇಶ್; ಈ ಬಾರಿ ವಿಶೇಷವಾಗಿ ಎಲ್ಲ ಸಮುದಾಯದವರುಗಳನ್ನೊಳಗೊಂಡು ಮಡಿಕೇರಿ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದವರನ್ನು ಸೇರಿಸಿಕೊಂಡು ವಿಜೃಂಭಣೆಯಿAದ ಆಚರಣೆ ಮಾಡುವ ಸಲುವಾಗಿ ಎಲ್ಲರನ್ನೂ ಸೇರಿಸಿಕೊಂಡು ಸಮಿತಿ ರಚನೆ ಮಾಡಲಾಗಿದೆ. ೪-೫ ಬಾರಿ ಸಮಿತಿ ಸಭೆ ಸೇರಿ ಉತ್ಸವವನ್ನು ಯಶಸ್ವಿಯಾಗಿ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಶ್ರೀ ರಾಮಚಂದ್ರನಿಗೆ ಮೇಲು ಕೀಳು, ಜಾತಿ ಮತ ಭೇದವಿಲ್ಲ. ರಾಮನ ಈ ಆದರ್ಶವನ್ನು ಮೂಲವಾಗಿರಿಸಿಕೊಂಡು ಸರ್ವ ಸಮುದಾಯದ ಮಂದಿ ಒಗ್ಗೂಡಿ ಶ್ರೀ ರಾಮ ನವಮಿಯಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯಿAದ ನಡೆಸಲಾಗುವುದು.
ಏ. ೫ ಮತ್ತು ೬ ರಂದು ಅದ್ಧೂರಿಯಾಗಿ ಕೊಡಗು ಜಿಲ್ಲೆಯಲ್ಲೇ ಮಾದರಿ ರಾಮೋತ್ಸವವನ್ನು ಆಚರಿಸಲು ತಯಾರಿ ನಡೆಸಲಾಗಿದೆ.
ಶ್ರೀ ರಾಮ ಮೆಟ್ಟಿದ ಈ ಮಣ್ಣಿನಲ್ಲಿ ಸರ್ವರೂ ಒಗ್ಗಟ್ಟಿನಿಂದ ಜೀವನ ಸಾಗಿಸಬೇಕಾಗಿದೆ. ಸರ್ವ ಜನಾಂಗಗಳ ಶಾಂತಿಯ ತೋಟದ ಹೂವುಗಳು ಶ್ರೀರಾಮನಿಗೆ ಅರ್ಪಣೆ ಯಾಗಬೇಕಾಗಿದೆ. ಸಮುದಾಯ ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳು ಈ ರಾಮೋತ್ಸವದ ಮೂಲಕ ದೂರವಾಗಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸುವ ಉದ್ದೇಶದಿಂದ ಪ್ರತಿಯೊಂದು ಸಮುದಾಯದವರನ್ನು ಒಗ್ಗೂಡಿಸಿಕೊಂಡು ಹೊಸ ಪರಿಕಲ್ಪನೆಯೊಂದಿಗೆ ೩೫ನೇ ವರ್ಷದ ರಾಮೋತ್ಸವವನ್ನು ಆಚರಿಸಲಾಗುತ್ತಿದೆ. ಸುಮಾರು ೨೫ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದ್ದು, ಉಪಸಮಿತಿಗಳ ಮೂಲಕ ಎರಡು ದಿನಗಳ ಯಶಸ್ವಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ರಾಮನ ಮೆರವಣಿಗೆ
ಏ. ೫ ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಶ್ರೀ ಕೋದಂಡರಾಮ ದೇವಾಲಯದವರೆಗೆ ರಾಮದೇವರ ಮೆರವಣಿಗೆ ನಡೆಯಲಿದೆ. ಭಜನಾ ತಂಡ, ಚಂಡೆ ವಾದ್ಯ, ವಿವಿಧ ಕಲಾ ತಂಡಗಳು, ಕಲಶ ಹೊತ್ತ ಮಹಿಳೆಯರು ಹಾಗೂ ಭಕ್ತರು ವಾದ್ಯಗೋಷ್ಠಿಗಳೊಂದಿಗೆ ನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ತೆರಳಲಿದ್ದಾರೆ.
ಮೆರವಣಿಗೆ ಸಮಿತಿ ಅಧ್ಯಕ್ಷರಾಗಿ ಪರÀಮೇಶ್, ಕಾರ್ಯಾಧ್ಯಕ್ಷರಾಗಿ ಅರುಣ್ ಶೆಟ್ಟಿ ಮೊದಲಾದವರು ಜವಾಬ್ದಾರಿಕೆ ವಹಿಸಿಕೊಂಡಿದ್ದಾರೆ. ಮೆರವಣಿಗೆÀಯು ಶ್ರೀ ಕೋದಂಡ ರಾಮ ಟ್ರಸ್ಟ್ನ ಸಹಯೋಗದೊಂದಿಗೆ ನಡೆಯಲಿದೆ.
ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಅಧ್ಯಕ್ಷ ಕೆ.ಕೆ. ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಜನೆ ನಡೆಯಲಿದೆ. ವಿವಿಧ ಮಹಿಳಾ ಸಮಿತಿಗಳ ಮುಂದಾಳತ್ವದಲ್ಲಿ ಕಲಶ ಮತ್ತು ಮಹಿಳಾ ತಂಡಗಳ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು.
(ಮೊದಲ ಪುಟದಿಂದ)
ಸಾAಸ್ಕೃತಿಕ ಸಂಜೆ
ಅAದು ಸಂಜೆ ಮೆರವಣಿಗೆ ದೇವಾಲಯವನ್ನು ತಲುಪಿದ ನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದ್ದು, ಎಲ್ಲಾ ಸಮುದಾಯಗಳ ಸಾಂಪ್ರದಾಯಿಕ ಕಲೆಗಳು ಪ್ರದರ್ಶನಗೊಳ್ಳಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಏ. ೫ ಮತ್ತು ೬ ರಂದು ಎರಡು ದಿನ ಸಂಜೆ ನಡೆಯಲಿದ್ದು, ಆಸಕ್ತ ತಂಡಗಳು ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಮಹೇಶ್ (೯೬೬೩೩೨೬೨೦೪) ಅವರನ್ನು ತಾ. ೨೫ ರೊಳಗೆ ಸಂಪರ್ಕಿಸುವAತೆ ಕೆ.ಎಂ. ಗಣೇಶ್ ತಿಳಿಸಿದರು.
ಪೂಜೆ - ಅನ್ನದಾನ
ಏ.೬ ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರತಿಷ್ಠಾಪನಾ ಉತ್ಸವ ಮತ್ತು ರಾಮೋತ್ಸವದ ಪ್ರಯುಕ್ತ ವಿಶೇಷ ಪೂಜೆ ಮತ್ತು ಮಹಾಪೂಜೆ ನಡೆಯಲಿದೆ. ಅಂದು ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಏ. ೫ ರಂದು ಸಂಜೆ ಮೆರವಣಿಗೆಯ ನಂತರ ಲಘು ಉಪಹಾರ ನಂತರ ಅನ್ನದಾನ ನೆರವೇರಲಿದೆ. ಸುಧಾಕರ್ ಮತ್ತು ತಂಡ ಆಹಾರ ಸಮಿತಿಯ ನೇತೃತ್ವ ವಹಿಸಿಕೊಂಡಿದೆ ಎಂದರು.
ಕಳೆದ ೩೪ ವರ್ಷಗಳಿಂದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ರಾಮನವಮಿಯಂದು ರಾಮೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಹೊಸ ಪರಿಕಲ್ಪನೆಯೊಂದಿಗೆ ಎರಡು ದಿನಗಳ ಕಾಲ ರಾಮೋತ್ಸವ ನಡೆಯಲಿದ್ದು, ಇದು ಮಲ್ಲಿಕಾರ್ಜುನ ನಗರಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಸೀಮಿತವಾಗಿ ಆಯೋಜಿಸಲಾಗುತ್ತಿದೆ. ಮುಂದಿನ ವರ್ಷವೂ ಇದೇ ರೀತಿಯಲ್ಲಿ ವಿಜೃಂಭಣೆಯ ರಾಮೋತ್ಸವವನ್ನು ಆಚರಿಸಲಾಗುವುದು ಎಂದು ಮಾಹಿತಿ ನೀಡಿದರು.
ಧಾರ್ಮಿಕ ಕಾರ್ಯಕ್ರಮ
ಸಮಿತಿಯ ಸಲಹೆಗಾರ ಎಸ್.ಎಸ್. ಸಂಪತ್ ಕುಮಾರ್ ಮಾತನಾಡಿ, ನಗರದ ಸಾರ್ವಜನಿಕರೆಲ್ಲರೂ ಸೇರಿ ರಾಮೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಅಧ್ಯಕ್ಷ ಕೆ.ಎಂ. ಗಣೇಶ್ ಅವರ ಪರಿಕಲ್ಪನೆಯಂತೆ ಇದೊಂದು ದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಇನ್ನು ಮುಂದೆಯೂ ವಿಶಿಷ್ಟ ಕಾರ್ಯಕ್ರಮಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ನಡೆಸಲು ಶ್ರೀ ಕೋದಂಡ ರಾಮೋತ್ಸವ ಸಮಿತಿ ನಿರ್ಧರಿಸಿದ್ದು, ನಿಧಿ ಸಂಗ್ರಹವೂ ನಡೆಯಲಿದೆ ಎಂದರು.
ನಗರ ಅಲಂಕಾರ
ಉಪಾಧ್ಯಕ್ಷ ನವೀನ್ ಅಂಬೆಕಲ್ ಮಾತನಾಡಿ, ರಾಮೋತ್ಸವವನ್ನು ಈ ಬಾರಿ ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸೇರಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಶ್ರೀಕೋದಂಡ ರಾಮ ದೇವಾಲಯದವರೆಗೆ ನಗರದ ಮುಖ್ಯ ಬೀದಿಗಳು ದಸರಾ ಮಾದರಿಯಲ್ಲಿ ವಿದ್ಯುತ್ ಅಲಂಕಾರದಿAದ ಕಂಗೊಳಿಸಲಿವೆ ಎಂದು ಹೇಳಿದರು.
ಜಿಲ್ಲೆಗೆ ಮಾದರಿ
ಶ್ರೀ ಕೋದಂಡ ರಾಮ ಟ್ರಸ್ಟ್ನ ಮಾಜಿ ಅಧ್ಯಕ್ಷ ಮಂಜುನಾಥ್ ಹೆಚ್. ಮಾತನಾಡಿ, ದಾನಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಭವ್ಯ ಮಂದಿರ ನಿರ್ಮಾಣಗೊಂಡು ಎರಡು ವರ್ಷವಾಗಿದೆ. ೩೫ನೇ ವರ್ಷದ ಅದ್ದೂರಿಯ ರಾಮೋತ್ಸವದೊಂದಿಗೆ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವೂ ನಡೆಯಲಿದೆ. ಶ್ರೀರಾಮನಿಗೆ ಮೇಲು, ಕೀಳೆನ್ನುವ ಭಾವನೆ ಇಲ್ಲ, ಶ್ರೀರಾಮನ ಮಾದರಿಯಲ್ಲಿ ರಾಮೋತ್ಸವವೂ ನಡೆಯಲಿದ್ದು, ಎಲ್ಲಾ ಸಮುದಾಯಗಳ ಒಗ್ಗಟ್ಟು ಇಡೀ ಜಿಲ್ಲೆಗೆ ಮಾದರಿಯಾಗಲಿದೆ ಎಂದು ತಿಳಿಸಿದರು.
ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಂಗಳೂರು ಸೇರಿದಂತೆ ವಿವಿಧ ಭಾಗದ ಕಲಾತಂಡಗಳು ಭಾಗವಹಿಸಲಿವೆ. ಸ್ಥಳೀಯ ಕಲಾ ತಂಡಗಳಿಗೆ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದ ಅವರು, ಅನ್ನದಾನಕ್ಕೆ ಸಹಕಾರ ನೀಡುವ ದಾನಿಗಳು ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ (೯೮೮೦೭೭೮೦೪೭) ಅವರನ್ನು ಸಂಪರ್ಕಿಸುವAತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಶ್ರೀ ಕೋದಂಡ ರಾಮ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಿತಿಯ ಸದಸ್ಯ ಹೆಚ್.ಎನ್. ನಂಜುAಡ ಉಪಸ್ಥಿತರಿದ್ದರು.