ಸುಂಟಿಕೊಪ್ಪ, ಮಾ. ೧೭: ಕರ್ನಾಟಕ ರಾಜ್ಯ ತೋಟಗಾರಿಕೆ ಮಾರಾಟ ಮಹಾ ಮಂಡಳಿಯು ಸಮಾಜಸೇವೆಯಲ್ಲಿ ಉತ್ತಮ ಸೇವೆ ಮಾಡಿರುವವರಿಗೆ ನೀಡುತ್ತಿರುವ ರಾಜ್ಯ ಪ್ರಶಸ್ತಿಗೆ ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯೆ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ನ ನಿರ್ದೇಶಕಿ ಸುಂಟಿಕೊಪ್ಪದ ಚಟ್ರಂಡ ಲೀಲಾ ಮೇದಪ್ಪ ಅವರು ಭಾಜನರಾಗಿದ್ದಾರೆ.

ಮಹಿಳಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗದ ಶಿಕಾರಿಪುರ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಆಯೋಜಿಸಿದ್ದ ತೋಟಗಾರಿಕೆ ಮತ್ತು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಲೀಲಾ ಮೇದಪ್ಪ ಅವರು ಸನ್ಮಾನ ಹಾಗೂ ಪ್ರಶಸ್ತಿ ಸ್ವೀಕರಿಸಿದರು.

ಇವರು ಸುಂಟಿಕೊಪ್ಪ ಮಹಿಳಾ ಸಮಾಜದ ಅಧ್ಯಕ್ಷರು, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷೆ, ಮಡಿಕೇರಿ ಕೊಡಗು ಮಹಿಳಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಕೊಡಗು ಕಾಫಿ ಬೆಳೆಗಾರರ ಸಂಘದ ನಿರ್ದೇಶಕರಾಗಿ ಜ್ಞಾನಧಾರ ಶಿಶು ಮಂದಿರದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕು ಉತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಹಾಗೂ ೨೦೨೩ರಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಕೊಡಗು ಜಿಲ್ಲಾ ಮಹಿಳಾ ಶ್ರೇ಼಼ಷ್ಠ ಸಹಕಾರಿ ಪ್ರಶಸ್ತಿ ಪಡೆದಿರುತ್ತಾರೆ.