ಮಡಿಕೇರಿ, ಮಾ. ೧೪: ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಸಿ ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಆದೇಶ ಹೊರಡಿಸಿದ್ದಾರೆ.
ತಾ. ೧೪ ರಿಂದ ಏಪ್ರಿಲ್ ೧೪ರ ಬೆಳಿಗ್ಗೆ ೧೦ ಗಂಟೆಯ ತನಕ ಆದೇಶ ವಿಸ್ತರಿಸಿದ್ದು, ಈ ಅವಧಿಯಲ್ಲಿ ೫ಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಿದ್ದಾರೆ. ದೇವಾಲಯದ ವಾರ್ಷಿಕೋತ್ಸವ ಸಂದರ್ಭ ನಡೆದ ಘರ್ಷಣೆಯಿಂದ ಸ್ಥಳದಲ್ಲಿ ಉಂಟಾಗಿರುವ ಬೆಳವಣಿಗೆಗಳ ಸಂಬAಧ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಪೊಲೀಸ್ ಅಧೀಕ್ಷಕರ ಕೋರಿಕೆ ಮೇರೆ ಜಿಲ್ಲಾಡಳಿತ ಈ ಕ್ರಮವಹಿಸಿದೆ.