ಕುಶಾಲನಗರ, ಮಾ. ೧೭: ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಅಧಿನಿಯಮ ೧೯೬೫ ರ ಪ್ರಕರಣ ಅಡಿಯಲ್ಲಿ ೨(ಎಫ್) ಮಾನ್ಯತೆ ಪಡೆದಿರುವ ಕೊಡಗು ವಿಶ್ವವಿದ್ಯಾಲಯ ವನ್ನು ಸ್ವತಂತ್ರವಾಗಿ ಮುಂದುವರಿಸುವ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಕೊಡಗು ಸಂಘ ಸಂಸ್ಥೆಗಳ ಒಕ್ಕೂಟದ ಮೂಲಕ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮನವಿ ಸಲ್ಲಿಸಿದರು.
ಅಳುವಾರ ಕೊಡಗು ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟಿçÃಯ ಸಮ್ಮೇಳನಕ್ಕೆ ಆಗಮಿಸಿದ ಆಯೋಗದ ಸದಸ್ಯರಾದ ವಿಜಯ ಭಾರತಿ ಸಯಾನಿ ಮತ್ತು ಮಾಜಿ ಸದಸ್ಯ ರಾಜೀವ್ ಜೈನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು ಶೋಷಿತ, ಅಲ್ಪಸಂಖ್ಯಾತ ಹಿಂದುಳಿದ ಬುಡಕಟ್ಟು ಸಮುದಾಯಗಳು ಹಾಗೂ ಕಡು ಬಡತನದ ಬೇಗೆಯಲ್ಲಿ ಬೇಯುತ್ತಿರುವ ಬಡ ವಿದ್ಯಾರ್ಥಿಗಳನ್ನು ಬಹುತೇಕ ಪ್ರಮಾಣದಲ್ಲಿ ಹೊಂದಿರುವ ಕೊಡಗು ವಿಶ್ವವಿದ್ಯಾಲಯವನ್ನು ಬೇರೆ ವಿವಿಗಳಿಗೆ ವಿಲೀನಗೊಳಿಸುವ ಸರ್ಕಾರದ ಚಿಂತನೆಯನ್ನು ತಕ್ಷಣ ಕೈ ಬಿಡಲು ಸೂಕ್ತ ಸಲಹೆ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ರಾಜ್ಯದ ಉನ್ನತ ಶಿಕ್ಷಣ ನೋಂದಣಿ ಸರಾಸರಿ ಶೇಕಡ ೩೬ ರಷ್ಟಿದೆ. ನೆರೆಯ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಶೇಕಡ ೨೫ ರಿಂದ ೩೦ ರಷ್ಟಿದೆ. ನೆರೆಯ ತಮಿಳುನಾಡು ರಾಜ್ಯದಲ್ಲಿ ಇದು ಶೇ. ೫೫ ರಿಂದ ೬೦ ರಷ್ಟಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಾತ್ರ ಉನ್ನತ ಶಿಕ್ಷಣದ ವಾರ್ಷಿಕ ನೋಂದಣಿ ಅನುಪಾತ ಪ್ರಸಕ್ತ ಶೇಕಡ ೧೬ ರಷ್ಟು ಮಾತ್ರ ಇರುವುದು ಬಹು ಕಳವಳಪಡಬೇಕಾದ ವಿಚಾರವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಕೊಡಗು ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಕೌಶಲಾಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕೌಶಲ್ಯಾಧಾರಿತ ತರಬೇತಿ ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ವಿದ್ಯಾರ್ಥಿಗಳನ್ನು ಔದ್ಯೋಗಿಕ ಕ್ಷೇತ್ರಗಳಿಗೆ ಅಣಿಗೊಳಿಸಲು ಮೂಲ ಕೋರ್ಸ್ಗಳ ಜೊತೆಗೆ ಪ್ರತಿಷ್ಠಿತ ಸಂಸ್ಥೆಗಳೊAದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಹೆಚ್ಚಳ ಮಾಡುವ ಕಾಯಕದಲ್ಲಿ ತೊಡಗಿದೆ, ಕೊಡಗು ವಿಶ್ವವಿದ್ಯಾಲಯ ಸುಮಾರು ೧೦೦ ಎಕರೆ ಪ್ರದೇಶದಲ್ಲಿ ಆಡಳಿತ ಸೌಧ, ಶೈಕ್ಷಣಿಕ ಕೊಠಡಿಗಳ ಸಂಕೀರ್ಣ, ಅತ್ಯಾಧುನಿಕ ಪ್ರಯೋಗಾಲಯ ಕಂಪ್ಯೂಟರ್ ಸೆಂಟರ್, ವಿದ್ಯಾರ್ಥಿ ನಿಲಯಗಳು, ಅತಿಥಿ ಗೃಹ ಮೊದಲಾದ ಮೂಲಭೂತ ಸೌಲಭ್ಯಗಳನ್ನು ಹೊಂದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಎಂಬಿಎ ಮತ್ತು ಎಂಸಿಎ ಕೋರ್ಸ್ಗಳನ್ನು ಮುಂದಿನ ಸಾಲಿನಿಂದ ಆರಂಭಿಸಲು ಕೇಂದ್ರದಿAದ ಅನುಮತಿ ಕೂಡ ಪಡೆಯಲಾಗಿದೆ.
ಈ ಸಂದರ್ಭ ಕೊಡಗು ವಿಶ್ವವಿದ್ಯಾಲಯವನ್ನು ರದ್ದುಗೊಳಿಸಿ ಇತರ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸುವ ಸರ್ಕಾರದ ಚಿಂತನೆ ತಕ್ಷಣ ಕೈಬಿಡಬೇಕಾಗಿದೆ ಎಂದು ಮನವಿ ಮಾಡಿದರು.
ಈ ಸಂಬAಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗದ ಮೂಲಕ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಮನವಿಯಲ್ಲಿ ಕೋರಿದ್ದಾರೆ.
ಮನವಿಗೆ ಸ್ಪಂದಿಸಿದ ಆಯೋಗದ ಸದಸ್ಯೆ ವಿಜಯ ಭಾರತಿ ಸಯಾನಿ ಅವರು ಈ ಸಂಬAಧ ಕೊಡಗು ವಿಶ್ವವಿದ್ಯಾಲಯದ ಸಮಗ್ರ ಪ್ರಗತಿ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಈ ನಿಟ್ಟಿನಲ್ಲಿ ಆಯೋಗ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತದೆ. ವಿಶ್ವವಿದ್ಯಾಲಯ ಉಳಿಸಿ ಅಭಿವೃದ್ಧಿಗೊಳಿಸುವಂತೆ ಸರಕಾರಗಳಿಗೆ ಸೂಚನೆ ನೀಡುವ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಮನವಿ ಸಲ್ಲಿಸಿದ ತಂಡದಲ್ಲಿ ಕೊಡಗು ವಿವಿ ಹಿತರಕ್ಷಣಾ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಕುಶಾಲನಗರ ಗೌಡ ಸಮಾಜ, ಕಾವೇರಿ ಮೀಡಿಯಾ ನೆಟ್ವರ್ಕ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್, ರಾಷ್ಟಿçÃಯ ಮಕ್ಕಳ ಸಾಹಿತ್ಯ ವೇದಿಕೆ, ಕುಶಾಲನಗರ ತಾಲೂಕು ಸೌಂದರ್ಯ ತಜ್ಞರ ವೇದಿಕೆ, ನಮಾಮಿ ಕಾವೇರಿ ಆರತಿ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖರು ಸೇರಿದಂತೆ ವಿವಿ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು. ಇದೇ ಸಂದರ್ಭ ವಿವಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೊಡಗು ಮೈಸೂರು ಕ್ಷೇತ್ರದ ಸಂಸತ್ ಸದಸ್ಯರಾದ ಯದುವೀರ್ ಒಡೆಯರ್ ಅವರೊಂದಿಗೆ ವಿವಿ ಉಳಿಸಿ ಅಭಿವೃದ್ಧಿಗೊಳಿಸುವ ಬಗ್ಗೆ ಸಂಘಟನೆಗಳ ಪ್ರಮುಖರು ಚರ್ಚಿಸಿದರು.