ಶನಿವಾರಸಂತೆ, ಮಾ. ೧೨: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನ ೨೦೨೪-೨೫ನೇ ಸಾಲಿನ ರಾಷ್ಟಿçÃಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ತಾ. ೧೪ ರಿಂದ ತಾ. ೨೦ ರವರೆಗೆ ಕಿತ್ತೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ತಾ. ೧೪ ರಂದು ಮಧ್ಯಾಹ್ನ ೨.೩೦ಕ್ಕೆ ರಾಷ್ಟಿçÃಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ಹಾಸನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ವಸಂತ್ ಕುಮಾರ್ ಎಂ. ದೊಡ್ಡಮಗ್ಗೆ ಉದ್ಘಾಟಿಸಲಿದ್ದಾರೆ. ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಂ. ಜಗನ್‌ಪಾಲ್ ಅಧ್ಯಕ್ಷತೆ ವಹಿಸಲಿದ್ದು, ಶಿಬಿರಾಧಿಕಾರಿ ಎಂ.ಎನ್. ಹರೀಶ್ ಪ್ರಾಸ್ತಾವಿಕ ನುಡಿಯಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಂ.ಯು. ಮಹಮ್ಮದ್ ಪಾಷ, ಕಾರ್ಯದರ್ಶಿ ಎನ್.ಕೆ. ಅಪ್ಪಸ್ವಾಮಿ, ಪ್ರಾಂಶುಪಾಲ ಈ.ಎಂ. ದಯಾನಂದ್, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಬಿ.ಸಿ. ರೇಖಾ, ಸಹಶಿಕ್ಷಕಿ ಹೆಚ್.ಕೆ. ವಿಶಾಲಾಕ್ಷಿ, ಹಂಡ್ಲಿ ಗ್ರಾಮ ಪಂಚಾಯಿತಿ ಪಿಡಿಓ ಹೆಚ್.ಎಸ್. ಹರೀಶ್, ಪತ್ರಕರ್ತ ಸುರೇಶ್ ಚೆರಿಯಮನೆ, ಪ.ಪೂ. ಕಾಲೇಜು ಪ್ರಾಂಶುಪಾಲ ಎಸ್.ಜೆ. ಅಶೋಕ್, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.