ವೀರಾಜಪೇಟೆ, ಮಾ. ೧೪: ವೀರಾಜಪೇಟೆ ತಾಲೂಕು ತಹಶೀಲ್ದಾರ್ ಆಗಿ ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಹೆಚ್.ಎನ್. ರಾಮಚಂದ್ರ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಆಪ್ತ ಕಾರ್ಯದರ್ಶಿಯಾಗಿ ಮುಂಬಡ್ತಿ ಹೊಂದಿದ್ದು, ಶುಕ್ರವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳಿAದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಈ ಸಂದರ್ಭ ಕಂದಾಯ ಇಲಾಖೆಯ ಪರಿವೀಕ್ಷಕ ಹರೀಶ್, ಭೂ ದಾಖಲೆಗಳ ಇಲಾಖೆ ಅಧಿಕಾರಿ ಬಾನಂಗಡ ಅರುಣ್, ನೂತನ ತಹಶೀಲ್ದಾರ್ ಅನಂತಶAಕರ ಬಿ. ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.