ಮಡಿಕೇರಿ, ಮಾ. ೧೭: ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉಪಸ್ಥಿತಿಯಲ್ಲಿ ಬೆಂಗಳೂರು ವಿಕಾಸಸೌಧದಲ್ಲಿ ನಡೆಯಿತು.

ಮಡಿಕೇರಿ ವೈದ್ಯಕೀಯ ಶಿಕ್ಷಣ ಕಾಲೇಜಿನಲ್ಲಿ ಖಾಲಿ ಇರುವ ನರ್ಸಿಂಗ್ ಅಫೀರ‍್ಸ್ ಮತ್ತು ವೈದ್ಯರ ಹುದ್ದೆಗಳ ಭರ್ತಿಗೆ ಸಚಿವರು ನಿರ್ದೇಶನ ನೀಡಿದರು. ಕಾರ್ಡಿಯಾಲಜಿ ಸೆಂಟರ್ ಪ್ರಾರಂಭಿಸುವ ಬಗ್ಗೆ ಶಾಸಕ ಡಾ. ಮಂತರ್ ಗೌಡ ಹಾಗೂ ಜಿಲ್ಲಾಸ್ಪತ್ರೆ ಡೀನ್ ಡಾ. ಲೋಕೇಶ್ ಅವರೊಂದಿಗೆ ಚರ್ಚೆ ನಡೆಸಿದರು.

ಮೆಡಿಕಲ್ ಕಾಲೇಜಿನ ನೂತನ ಕಟ್ಟಡ ಕಾಮಗಾರಿ ಟೆಂಡರ್ ನಡೆಸುವಂತೆ ಹಾಗೂ ಎಂ.ಆರ್.ಐ. ಸ್ಕಾö್ಯನಿಂಗ್ ಸೆಂಟರ್‌ನಲ್ಲಿ ಶೀಘ್ರ ವರದಿ ನೀಡುವಂತೆ ಕ್ರಮವಹಿಸಲು ಸೂಚನೆ ನೀಡಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ , ವೈದ್ಯಕೀಯ ಕ್ಷೇತ್ರಕ್ಕೆ ಪೂರಕ ಯೋಜನೆ ರೂಪಿಸಲು ಅಗತ್ಯ ಸಹಕಾರ ನೀಡುವಂತೆ ಸಚಿವರಲ್ಲಿ ಮನವಿ ಮಾಡಿ ಕೆಲವೊಂದು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು.