ಮಡಿಕೇರಿ: ಸಂಪಾಜೆ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸ್ವೆಟರ್‌ಗಳನ್ನು ವಿತರಿಸಿದರು.
ಕೊಯನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿತರಣೆ ಕಾರ್ಯಕ್ರಮ ನಡೆಯಿತು. ಸಂಪಾಜೆ ಗ್ರಾಮದ ೫ ಅಂಗನವಾಡಿ ವಿದ್ಯಾರ್ಥಿಗಳಿಗೂ ಸ್ವೆಟರ್ ವಿತರಿಸಲಾಯಿತು.
ಗುಡ್ಡೆಹೊಸೂರು: ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರು ಸ್ವೆಟರ್‌ಗಳನ್ನು ವಿತರಿಸಿದರು.
ಈ ಸಂದರ್ಭ ಇಲ್ಲಿನ ಗ್ರಾ.ಪಂ. ಅಧ್ಯಕ್ಷ ಪ್ರವೀಣ್, ಸದಸ್ಯರಾದ ಬಿ.ಎಂ. ಪ್ರದೀಪ್, ಶಿವಪ್ಪ, ಶಕ್ತಿ ಕೇಂದ್ರದ ಪ್ರಮುಖ ಕುಡೆಕಲ್ ನಿತ್ಯನಂದ ಸದಸ್ಯರಾದ ಎಂ.ಆರ್ ಮಾದಪ್ಪ ಸುಮಾ, ಸೌಮ್ಯ ಗಂಗಮ್ಮ, ಪಕ್ಷದ ಪ್ರಮುಖರಾದ ಗೌತಮ್, ಶಕ್ತಿ ಕೇಂದ್ರದ ಪ್ರಮುಖರಾದ ಬಿ.ಎನ್, ಶಶಿಕುಮಾರ್, ಶಾಲಾ ಶಿಕ್ಷಕ ವೃಂದ ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.ನಾಪೋಕ್ಲು: ವಿದ್ಯಾರ್ಥಿಗಳೇ ಸಮಾಜದ ಆಸ್ತಿ ಎಂದು ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಸೀರ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಡಿಕೇರಿ ವಲಯ, ಜಿಲ್ಲಾ ಪಂಚಾಯಿತಿ ಕೊಡಗು, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಕಡಗದಾಳು ಇವರುಗಳ ಸಂಯುಕ್ತ ಆಶ್ರಯ ದಲ್ಲಿ ಕಡಗದಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರೌಢಾವಸ್ಥೆ ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ವಯಸ್ಸಿನಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳು ವುದು ತುಂಬಾ ಅನಿವಾರ್ಯತೆ ಇದೆ ಎಂದು ತಮ್ಮ ಅನಿಸಿಕೆ ಕಷ್ಟಪಡಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಶಿಬಿರಾಧಿಕಾರಿ, ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ನಂದಕುಮಾರ್ ಪಿ.ಪಿ. ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಗದಾಳು ಒಕ್ಕೂಟದ ಅಧ್ಯಕ್ಷರು ಹಾಗೂ ನ್ಯಾಯವಾದಿಗಳಾದ ಅರುಣ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕಿನ ಲೆಕ್ಕ ಪರಿಶೋಧಕರಾದ ಶ್ರೀನಿವಾಸ್, ಕಡಗದಾಳು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡರು.
ಶಾಲಾ ಶಿಕ್ಷಕಿ ಆರತಿ ಸ್ವಾಗತಿಸಿ, ನಿರೂಪಿಸಿ, ವಿದ್ಯಾರ್ಥಿನಿ ಹರ್ಷಿತಾ ವಂದಿಸಿದರು.ಕೂಡಿಗೆ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಅನಾಹತ ಯುನೈಟೆಡ್ ಎಫರ್ಟ್ಸ್ ಫೌಂಡೇಶನ್ ಸಂಸ್ಥೆಯ ಸಹಾಭಾಗಿತ್ವದಲ್ಲಿ ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವೃತ್ತಿ ವಲಯಗಳ ಪರಿಚಯಿಸುವಿಕೆಗೆ ವಿದ್ಯಾರ್ಥಿಗಳಿಂದ ಕೆರಿಯರ್ ಮೇಳವನ್ನು ಆಯೋಜಿಸಲಾಗಿತ್ತು.
ಮಕ್ಕಳು ತಾವು ತಿಳಿದುಕೊಂಡ ೧೨ ವೃತ್ತಿ ವಲಯಗಳಲ್ಲಿ ಬರುವ ವೃತ್ತಿಗಳ ಬಗ್ಗೆ ಹಾಗೂ ವೃತ್ತಿ ಆಯ್ಕೆಗಳ ಶೈಕ್ಷಣಿಕ ಮಾರ್ಗದರ್ಶನಗಳ ಬಗ್ಗೆ ಕ್ರಿಯಾಶೀಲವಾಗಿರ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಾಯೋಗಿಕವಾಗಿ ಸ್ಟಾಲ್‌ಗಳ ಮಾದರಿಗಳನ್ನು ಮತ್ತು ನಾಟಕಾಭಿನಯ ರೂಪದಲ್ಲಿ ತಿಳಿಸಿದರು.
ಕಾರ್ಯಕ್ರಮ ಉದ್ಘಾಟನೆಯನ್ನು ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿದ್ದ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ರವರು ಮಾತನಾಡಿ, ಮಕ್ಕಳಿಗೆ ವೃತ್ತಿ ಯೋಜನೆ ತುಂಬಾ ಅವಶ್ಯಕವಾಗಿದ್ದು ಈ ಹಂತದಲ್ಲೇ ಆಸಕ್ತಿಗನುಗುಣವಾಗಿ ವೃತ್ತಿ ಆಯ್ಕೆಗಳ ಶೈಕ್ಷಣಿಕ ಹಾದಿಗಳ ಬಗ್ಗೆ ತಿಳಿದುಕೊಳ್ಳುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ತಿಳಿಸಿದರು.
ಶಭಾನ ಮಾತನಾಡಿ, ವಿದ್ಯಾರ್ಥಿಗಳ ಕನಸಿನ ವೃತ್ತಿಯು ಸಕಾರಾತ್ಮಕವಾಗಬೇಕಾದರೆ ವೃತ್ತಿ ಯೋಜನೆ ತರಬೇತಿ ಹಾಗೂ ಕೆÀರಿಯರ್ ಮೇಳ ಸಹಕಾರಿಯಾಗಲಿವೆ. ವಿದ್ಯಾರ್ಥಿಗಳ ಭವಿಷ್ಯದ ವೃತ್ತಿಗಳು ಅವುಗಳ ಆಯ್ಕೆಯಾದ ವಿಧಾನಗಳು ಪ್ರೌಢ ಹಂತದಲ್ಲೇ ಮಕ್ಕಳು ಮನನ ಮಾಡಿಕೊಳ್ಳುವುದರಿಂದ ಮಕ್ಕಳ ಮುಂದಿನ ಆಯ್ಕೆಯ ಬಗ್ಗೆ ಪೋಷಕರಲ್ಲಿರುವ ಭಯ ಆತಂಕಗಳು ದೂರವಾಗಿ ಮಕ್ಕಳ ಕಾರ್ಯಸಕ್ತಿಗಳಿಗೆ ಹೊಂದಿಕೆಯಾಗುವ ಕೆಲಸಗಳನ್ನು ಆಯ್ಕೆ ಮಾಡಿಕೊಳ್ಳಲು ಸಹಕಾರ ನೀಡಲು ವೃತ್ತಿ ಯೋಜನೆಯು ಉತ್ತಮವಾಗಿದೆ ಎಂದರು. ಪೊನ್ನಂಪೇಟೆ : ವೀರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಕ್ಲಸ್ಟರ್‌ನ ಟಿ. ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ನೀಲನಕ್ಷೆ ಮತ್ತು ಪ್ರಶ್ನೆಪತ್ರಿಕೆ ತಯಾರಿಕಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಸಮನ್ವಯಾಧಿಕಾರಿ ಬಿಂದು ಕೆ.ಆರ್. ಅವರು ಗಿಡಕ್ಕೆ ನೀರೆರೆಯುವ ಮೂಲಕ ನೆರವೇರಿಸಿದರು. ನಂತರ ಮಾತನಾಡಿದ ಅವರು, ನೀಲನಕ್ಷೆಯ ಆಧಾರಿತ ಪ್ರಶ್ನೆ ಪತ್ರಿಕೆ ರಚಿಸುವುದರಿಂದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳ ಸಂಪೂರ್ಣ ಕಲಿಕಾ ಗುಣಮಟ್ಟವನ್ನು ತಿಳಿಯಲು ಸಹಕಾರಿಯಾಗುತ್ತದೆ. ಇಂದಿನ ದಿನಮಾನಗಳಲ್ಲಿ ಇಂತಹ ಕಾರ್ಯಾ ಗಾರಗಳ ಅವಶ್ಯಕತೆ ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿ ವಾಮನ ಟಿ.ಕೆ. ಅವರು ಕಾರ್ಯಾಗಾರದ ಕುರಿತು ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಕುಟ್ಟ ಸ.ಹಿ.ಪ್ರಾ. ಶಾಲೆ ಶಿಕ್ಷಕಿ ಸಜನಿ ಎಂ.ಎನ್., ಕಿರುಗೂರು ಸ.ಹಿ.ಪ್ರಾ. ಶಾಲೆಯ ಶಿಕ್ಷಕಿಯರಾದ ಶ್ರೀಜಾ ಎಂ.ಎನ್. ಮತ್ತು ವೀಣಾ ಇವರುಗಳು ಎಲ್ಲಾ ವಿಷಯಗಳಿಗೆ ಸಂಬAಧಿಸಿ ದಂತೆ ನೀಲನಕ್ಷೆ ಮತ್ತು ಪ್ರಶ್ನೆ ಪತ್ರಿಕೆ ತಯಾರಿಕೆಯ ಎಂಟು ಹಂತಗಳನ್ನು ಒಳಗೊಂಡAತೆ, ಮಾದರಿ ನೀಲ ನಕ್ಷೆ ಮತ್ತು ಪ್ರಶ್ನೆ ಪತ್ರಿಕೆಯನ್ನು ರಚಿಸುವ ವಿಧಾನಗಳನ್ನು ವಿವರಿಸಿದರು. ನಂತರ ಶಿಕ್ಷಕರುಗಳ ೬ ಗುಂಪುಗಳನ್ನು ರಚಿಸಿ ಪ್ರತಿಯೊಂದು ಗುಂಪಿನಿAದ ಎಲ್ಲಾ ವಿಷಯಕ್ಕೆ ಸಂಬAಧಿಸಿದAತೆ ನೀಲನಕ್ಷೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ರಚಿಸಿ ಮಂಡಿಸಿ ವಿಮರ್ಶಿಸಿದರು. ಕಾರ್ಯಾಗಾರದಲ್ಲಿ ಕ್ಲಸ್ಟರ್‌ನ ಎಲ್ಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು, ಕುಟ್ಟ ಕ್ಲಸ್ಟರ್ ಸಿಆರ್‌ಪಿ ಮುರುಗನ್ ಭಾಗವಹಿಸಿದ್ದರು.
ಟಿ. ಶೆಟ್ಟಿಗೇರಿ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಸೌಮ್ಯ ಎಂ.ಬಿ. ಸ್ವಾಗತಿಸಿ, ಟಿ. ಶೆಟ್ಟಿಗೇರಿ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ರಾಜೇಶ್ವರಿ ಪಿ.ಎ. ನಿರೂಪಿಸಿ, ವಂದಿಸಿದರು.ಕಡAಗ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ನಿವೃತ್ತಿ ಹೊಂದಿದ ಶಾಂತಿ ಕುಮಾರಿ ಪಿ.ಎಂ. ಅವರನ್ನು ಬೀಳ್ಕೊಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಫಾತಿಮಾ ವಹಿಸಿದ್ದರು. ಶಾಲಾ ಶಿಕ್ಷಕರು ಮುಖ್ಯ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡುವುದರ ಮೂಲಕ ಬಿಳ್ಕೊಟ್ಟರು.
ಕಾರ್ಯಕ್ರಮದಲ್ಲಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿ ಕಾವೇರಮ್ಮ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಪಂಚಾಯತಿ ಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಅಧ್ಯಕ್ಷ ಮೋಹನ್ ಪೆರಾಜೆ, ಪೂರ್ಣೇಶ್, ಪ್ರೇಮಕುಮಾರಿ, ದೇಚಮ್ಮ ಮತ್ತು ಶಾಲಾ ಶಿಕ್ಷಕ ವೃಂದದವರು, ಪೋಷಕರು, ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಚೆಯ್ಯಂಡಾಣೆ : ವೀರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ. ಬಾಲಕರ ಮತ್ತು ಬಾಲಕಿಯರ ನಿಲಯದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಸಂಭ್ರಮದಿAದ ನಡೆಯಿತು.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಪುರಸಭೆ ಸದಸ್ಯರಾದ ಮೊಹಮ್ಮದ್ ರಾಫಿ, ನಿವೃತ್ತ ಶಿಕ್ಷಕ ಮಂಜುನಾಥ್, ಮೂರ್ನಾಡುವಿನ ಸಾಹಿತಿ ಶಿಕ್ಷಕಿ ರಮ್ಯ ಅವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.
ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಪರೀಕ್ಷೆ ಸಿದ್ಧತೆ, ಭವಿಷ್ಯದ ಕುರಿತು, ಆರ್ಥಿಕ ಸಬಲೀಕರಣ, ಶಿಕ್ಷಣ, ಆರೋಗ್ಯದ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿ ನಿಲಯದ ವಾರ್ಡನ್ ಸುಮಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಅತಿಥಿಗಳು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ವಿದ್ಯಾರ್ಥಿನಿ ಸಂಜನಾ ಸ್ವಾಗತಿಸಿ, ಅರ್ಶಿತಾ ನಿರೂಪಿಸಿ, ಸೀತಮ್ಮ ವಂದಿಸಿದರು.ಕುಶಾಲನಗರ: ರಾಷ್ಟಿçÃಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಗಳ ಮೂಲಕ ಸಮಾಜದ ಮುಖ್ಯ ವಾಹಿನಿಯ ಬಗ್ಗೆ ಅರಿವು ಪಡೆಯುವ ಅವಕಾಶಗಳು ಹೇರಳವಾಗಿದೆ ಎಂದು ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್ ವಿ ಗಂಗಾಧರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಸಮೀಪದ ಚಿಕ್ಕ ಅಳುವಾರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ೨೦೨೪-೨೫ ರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪರಿಸರ ಉಳಿಸುವಲ್ಲಿ ಯುವ ಜನತೆಯ ಪಾತ್ರ ವಿಷಯದ ಮೇಲೆ ಉಪನ್ಯಾಸ ನೀಡಿದ ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ ಎನ್ ಚಂದ್ರಮೋಹನ್, ಪರಿಸರವನ್ನು ತಮ್ಮ ಅವಿಭಾಜ್ಯ ಅಂಗವೆAದು ಪರಿಗಣಿಸುವುದು ಪ್ರತಿಯೊಬ್ಬರ ಆದ್ಯ ಜವಾಬ್ದಾರಿಯಾಗಿದೆ.
ಜಲ ಮೂಲಗಳು ಪ್ರಕೃತಿಯನ್ನು ಸಂರಕ್ಷಿಸುವ ಮೂಲಕ ಅದನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಎಲ್ಲರ ಹೊಣೆಯಾಗಿದೆ ಎಂದರು.
ಸರಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಸತೀಶ್ ಕಾಳೇಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಬಿರದಲ್ಲಿ ಜೀವನದ ಪಾಠ ಕಲಿಯಲು ಸಾಧ್ಯ ಎಂದ ಅವರು ಶಿಬಿರಾರ್ಥಿಗಳಿಗೆ ಶುಭ ಕೋರಿದರು.
ತೊರೆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಕೆ ಬಿ ದೇವರಾಜು ಮತ್ತು ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಮಾತನಾಡಿದರು. ಕಾರ್ಯಕ್ರಮ ಅಧಿಕಾರಿ ಜಿ ಜಯಣ್ಣ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಬಿರಾಧಿಕಾರಿ ಗಳಾದ ಕೆ ಪಿ ವಿಜಯ್, ಸಹ ಶಿಬಿರ ಅಧಿಕಾರಿಗಳಾದ ಭಾಸ್ಕರ್, ಸಿ.ಎಂ. ರಾಜೇಶ್ ಮತ್ತಿತರರು ಇದ್ದರು.
ಒಂದು ವಾರಗಳ ಕಾಲ ನಡೆಯಲಿರುವ ಶಿಬಿರದಲ್ಲಿ ಶ್ರಮದಾನ, ಜನ ಜಾಗೃತಿ ಕಾರ್ಯಕ್ರಮ, ವ್ಯಕ್ತಿತ್ವ ವಿಕಸನ ತರಬೇತಿ, ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾರ್ಯಕ್ರಮ ಅಧಿಕಾರಿ ಜಯಣ್ಣ ಅವರು ತಿಳಿಸಿದರು. ಶಿಬಿರದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.
ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶೋಭಾ ಪ್ರಕಾಶ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿ ಪಿ ಧರ್ಮ, ಸ್ಥಳೀಯ ಸಂಘ ಸಂಸ್ಥೆಗಳ ಪ್ರಮುಖರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಈ ಸಂದರ್ಭ ಉಪಸ್ಥಿತರಿದ್ದರು.ವೀರಾಜಪೇಟೆ: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ವೀರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮುಖ್ಯಸ್ಥೆ ಪೂಜಾ ಸಜೇಶ್ ಅಭಿಪ್ರಾಯಪಟ್ಟರು.
ಹೆಗ್ಗಳ ಗ್ರಾಮ ಸರಕಾರಿ ಶಾಲೆಯಲ್ಲಿ ನಡೆದ ವೀರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಮದಲೈ ಮುತ್ತು, ಗ್ರಾಮದ ಸರ್ವ ಜನರ ಸಹಕಾರದಿಂದ ಶಿಬಿರವು ಯಶಸ್ವಿಯಾಗಿ ನಡೆದಿದೆ. ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತದನ್ನು ಜೀವನದಲ್ಲಿ ಅಳವಡಿಸುವುದರ ಮೂಲಕ ಶಿಸ್ತು ಬದ್ದ ಜೀವನವನ್ನು ನಡೆಸಿ ಎಂದರು.
ಸ್ಥಳೀಯರು ಹಾಗೂ ಭೂ ಸೇನೆಯ ನಿವೃತ ಕ್ಯಾಪ್ಟನ್ ಬಿ.ವಿ. ಭವಾನಿಶಂಕರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ದೃಢ ನಿರ್ಧಾರ ಕೈಗೊಳ್ಳಲು ಇಂತಹ ಶಿಬಿರಗಳು ಪ್ರಮುಖವಾಗಿದೆ. ವಿದ್ಯಾರ್ಥಿಗಳು ಶಿಸ್ತು ಹಾಗೂ ಪ್ರಾಮಾಣಿಕತೆ ಕಲಿಯಲು ಎನ್‌ಎಸ್‌ಎಸ್ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಮತ್ತೋರ್ವ ಅತಿಥಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದ ಸೇವೆ ಮಾಡಲು ಎನ್‌ಎಸ್‌ಎಸ್ ಉತ್ತಮ ಅವಕಾಶವನ್ನು ನೀಡುತ್ತದೆ. ಉತ್ತಮ ಆರೋಗ್ಯ, ತ್ಯಾಗದ ಮನೋಭಾವನೆ, ಮಾಡುವ ಕೆಲಸದಲ್ಲಿ ಗೌರವವಿದ್ದಲ್ಲಿ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ. ವಿದ್ಯಾರ್ಥಿ ದಿಸೆಯಿಂದಲೇ ಉತ್ತಮ ಸಂವಹನ ಕೌಶಲ್ಯ ಹಾಗೂ ವೃತ್ತಿ ಕೌಶಲ್ಯಗಳನ್ನು ಅಳವಡಿಸಿಕೊಳ್ಳಿ ಎಂದರು.
ಬೇಟೋಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಮಣಿ ಶಿಬಿರದಲ್ಲಿ ವಿದ್ಯಾರ್ಥಿಗಳು ಮಾಡಿದ ಶ್ರಮದಾನ, ಸ್ವಚ್ಛತಾ ಅಭಿಯಾನ, ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸ.ಹಿ.ಪ್ರಾ. ಶಾಲೆ ಹೆಗ್ಗಳದ ಮುಖ್ಯ ಶಿಕ್ಷಕಿ ಹೇಮಲತಾ, ಅಧ್ಯಕ್ಷತೆ ವಹಿಸಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿದರು.
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ ಗುಂಪುಗಳಿಗೆ ಅತಿಥಿಗಳು ಬಹುಮಾನ ನೀಡಿದರು. ನಿವೃತ್ತ ಕ್ಯಾಪ್ಟನ್ ಭವಾನಿಶಂಕರ್ ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಸ್ವಾಮಿ ಜಗದತ್ಮಾನಂದಾಜಿ ಅವರ ಬದುಕಲು ಕಲಿಯಿರಿ ಪುಸ್ತಕ ನೀಡಿದರು. ಎನ್‌ಎಸ್‌ಎಸ್ ಘಟಕದ ಹಾಗೂ ತಂಡಗಳ ನಾಯಕರು ಶಿಬಿರದ ಅನುಭವವನ್ನು ಹಂಚಿಕೊAಡರು. ಈ ಸಂದರ್ಭದಲ್ಲಿ ನಿವೃತ ಕ್ಯಾಪ್ಟನ್ ಬಿ.ವಿ. ಭವಾನಿ ಶಂಕರ್, ಪೂಜಾ ಸಜೇಶ್, ಹೇಮಲತ, ಹಾಗೂ ರಾಜೇಶ್ ಬಿ.ಆರ್. ಅವರನ್ನು ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಬಿ.ಎನ್. ಶಾಂತಿಭೂಷಣ್, ಎಸ್‌ಡಿಎಂಸಿ ಅಧ್ಯಕ್ಷ ರಾಜೇಶ್, ಉಪನ್ಯಾಸಕಿ ವಿಲೀನ, ಬೆಟೋಳಿ ಗ್ರಾಮ ಪಂಚಾಯತ್ ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಎಲ್ಲಾ ಸ್ವಯಂ ಸೇವಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.