ಮಡಿಕೇರಿ, ಮಾ. ೧೬: ಅಂಚೆ ಅದಾಲತ್ ಸಭೆಯು ಮಾರ್ಚ್ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ವತಿಯಿಂದ ಸಿದ್ದಾಪುರ ರಸ್ತೆಯಲ್ಲಿರುವ ಅಶೋಕ್‌ಪುರದಲ್ಲಿ ನಡೆಯಲಿದೆ.
ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬAಧಿಸಿದ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ 'ಅಂಚೆ ಅದಾಲತ್' ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಮಾರ್ಚ್ ೧೮ ರೊಳಗೆ ತಲುಪುವಂತೆ ಕಳುಹಿಸಲು ಈ ಮೂಲಕ ಕೋರಲಾಗಿದೆ ಎಂದು ಕೊಡಗು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.