ಹೆಬ್ಬಾಲೆ, ಮಾ. ೧೫: ರಾಜ್ಯದ ಸಹಕಾರ ಯೂನಿಯನ್ ಹಾಗೂ ಸಹಕಾರ ಸಂಘಗಳ ಬೆಳವಣಿಗೆಗೆ ಮಹಾಮಂಡಳ ವಿಶೇಷ ಒತ್ತು ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಹಾಗೂ ಕೊಡಗು ಜಿಲ್ಲೆ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷೇತ್ರ ಸಿಬ್ಬಂದಿಗಳಿಗೆ ವೃತ್ತಿ ಕೌಶಲ್ಯ ಕುರಿತು ವೀರಭೂಮಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಾಮಂಡಳದ ಮೂಲ ಕಾರ್ಯಚಟುವಟಿಕೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸದಾ ಶ್ರಮಿಸುತ್ತಿರುವ ಜಿಲ್ಲಾ
ಸಹಕಾರ ಯೂನಿಯನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷೇತ್ರ ಸಿಬ್ಬಂದಿಗಳಿಗೆ ವೃತ್ತಿ ಕೌಶಲ್ಯದ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ವೃತ್ತಿ ಪರತೆಗೆ ಅನುಕೂಲವಾಗು ವಂತೆ ಚುನಾವಣೆ,
(ಮೊದಲ ಪುಟದಿಂದ)ವ ಸೈಬರ್ ಭದ್ರತೆ, ಬೋಧನಾ ಸಿದ್ಧತೆ, ಕಚೇರಿ ನಿರ್ವಹಣೆ ಹಾಗೂ ಶಿಸ್ತು, ಸಿಬ್ಬಂದಿ ಸೇವಾ ನಿಯಮಗಳು, ಹಾಗೂ ಡಿ.ಸಿ.ಬಿ ತಯಾರಿಸುವ ಕುರಿತು ವಿಷಯಗಳನ್ನೊಳಗೊಂಡAತೆ ೨ ದಿನದ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ನಿಮಗಾಗಿ ಹಮ್ಮಿಕೊಂಡಿದೆ ಎಂದು ಹೇಳಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ, ಸಹಕಾರ ಕ್ಷೇತ್ರ ಬೆಳವಣಿಗೆಯಲ್ಲಿ ಜಿ.ಟಿ.ದೇವೇಗೌಡ ಅವರ ಕೊಡುಗೆ ಅಪಾರವಾಗಿದೆ. ದೇಶದ ಆರ್ಥಿಕ ಪ್ರಗತಿಗೆ ಸಹಕಾರ ಸಂಘಗಳ ಕೊಡುಗೆ ತುಂಬ ಅಗತ್ಯವಾಗಿದೆ ಎಂದರು. ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಎಲ್ಲಾ ಜಿಲ್ಲೆಗಳ ಸಿಇಓಗಳು ಸದುಪಯೋಗಪಡಿಸಿಕೊಳ್ಳಬೇಕು. ಸಂಪನ್ಮೂಲ ವ್ಯಕ್ತಿ ನೀಡಿದ ಮಾಹಿತಿಯನ್ನು ತಮ್ಮ ಸಹಕಾರ ಯೂನಿಯನ್‌ಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಹಕಾರ ಸಂಘಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ನವೀನ್ ಮಾತನಾಡಿ, ತರಬೇತಿ ಕಾರ್ಯಕ್ರಮದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳು, ವಿಷಯತಜ್ಞರು ಪಾಲ್ಗೊಂಡು ಉತ್ತಮ ಮಾಹಿತಿಯನ್ನು ನೀಡಲಿದ್ದಾರೆ. ಅವರುಗಳು ನೀಡಿದ ಮಾಹಿತಿಯನ್ನು, ತರಬೇತಿಯನ್ನು ಅರ್ಥೈಸಿಕೊಳ್ಳುವುದರ ಮೂಲಕ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪ್ರಗತಿಗೆ ನಿಮ್ಮದೇ ಆದ ಕೊಡುಗೆಯನ್ನು ನೀಡುವಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಖಾಸಗೀಕರಣ, ಜಾಗತೀಕರಣವು ಹೆಚ್ಚುತ್ತಿರುವ ಸಂದರ್ಭದಲ್ಲಿ ಸಹಕಾರ ಕ್ಷೇತ್ರವು ಹಿನ್ನಡೆಯನ್ನು ಅನುಭವಿಸುತ್ತಿದೆ. ಸಹಕಾರ ಕ್ಷೇತ್ರದ ಪ್ರಚಾರ, ತರಬೇತಿ ಮತ್ತು ಶಿಕ್ಷಣದ ಮಾತೃ ಸಂಸ್ಥೆಯಾಗಿರುವ ಸಹಕಾರ ಮಹಾಮಂಡಳವು ಜಿಲ್ಲಾ ಸಹಕಾರ ಯೂನಿಯನ್‌ಗಳು, ಕೆ.ಐ.ಸಿ.ಎಂ ಮತ್ತು ಕೇಂದ್ರ ಕಚೇರಿಯ ಎಲ್ಲಾ ನೌಕರರ ಆಧಾರ ಸ್ತಂಭವಾಗಿದ್ದು ಮಹಾಮಂಡಳದ ಘನತೆಗೆ ಚ್ಯುತಿ ಬರದಂತೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕಾಗಿರುತ್ತದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ ಮಾತನಾಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ನಿರ್ದೇಶಕ ರವಿ ಬಸಪ್ಪ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರನಾಯಕ್, ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕಿ ಆರ್.ಮಂಜುಳಾ ಉಪಸ್ಥಿತರಿದ್ದರು. ಹಾಸನ ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಜಗದೀಶ್ ಸಹಕಾರ ಸಂಘಗಳ ಅಭಿವೃದ್ಧಿ ಕುರಿತು, ನಿವೃತ್ತ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ ಅವರು, ಸೈಬರ್ ಕ್ರೈಮ್ ಕುರಿತು ಹಾಗೂ ಮೈಸೂರು ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಅಂತೋಣಿ ಪೌಲ್ ರಾಜ್ ಅವರು ಬೋಧನಾ ಸಿದ್ಧತೆ ಬಗ್ಗೆ ಉಪನ್ಯಾಸ ನೀಡಿದರು.
ನಂತರ ಜಿ.ಟಿ.ದೇವೇಗೌಡ ಅವರು ಪ್ರತಿ ಜಿಲ್ಲೆಯ ಸಹಕಾರ ಯೂನಿಯನ್‌ಗಳ ಪ್ರಗತಿ ಪರಿಶೀಲನೆ ನಡೆಸಿದರು. ವಿವಿಧ ಜಿಲ್ಲೆಯ ಯೂನಿಯನ್ ವ್ಯವಸ್ಥಾಪಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭ ಕೊಡಗು ಸಹಕಾರ ಸಂಘಗಳ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ ಅವರು ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕ ನವೀನ್ ಅವರನ್ನು ಸನ್ಮಾನಿಸಿ, ಗೌರವಿಸಿದರು.