ವೀರಾಜಪೇಟೆ, ಮಾ. ೧೮: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪಾಣತ್ತಲೆ ಅಣ್ಣಯ್ಯ ಮತ್ತು ಚಿನ್ನಮ್ಮ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗಿಡಕ್ಕೆ ನೀರು ಹಾಕುವ ಮೂಲಕ ಮುಖ್ಯ ಅತಿಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಡಗಿನ ಮಹಿಳಾ ಸಾಹಿತಿಗಳ ಕೊಡುಗೆ ಬಗ್ಗೆ ಆರ್ಜಿ ಶಾಲೆಯ ಸಹ ಶಿಕ್ಷಕಿ ತ್ರಿವೇಣಿ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಾವಿತ್ರಿ ಹೆಚ್.ಜಿ. ಪ್ರಾಸ್ತಾವಿಕ ಭಾಷಣ ಮಾಡಿದರು. ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜೇಶ್ ಪದ್ಮನಾಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಸ.ಹಿ. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನ್ನಮ್ಮ, ಜಿ.ಎಂ.ಪಿ ಶಾಲೆ ದೈಹಿಕ ಶಿಕ್ಷಕ ಪ್ರವೀಣ್, ನಿವೃತ್ತ ಪ್ರಾಧ್ಯಾಪಕ ಸುಶೀಲ ಪಿ.ಎ., ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯ ಎ.ವಿ.ಮಂಜುನಾಥ್ ಹಾಜರಿದ್ದರು.