ವೀರಾಜಪೇಟೆ, ಮಾ. ೧೮: ವೀರಾಜಪೇಟೆ ಪುರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರು, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪಟ್ಟಡ ರಂಜಿ ಪೂಣ್ಣಚ್ಚ ಅವರ ನೇತೃತ್ವದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಭೇಟಿ ಮಾಡಿದರು.
ಪುರಸಭೆ ಪೌರ ಕಾರ್ಮಿಕರ ಹಲವು ಬೇಡಿಕೆಗಳ ಮನವಿ ಪತ್ರವನ್ನು ಶಾಸಕರಿಗೆ ಸಲ್ಲಿಸಿದ ನಿಯೋಗವು, ತಮ್ಮ ಬೇಡಿಕೆಗಳನ್ನು ಆದಷ್ಟು ಶೀಘ್ರ ಬಗೆಹರಿಸಬೇಕೆಂದು ಈ ಸಂದರ್ಭ ಶಾಸಕರಲ್ಲಿ ಕೇಳಿಕೊಂಡರು.
ಮನವಿ ಸ್ವೀಕರಿಸಿ ಇದಕ್ಕೆ ಪೂರಕವಾಗಿ ಸ್ಪಂದಿಸಿದ ಶಾಸಕರು, ಕಾರ್ಮಿಕರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.