ಮಡಿಕೇರಿ, ಮಾ. ೧೪ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೋದಯ ಮಹಿಳಾ ಒಕ್ಕೂಟ (ಒಡಿಪಿ) ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವೈಎಂಸಿಎ ಕೂರ್ಗ್ ಇವರ ಸಂಯುಕ್ತ ಆಶ್ರಯದಲ್ಲಿ ‘ಅಂತರಾಷ್ಟೀಯ ಮಹಿಳಾ ದಿನಾಚರಣೆ ಮತ್ತು ಗ್ರಾಹಕರ ಹಕ್ಕುಗಳ ದಿನಾಚರಣೆಯು ತಾ. ೧೫ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ (ಬಾಲಭವನ) ಇಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಮೈಸೂರು ಒಡಿಪಿ ಮಹಿಳಾ ಸಶಕ್ತತಾ ವಿಭಾಗದ ಯೋಜನಾ ಸಂಯೋಜಕರಾದ ಮೋಲಿ ಪುಡ್ತಾದೊ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ವೈ.ಎಂ.ಸಿ.ಎ. ಕೂರ್ಗ್ ಅಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ, ಜಿಲ್ಲಾ ಸಂಯೋಜಕರಾದ ಜಾಯ್ಸ್ ಮೆನೇಜಸ್, ಮಹಿಳೋದಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ತಾರ, ಕಾರ್ಯಕರ್ತೆ ವಿಜಯ ನಾರಾಯಣ, ಇತರರು ಪಾಲ್ಗೊಳ್ಳಲಿದ್ದಾರೆ.