ಸಿದ್ದಾಪುರ, ಮಾ. ೨೧: ತಿತಿಮತಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಪಾಲಿಬೆಟ್ಟ ಚೆನ್ನಯ್ಯನ ಕೋಟೆ, ಮಾಲ್ದಾರೆ ಗ್ರಾಮಗಳ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಂಧಲೆ ನಡೆಸುತ್ತಾ ಕೃಷಿ ಫÀಸಲುಗಳನ್ನು ನಾಶಗೊಳಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯು ತಾ.೨೨ ರಂದು (ಇಂದು) ಬೆಳಗಿನಿಂದ ಹಮ್ಮಿಕೊಳ್ಳಲಾಗಿದೆ. ಈ ವ್ಯಾಪ್ತಿಯ ಕಾಫಿ ತೋಟದ ಮಾಲೀಕರು ಹಾಗೂ ಕಾರ್ಮಿಕರು, ಸಾರ್ವಜನಿಕರು, ಶಾಲೆ-ಕಾಲೇಜು ಮಕ್ಕಳು ಎಚ್ಚರಿಕೆ ವಹಿಸಬೇಕೆಂದು ಹಾಗೂ ಕಾರ್ಯಾಚರಣೆಗೆ ಸಹಕರಿಸಬೇಕೆಂದು ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಕೋರಿದ್ದಾರೆ.