ಹೆಬ್ಬಾಲೆ, ಮಾ. ೧೬: ಸಮೀಪದ ಶಿರಂಗಾಲ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗ್ರಾಮ ದೇವತೆ ಶ್ರೀ ಮಂಟಿಗಮ್ಮ ದೇವಿಯ ದ್ವಿವಾರ್ಷಿಕ ಜಾತ್ರೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.
ಶ್ರೀ ಮಂಟಿಗಮ್ಮ ದೇವಾಲಯ ಸಮಿತಿ ವತಿಯಿಂದ ಎರಡು ವರ್ಷಗೊಳಿಗೊಮ್ಮೆ ಶಕ್ತಿ ದೇವತೆ ಮಂಟಿಗಮ್ಮ ದೇವಿಯ ಆರಾಧನೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಕೊಡಗು ಹಾಗೂ ಹಾಸನ ಜಿಲ್ಲೆಯ ಗಡಿ ಗ್ರಾಮಗಳ ವ್ಯಾಪ್ತಿಯಲ್ಲಿ ನಡೆಯುವ ಗ್ರಾಮೀಣ ಭಾಗದ ಅತಿ ದೊಡ್ಡ ಜಾತ್ರೆಗಳಲ್ಲಿ ಶ್ರೀ ಮಂಟಿಗಮ್ಮ ದೇವಿಯ ಉತ್ಸವ ಒಂದಾಗಿದ್ದು, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಗಡಿ ಗ್ರಾಮಗಳ ಜನರು ಸೇರಿದಂತೆ ವಿವಿಧೆಡೆಗಳಿಂದ ಅಪಾರ ಭಕ್ತರು ಪಾಲ್ಗೊಂಡಿದ್ದರು. ಗ್ರಾಮದ ಕೋಟೆಯ ಗದ್ದಿಗೆಯಲ್ಲಿ ರಾತ್ರಿ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದ ನಂತರ ಉತ್ಸವಕ್ಕೆ ಚಾಲನೆ ನೀಡಲಾಯಿತು. ದೇವಿಯನ್ನು ಭಕ್ತಾದಿಗಳು ತಮಟೆ ಮತ್ತು ಮಂಗಳವಾದ್ಯದೊAದಿಗೆ ಪವಿತ್ರ ಬನಕ್ಕೆ ದೇವಿಗೆ ಸಂಬAಧಿಸಿದ ಆರಭರಣಗಳನ್ನೊಳಗೊಂಡ ಬುಟ್ಟಿ, ಹೂವಿನ ಬುಟ್ಟಿ, ಖಡ್ಗ ಮತ್ತು ಪ್ರಭಾಳೆ, ಹಾಲಿನ ಗಡುಗೆ, ಬುಟ್ಟಿ ಮತ್ತಿತರರ ಸಾಂಪ್ರದಾಯಿಕ ಸಾಮಗ್ರಿಗಳನ್ನು ಅರ್ಚಕ ಚಂದ್ರು ಹಾಗೂ ಮುಖಂಡರು ಹೊತ್ತುಕೊಂಡು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ದೇವಿಯ ಬನದಲ್ಲಿ ಹಾಕಿರುವ ಅಗ್ನಿಕೊಂಡವನ್ನು ಹರಕೆ ಹೊತ್ತ ಭಕ್ತಾದಿಗಳು ತುಳಿದು ದೇವರ ದರ್ಶನ ಪಡೆದರು. ಹಬ್ಬದ ಅಂಗವಾಗಿ ಗ್ರಾಮದ ಸಂತೆಮಾಳ ಮೈದಾನದಲ್ಲಿ ಏರ್ಪಡಿಸಿದ್ದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ದೇವಸ್ಥಾನ ಮತ್ತು ಗ್ರಾಮವನ್ನು ಹಸಿರು ತಳಿರು ತೋರಣಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು.
ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್ ಮತ್ತು ಕಾರ್ಯದರ್ಶಿ ಎಸ್.ಎಸ್.ಗಣೇಶ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ಗಳು ನೆರವೇರಿದವು. ದೇವಾಲಯದ ಪ್ರಧಾನ ಅರ್ಚಕ ಚಂದ್ರಪ್ಪ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು. ಬನದಲ್ಲಿ ಸೇರಿದ್ದ ಜಾತ್ರೆ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸಿತು.
ದೇವಾಲಯ ಸಮಿತಿ ಉಪಾಧ್ಯಕ್ಷ ಉಮೇಶ್, ಗೌರವಾಧ್ಯಕ್ಷ ಕಾಳಿಂಗಪ್ಪ,ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಕೆ. ಪ್ರಸನ್ನ, ಕಾರ್ಯದರ್ಶಿ ಬಿ.ಎಸ್.ಬಸವಣ್ಣಯ್ಯ,ಗ್ರಾಮ ಪಂಚಾಯಿತಿ ಅಧ್ಯಕ್ಷ ಲತಾಬಾಯಿ, ಉಪಾಧ್ಯಕ್ಷ ಬಸವರಾಜು,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ವಿ.ನಂಜುAಡಪ್ಪ, ಮಾಜಿ ದೇವಾಲಯ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಮುಖಂಡರಾದ ಎಸ್.ವಿ.ಶಿವಾನಂದ, ವಿಎಸ್‌ಎಸ್‌ಎನ್ ಬ್ಯಾಂಕ್ ಅಧ್ಯಕ್ಷ ರವಿ, ಧರಣೇಂದ್ರ ಕುಮಾರ್,ಸಿ.ಎನ್.ಲೋಕೇಶ್, ಎಸ್.ಎ.ಯೋಗೇಶ್, ಸಿ.ಎಲ್. ಲೋಕೇಶ್, ಚೇತನ್, ರಾಜಣ್ಣ ಮತ್ತಿತರರು ಪಾಲ್ಗೊಂಡಿದ್ದರು.