ವೀರಾಜಪೇಟೆ, ಮಾ. ೧೬: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಾಂಗ್ರೆಸ್ ಭವನ (ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಟ್ಟಡ) ನಿರ್ಮಿಸುವ ಸಲುವಾಗಿ ಬೆಂಗಳೂರಿನಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲೆಯ ಶಾಸಕಧ್ವಯರೊಂದಿಗೆ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಮಾಜಿ ಎಂ.ಎಲ್.ಸಿ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ದರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡ ಮುನೀರ್ ಅಹಮ್ಮದ್, ಟಿ.ಪಿ. ರಮೇಶ್ ಸೇರಿದಂತೆ ಇನ್ನಿತರ ಪ್ರಮುಖರು ಇದ್ದರು.