ನಾಪೋಕ್ಲು, ಮಾ. ೧೭: ಸ್ಥಳೀಯ ಪೊಲೀಸ್ ಠಾಣಾ ಆವರಣದಲ್ಲಿ ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆಯನ್ನು ನಡೆಸಲಾಯಿತು.
ಮಡಿಕೇರಿ ಉಪ ವಿಭಾಗದ ಡಿ.ಎಸ್.ಪಿ. ಸೂರಜ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಠಾಣಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಅಪ್ರಾಪ್ತ ಬಾಲಕರ ವಾಹನ ಚಾಲನೆ, ಕುಡಿದು ವಾಹನ ಚಾಲನೆ, ಕಾಫಿ ಖರೀದಿದಾರರಿಗೆ ಸೂಚನೆಗಳು, ಅಕ್ರಮ ಮದ್ಯ ಮಾರಾಟ, ಮಾದಕ ವಸ್ತು ಮಾರಾಟ, ಸೇವನೆ ಬಗ್ಗೆ ಮುಂತಾದ ಅಂಶಗಳ ಬಗ್ಗೆ ಅರಿವು ಮೂಡಿಸಿ ಮಾಹಿತಿ ಪಡೆದುಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ನಾಪೋಕ್ಲು ಪೊಲೀಸ್ ಠಾಣೆಗೆ ಒಳಪಟ್ಟ ಅಂಗಡಿ ಮಾಲೀಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.