ಶನಿವಾರಸಂತೆ, ಮಾ. ೧೪ : ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕ್ಯಾತೆ ಗ್ರಾಮದ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ೭ ನೇ ತರಗತಿ ವಿದ್ಯಾರ್ಥಿ ಆಕಸ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ದೊಡ್ಡ ಭಂಡಾರ ಗ್ರಾಮದ ಶಿವ-ಆಶಾ ದಂಪತಿಯ ಪುತ್ರಿ ಪೂರ್ವಿಕಾ (೧೩) ಸಾವನ್ನಪ್ಪಿದ ವಿದ್ಯಾರ್ಥಿನಿ. ಗುರುವಾರ ಮಧ್ಯಾಹ್ನ ಅಸ್ವಸ್ಥಳಾಗಿ ಕುಸಿದು ಬಿದ್ದಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಕೊಡ್ಲಿಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪೂರ್ವಿಕಾ ಗುರುವಾರ ರಾತ್ರಿ ಸಾವನ್ನಪ್ಪಿದ್ದಾಳೆ.

ಪೂರ್ವಿಕಾ ತಂದೆ-ತಾಯಿ ಬೆಂಗಳೂರಿನಲ್ಲಿ ಉದ್ಯೋಗಿಗಳಾಗಿದ್ದು; ವಿಚಾರ ತಿಳಿದು ಬಂದಿದ್ದರು. ಶುಕ್ರವಾರ ದೊಡ್ಡ ಭಂಡಾರ ಗ್ರಾಮದಲ್ಲಿ ಪೂರ್ವಿಕಾ ಮೃತ ದೇಹದ ಅಂತ್ಯಸAಸ್ಕಾರ ನೆರವೇರಿತು.

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿ ಪಿಎಸ್‌ಐ ಗೋವಿಂದ್ ರಾಜ್ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.