ಮಡಿಕೇರಿ, ಮಾ. ೧೬: ವಿದ್ಯಾರ್ಥಿ ಜೀವನದಲ್ಲಿ ನಾವು ಏನನ್ನು ಪಡೆಯು ತ್ತೇವೆಯೋ ಅದನ್ನೇ ಬದುಕಿನಲ್ಲೂ ಅಳವಡಿಸಿ ಕೊಳ್ಳುತ್ತೇವೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ಯಶಸ್ಸನ್ನು ಸಾಧಿಸಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರು ಕರೆ ನೀಡಿದರು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಡೀ ಭಾರತದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರಿನಲ್ಲಿ ಎರಡೇ ಕಾಲೇಜು ಇದ್ದು, ವಿದ್ಯಾರ್ಥಿಗಳು ಕಾಲೇಜಿನ ಹೆಸರಿಗೆ ಧಕ್ಕೆ ತಾರದೆೆ ಶಿಸ್ತಿನಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು..
ವಾಣಿಜ್ಯಶಾಸ್ತç ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಎ.ಗಾಯತ್ರಿ ದೇವಿ ಮಾತನಾಡಿ, ವಿಶೇಷ ಜ್ಞಾನ ಪಡೆಯಲು ಶಿಕ್ಷಣ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಸಂಯಮವನ್ನು ಬೆಳೆಸಿಕೊಳ್ಳಬೇಕು ಮತ್ತು ಮಾದರಿ ಪ್ರಜೆಗಳಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸುಖ ಜೀವನ ನಡೆಸಲು ಸಾಧ್ಯ ಎಂದರು.
ಪ್ರತಿಯೊಬ್ಬರಲ್ಲೂ ಪ್ರತಿಭೆ ಇರುತ್ತದೆ, ಆದರೆ ಉತ್ತಮ ವೇದಿಕೆ ಮತ್ತು ಪ್ರೋತ್ಸಾಹದ ಅಗತ್ಯವಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಾಗ ವಿದ್ಯಾರ್ಥಿಗಳು ಪ್ರಗತಿ ಸಾಧಿಸಲು ಸಾಧ್ಯ. ಫೀ.ಮಾ. ಕಾರ್ಯಪ್ಪ ಕಾಲೇಜ್ನ ಹಳೇ ವಿದ್ಯಾರ್ಥಿಗಳು ಒಗ್ಗೂಡಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ. ರಾಘವ ಅವರು ವಿದ್ಯಾರ್ಥಿಗಳ ಸಾಧನೆಗೆ ಪೋಷಕರ ಬೆಂಬಲ, ನೈತಿಕ ಸ್ಥೆöÊರ್ಯ, ತ್ಯಾಗ ಮನೋಭಾವ ಅತಿ ಮುಖ್ಯ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದರು.
ಕ್ಷೇಮ ಪಾಲನಾ ಸಮಿತಿಯ ಸಂಯೋಜಕ ಪ್ರೊ. ಎಂ.ಪಿ. ಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಕೂಡ ಮುಖ್ಯವಾಗಿದ್ದು, ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿ ಸಂಘದ ಸಲಹೆಗಾರ ಪ್ರೊ. ಶ್ರೀಧರ್ ಹೆಗಡೆ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಅಪೇಕ್ಷೆ ಮೇರೆಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದೆ, ವಿಶೇಷ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ರಾಜ್ಯ, ರಾಷ್ಟçಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್.ವಿ. ಮಹೇಂದ್ರ ಮಾತನಾಡಿ, ಕಾಲೇಜಿನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ವಿದ್ಯಾರ್ಥಿ ಸಂಘದ ಮೂಲಕ ಪ್ರಾಂಶುಪಾಲರಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಗಿತ್ತು. ಇದೀಗ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸಹಕಾರದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇನ್ನು ಮುಂದೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದAತೆ ಕಾರ್ಯಾಗಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸುವಂತೆ ಕೇಳಿಕೊಳ್ಳಲಾಗಿದ್ದು, ಉತ್ತಮ ಕಾರ್ಯಕ್ರಮಗಳನ್ನು ರೂಪಿಸಲಾಗವುದೆಂದರು.
ಎನ್ಸಿಸಿಯಲ್ಲಿ ಸಾಧನೆ ಮಾಡಿದ ಹೇಮ್ ಮೊಣ್ಣಪ್ಪ, ಎಂ.ಆರ್. ಹೇಮಂತ್ ಹಾಗೂ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಪ್ರತಿಭಾ ಸಮಾಗಮ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಹಾಡುಗಾರಿಗೆ ಸ್ಪರ್ಧೆ, ಭಾಷಣ ಸ್ಪರ್ಧೆ, ನೃತ್ಯ ಸ್ಪರ್ಧೆ, ಸಾಂಪ್ರದಾಯಿಕ ಫ್ಯಾಷನ್ ಶೋ ನಡೆಯಿತು.
ಐಕ್ಯೂಎಸಿ ಸಂಯೋಜಕ ಪ್ರೊ. ಕೆ.ಪಿ. ನಾಗರಾಜ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಹಾಗೂ ಪದಾಧಿಕಾರಿಗಳು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿಯರಾದ ಇಂಪನ ನಿರೂಪಿಸಿ, ಚಶ್ಮಿತ, ಎಂ.ಪಿ. ಮೋನಿಶ್, ವೈಶಾಲಿ ಅತಿಥಿಗಳ ಪರಿಚಯ ಮಾಡಿದರು.