ಸಿದ್ದಾಪುರ, ಮಾ ೧೮ : ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ಸಿದ್ದಾಪುರದ ಸಿಪಿಐಎಂ ಪಕ್ಷದ ಮುಖಂಡ ಎನ್.ಡಿ. ಕುಟ್ಟಪ್ಪ ನೇತೃತ್ವದಲ್ಲಿ ಸಿದ್ದಾಪುರದ ಚೆಸ್ಕಾಂ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.
ಕುಟ್ಟಪ್ಪ ಮಾತನಾಡಿ ಸಿದ್ದಾಪುರ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ವಿದ್ಯುತ್ ಸಮಸ್ಯೆ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಚೆಸ್ಕಾಂ ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು. ಸಿದ್ದಾಪುರ ಗ್ರಾಮ ಸಮಿತಿಯ ಸಿಪಿಐಎಂ ಪಕ್ಷದ ಪ್ರಮುಖರಾದ ವೈಜೂ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ವಿದ್ಯುತ್ ಸಮಸ್ಯೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಶಾಸಕರು ಹಾಗೂ ಮೇಲಾಧಿಕಾರಿಗಳು ಸಮಸ್ಯೆಗೆ ಸ್ಪಂದಿಸಬೇಕೆAದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಪದಾಧಿಕಾರಿಗಳಾದ ಅನಿಲ್ ಕುಟ್ಟಪ್ಪ. ಮುಸ್ತಫ. ತಂಗಚ್ಚನ್. ಹಂಸ ಉಸ್ತಾದ್. ಇನ್ನಿತರರು ಹಾಜರಿದ್ದರು. ಚೆಸ್ಕಾಂ ಅಧಿಕಾರಿಗೆ ಮನವಿ ಪತ್ರ ನೀಡಲಾಯಿತು.