ಮಡಿಕೇರಿ, ಮಾ. ೧೫: ಕೊಡವ ಕೌಟುಂಬಿಕ ಹಾಕಿ ಉತ್ಸವ ಪ್ರಸಕ್ತ ವರ್ಷ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಈ ಉತ್ಸಾಹಕ್ಕೆ ಪೂರಕವೆಂಬAತೆ ಈ ಬಾರಿ ಹಾಕಿನಮ್ಮೆಗೆ ದಾಖಲೆಯ ಕುಟುಂಬಗಳು ಹೆಸರು ನೋಂದಾಯಿಸಿಕೊAಡಿರುವುದು ವಿಶೇಷವಾಗಿದೆ. ಈಗಾಗಲೇ ೩೭೦ ಕುಟುಂಬ ಹೆಸರು ದಾಖಲಿಸಿ ಕೊಂಡಿದ್ದು, ಇನ್ನೂ ೩ ದಿನಗಳ ತನಕ (ತಾ.೧೮) ಅಂತಿಮ ಅವಕಾಶವಿದ್ದು, ಇನ್ನಷ್ಟು ತಂಡಗಳ ನಿರೀಕ್ಷೆಯನ್ನು ಆಯೋಜಕರು ಹೊಂದಿದ್ದಾರೆ.
ನಗರದಲ್ಲಿAದು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಬಾರಿಯ ಉತ್ಸವ ನಡೆಸುತ್ತಿರುವ ಮುದ್ದಂಡ ಕುಟುಂಬದ ಪ್ರಮುಖರು ಹಾಗೂ ಕೊಡವ ಹಾಕಿ ಅಕಾಡೆಮಿಯ ಪ್ರಮುಖರುಗಳು ಹಾಕಿ ಉತ್ಸವದ ಸಿದ್ಧತೆಗಳ ಕುರಿತು ಹಲವು ಮಾಹಿತಿಗಳನ್ನು ನೀಡಿದರು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ೩ನೇ ಬಾರಿಗೆ ಹಾಕಿ ಉತ್ಸವ ಜರುಗುತ್ತಿದ್ದು, ಫೀ.ಮಾ. ಕಾರ್ಯಪ್ಪ ಕಾಲೇಜಿನ ಎರಡು ಮೈದಾನ ಹಾಗೂ ಪೊಲೀಸ್ ಮೈದಾನ ಸೇರಿ ಮೂರು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ. ಮಾರ್ಚ್ ೨೮ರ ಶುಕ್ರವಾರ ಸಾಂಸ್ಕೃತಿಕ ಮೆರವಣಿಗೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಮುದ್ದಂಡ ಕಪ್ ಶುಭಾರಂಭಗೊಳ್ಳಲಿದೆ.
೨೫ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಅಂತಿಮ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ಈಗಾಗಲೇ ದಾಖಲೆ ಎಂಬAತೆ ಒಟ್ಟು ೩೭೦ ಕುಟುಂಬ ತಂಡಗಳು ನೋಂದಾವಣಿ ಮಾಡಿಕೊಂಡಿ ರುವುದಾಗಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ. ಬೋಪಣ್ಣ,
(ಮೊದಲ ಪುಟದಿಂದ) ಮುದ್ದಂಡ ಕುಟುಂಬ ಪ್ರಮುಖರ ಸಮ್ಮುಖದಲ್ಲಿ ತಿಳಿಸಿದರು.
ಈ ಬಾರಿ ಪಂದ್ಯಾವಳಿಯ ಉಸ್ತುವಾರಿಯನ್ನು ಮುದ್ದಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ತಾ. ೨೮ ರಿಂದ ಏ. ೨೭ರವರೆಗೆ ಪಂದ್ಯಾವಳಿ ನಡೆಯಲಿದೆ. ಈ ಬಾರಿ ಈಗಾಗಲೇ ಒಟ್ಟು ೩೭೦ ತಂಡಗಳು ಹೆಸರು ನೋಂದಾಯಿಸಿಕೊAಡಿದ್ದು, ಕಳೆದ ಬಾರಿಗಿಂತ ಹತ್ತು ತಂಡಗಳು ಹೆಚ್ಚಿಗೆ ಪಾಲ್ಗೊಂಡಿವೆ. ಇನ್ನೂ ಕೂಡ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
ಉದ್ಘಾಟನಾ ಪಂದ್ಯ
ಈ ಬಾರಿ ಉದ್ಘಾಟನಾ ದಿನವಾದ ತಾ. ೨೮ ರಂದು ಕೊಡವ ಹಾಕಿ ಅಕಾಡೆಮಿ ಹಾಗೂ ರಾಷ್ಟಿçÃಯ ಮಟ್ಟದಲ್ಲಿ ವಿಜೇತರಾದ ಕರ್ನಾಟಕ ಇಲವೆನ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಾರಿಯ ಪಂದ್ಯಾವಳಿಯ ನಿರ್ದೇಶಕರಾಗಿ ಬಡಕಡ ದೀನ ಪೂವಯ್ಯ ಹಾಗೂ ಸಹಾಯಕರಾಗಿ ಮುದ್ದಂಡ ರಾಯ್ ತಮ್ಮಯ್ಯ ಕಾರ್ಯನಿರ್ವಹಿಸಲಿದ್ದಾರೆ. ಉದ್ಘಾಟನಾ ದಿವಸದಂದು ಕಳೆದ ಬಾರಿ ಗಿನ್ನಿಸ್ ದಾಖಲೆ ನಿರ್ಮಿಸಿದ ಕುಂಡ್ಯೋಳAಡ ಕುಟುಂಬದವರನ್ನು ಸನ್ಮಾನಿಸಿ, ಗೌರವಿಸಲಾಗುವುದೆಂದು ತಿಳಿಸಿದರು.
ಅಂಪರ‍್ಸ್ ವರ್ಕ್ಶಾಪ್
ಕೊಡವ ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ ಮಾತನಾಡಿ; ಕೊಡವ ಹಾಕಿ ಅಕಾಡೆಮಿ ವತಿಯಿಂದ ತಾ. ೧೯ ಮತ್ತು ೨೦ ರಂದು ಎರಡು ದಿವಸಗಳ ಕಾಲ ವೀರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಅಂಪರ‍್ಸ್ ವರ್ಕ್ಶಾಪ್ ಆಯೋಜಿಸಲಾಗಿದೆ. ಹಿರಿಯ ಹಾಕಿ ಆಟಗಾರರು, ತೀರ್ಪುಗಾರರಾಗಿರುವ ರಘು ಪ್ರಸಾದ್, ಗೋವಿಂದ, ದೀನ ಪೂವಯ್ಯ ಅವರುಗಳು ಮಾರ್ಗದರ್ಶನ ನೀಡುವರು. ಜಿಲ್ಲೆಯ ಆಸಕ್ತ ಯುವಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
ಹಾಕಿ ಅಕಾಡೆಮಿ ಉಪಾಧ್ಯಕ್ಷ ಕುಕ್ಕೇರ ಜಯಚಿಣ್ಣಪ್ಪ ಮಾತನಾಡಿ, ಹಾಕಿ ಉತ್ಸವದ ಉದ್ಘಾಟನಾ ದಿನದಂದು ಶಾಸಕರುಗಳಾದ ಡಾ. ಮಂತರ್‌ಗೌಡ, ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ರಾಜ್ಯಮಟ್ಟದ ಹಾಕಿ ಆಟಗಾರರು ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು.
ಒಲಂಪಿಯನ್ ಜ್ಯೋತಿ ಮೂಲಕ ಗೌರವ
ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಮಾತನಾಡಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್‌ನ ಎರಡು ಮೈದಾನ ಹಾಗೂ ಪೊಲೀಸ್ ಕವಾಯತು ಮೈದಾನದಲ್ಲಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಗ್ಯಾಲರಿ ನಿರ್ಮಾಣದ ಕಾರ್ಯ ಆರಂಭಗೊAಡಿದೆ. ಹಾಕಿ ಉತ್ಸವದ ಬೆಳ್ಳಿಹಬ್ಬದ ಸಂಭ್ರಮದ ಹಿನ್ನೆಲೆ ಹಾಕಿ ಪಂದ್ಯಾವಳಿಯೊAದಿಗೆ ವಿಭಿನ್ನ ಕಾರ್ಯಕ್ರಮಗಳು ಕೂಡ ನಡೆಯಲಿವೆ ಎಂದರು.
ಈ ಬಾರಿ ವಿಶೇಷವಾಗಿ ಇದುವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್'ಮನೆಗಳಿಗೆ ಮ್ಯಾರಥಾನ್ ಮೂಲಕ ಒಲಂಪಿಕ್ ಮಾದರಿಯಲ್ಲಿ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ತಾ.೨೫ರಂದು ಬೆಳಿಗ್ಗೆ ೮ ಗಂಟೆಗೆ ಕೊಡವ ಹಾಕಿ ಉತ್ಸವದ ಜನಕರಾದ ಕರಡ ಗ್ರಾಮದ ಪಾಂಡAಡ ಕುಟುಂಬದ ಐನ್'ಮನೆಯಲ್ಲಿ ಆರಂಭಗೊಳ್ಳಲಿರುವ ಮುದ್ದಂಡ ಹಾಕಿ ಉತ್ಸವದ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ.
ನಂತರ ಪೊನ್ನಂಪೇಟೆಯ ೮ ಐನ್ ಮನೆಗಳನ್ನು ಕ್ರಮಿಸಿ, ತಾ.೨೬ ರಿಂದ ೨೮ ರವರೆಗೆ ವಿವಿಧ ಐನ್ ಮನೆಗಳಿಗೆ ಕ್ರೀಡಾಜ್ಯೋತಿ ಸಾಗಲಿದೆ.
ತಾ.೨೮ರಂದು ಬೆಳಿಗ್ಗೆ ೯ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನಕ್ಕೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ನಾಲ್ಕು ದಿನವೂ ಪ್ರಮುಖ ಮ್ಯಾರಥಾನ್ ಓಟಗಾರರು ಕ್ರೀಡಾಜ್ಯೋತಿಯೊಂದಿಗೆ ಓಡಲಿದ್ದಾರೆ ಎಂದು ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು.
ಮಹಿಳಾ ಹಾಕಿ ಸಂಭ್ರಮ
ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈಗಾಗಲೇ ೩೦ ತಂಡಗಳು ನೋಂದಾಯಿಸಿಕೊAಡಿದ್ದು, ನೋಂದಣಿಯ ಕೊನೆಯ ದಿನಾಂಕ ಏ.೧೦ ಆಗಿರುವುದರಿಂದ ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳಲಿವೆ. ಎರಡನೇ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ ಎಂದರು.
ಸೆಮಿಫೈನಲ್ ಸಂದರ್ಭ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ಲಾಲ್ ರಿಮ್ ಸಿಯಾಮಿ ಅವರು ಆಗಮಿಸಿ ಹಾಕಿ ಕ್ರೀಡೆಯ ಕುರಿತು ಮಾಹಿತಿ ನೀಡಲಿದ್ದಾರೆ. ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹಾಗೂ ಒಲಂಪಿಯನ್ ಮನ್ ಪ್ರೀತ್ ಸಿಂಗ್ ಕೂಡ ಪಂದ್ಯಾವಳಿಯ ಸಂದರ್ಭ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ತಂದ್- ಬೆಂದ್ ಕಾರ್ಯಕ್ರಮ
ವಿಶೇಷವಾಗಿ ರಸಪ್ರಶ್ನೆ ಸ್ಪರ್ಧೆ ಮತ್ತು ತಂದ್- ಬೆಂದ್ (ವಧು - ವರರ ಅನ್ವೇಷಣೆ) ಕಾರ್ಯಕ್ರಮವನ್ನು ಪಂದ್ಯಾವಳಿ ನಡೆಯುವ ಮೈದಾನದ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಏ.೨೬ ರಂದು ನಡೆಯಲಿದೆ. ಪ್ರೀ ಕ್ವಾರ್ಟರ್ ನಡೆಯುವ ದಿನದಿಂದ ಅಂತಿಮ ಪಂದ್ಯಾವಳಿ ದಿನದವರೆಗೂ ಡಿಜೆ ಕಾರ್ಯಕ್ರಮ ಮನರಂಜಿಸಲಿದೆ. ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮುಕ್ತ “ಮಜಾ ರನ್’ ನಡೆಯಲಿದೆ. ಅಂತಿಮ ದಿನದ ಸಮಾರಂಭದ ಸಂದರ್ಭ ಆಕರ್ಷಕ ಸಿಡಿಮದ್ದುಗಳ ಪ್ರದರ್ಶನವಿರುತ್ತದೆ. ಸುಮಾರು ೨ ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಂದನಾ ಟ್ರಸ್ಟ್ ಸಂಸ್ಥೆ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳ ನಿರ್ವಹಣೆಯನ್ನು ಮಾಡಲಿದೆ ಎಂದರು.
ಮುದ್ದAಡ ಕುಟುಂಬದ ಕಾರ್ಯದರ್ಶಿ ಮುದ್ದಂಡ ರಾಯ್ ತಮ್ಮಯ್ಯ ಮಾತನಾಡಿ ಮುಕ್ತ ಶೂಟಿಂಗ್ ಸ್ಪರ್ಧೆಯ ಬಗ್ಗೆ ವಿವರ ನೀಡಿದರು. ಏ.೨೦ ರಂದು ಮೈದಾನ ಎರಡರಲ್ಲಿ ಶೂಟಿಂಗ್ ಸ್ಪರ್ಧೆ ಮೂರು ವಿಭಾಗಗಳಲ್ಲಿ ನಡೆಯಲಿದೆ. ೫೦ ಮೀಟರ್ ನಿಗದಿತ ಗುರಿಯ .೨ ಶೂಟಿಂಗ್ ಸ್ಪರ್ಧೆ, ೩೦ ಮೀಟರ್ ಅಂತರದ ೧೨ ಬೋರ್ ಬಂದೂಕಿನಿAದ ಗುರಿ ಹೊಡೆಯುವ ಹಾಗೂ ೧೫ ಮೀಟರ್ ದೂರದಿಂದ ಮೊಟ್ಟೆಗೆ ಗುಂಡಿಕ್ಕುವ ಏರ್‌ಗನ್ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಕೂಡ ನಡೆಯಲಿದೆ ಎಂದು ತಿಳಿಸಿದರು.
ಇಲ್ಲಿಯವರೆಗೆ ಕೊಡವ ಹಾಕಿ ಉತ್ಸವವನ್ನು ಆಯೋಜಿಸಿದ ೨೪ ಕುಟುಂಬಗಳನ್ನು ಸ್ಮರಿಸುವ ಮತ್ತು ಗೌರವದಿಂದ ಕಾಣುವ ಉದ್ದೇಶದಿಂದ ಈ ಬಾರಿ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುತ್ತಿದೆ. ಈ ಕುಟುಂಬಗಳ ಐನ್ ಮನೆಗಳಿಗೆ ತೆರಳಿ ನೆಲ್ಲಕ್ಕಿ ಬೆಳಕಿನಿಂದ ಕ್ರೀಡಾಜ್ಯೋತಿಗೆ ಬೆಳಕು ಪಡೆಯಲಿದ್ದೇವೆ ಎಂದರು.
ಮುದ್ದAಡ ಕುಟುಂಬದ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ಮಾತನಾಡಿ ತಾ.೨೮ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಮೈದಾನದವರೆಗೆ ನಡೆಯುವ ಬೃಹತ್ ಮೆರವಣಿಗೆಯಲ್ಲಿ ಜಾತಿ, ಮತ ಬೇಧವಿಲ್ಲದೆ ಎಲ್ಲರೂ ಸಾಂಪ್ರದಾಯಿಕ ಉಡುಪಿನಲ್ಲಿ ಸರ್ವರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳ ಎಲ್ಲಾ ಕೊಡವ ಸಮಾಜಗಳು ಹಾಗೂ ಕೊಡವ ಕೇರಿಗಳ ಸಹಕಾರವನ್ನು ಪಡೆಯಲಾಗಿದೆ. ಹಾಕಿ ಉತ್ಸವ ಯಾವುದೇ ಅಡ್ಡಿ ಆತಂಕವಿಲ್ಲದೆ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.