ಮಡಿಕೇರಿ, ಮಾ. ೧೪: ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ಮತ್ತು ಚಿತ್ರನಟಿ ರಶ್ಮಿಕಾ ಮಂದಣ್ಣ ವಿರುದ್ಧ ವಿವಿಧ ಸಂಘಟನೆಗಳ ಮುಖಂಡರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಅಂತರರಾಷ್ಟಿçÃಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದ ಎಲ್ಲರೂ ಭಾಗಿಯಾಗಬೇಕು. ಅದೇ ರೀತಿ ಕನ್ನಡ ನಾಡು, ನುಡಿ, ಜಲ ವಿಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಹಲವರು ವಿಫಲರಾಗಿದ್ದಾರೆಂದು ಹೇಳಿಕೆ ನೀಡಿದ್ದರು.

ಈ ಸಂದರ್ಭದಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ, ಚಿತ್ರನಟಿ ರಶ್ಮಿಕಾ ಮಂದಣ್ಣ ಹೆಸರು ಮುಂದಿಟ್ಟುಕೊAಡು ಶಾಸಕರನ್ನು ತೇಜೋವಧೆ ಮಾಡಿದ್ದು, ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.