ಮಡಿಕೇರಿ, ಮಾ. ೨೧: ಎಂಡಿಎAಎ ಮಾರಾಟ ಹಾಗೂ ಸರಬರಾಜಿಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ಎಮ್ಮೆಮಾಡು ಗ್ರಾಮದ ನಿವಾಸಿಗಳಾದ ಎಂ.ಹೆಚ್. ಸಾದಿಕ್ (೩೦), ಕೆ.ಎಂ. ಅಶ್ರಫ್ (೪೪), ಸರ್ಫುದ್ದೀನ್ (೨೪) ಬಂಧಿತ ಆರೋಪಿಗಳು. ಇವರಿಂದ ೧೦.೩೭ ಗ್ರಾಂ ಎಂಡಿಎAಎ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿ ಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಎಮ್ಮೆಮಾಡು ಗ್ರಾಮದ ಕೂರುಳಿ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ, ಸರಬರಾಜು ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಮಾದಕವಸ್ತು ಬಳಕೆ, ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನಿರ್ದೇಶನದಂತೆ ಡಿವೈಎಸ್‌ಪಿ ಪಿ.ಎ. ಸೂರಜ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಪಿಎಸ್‌ಐ ಮಂಜುನಾಥ್ ನೇತೃತ್ವದ ತನಿಖಾ ತಂಡ ದಾಳಿ ನಡೆಸಿ ಮಾಲುಸಹಿತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.