ಮುಳ್ಳೂರು, ಮಾ. ೨೨: ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿದರೆ ಸಮಾಜದಲ್ಲಿ ಪ್ರತಿಯೊಬ್ಬರು ಆರೋಗ್ಯಕರ ಜೀವನ ಸಾಗಿಸಲು ಸಾಧ್ಯವಾಗುತ್ತದೆ ಎಂದು ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶೋಕ್ ಕುಮಾರ್ ಅಭಿಪ್ರಾಯಪಟ್ಟರು.

ಅವರು ಸಮೀಪದ ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಕಿತ್ತೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದಲ್ಲಿ ‘ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಯುವಜನರ ಪಾತ್ರ’ ವಿಷಯದ ಕುರಿತು ಮಾಹಿತಿ ನೀಡಿದರು.

ಪ್ರಸ್ತುತ ಸಮಾಜದಲ್ಲಿ ಆರೋಗ್ಯ ಮತ್ತು ನೈರ್ಮಲ್ಯವನ್ನು ಕಾಪಾಡುವಲ್ಲಿ ಯುವ ಸಮೂಹದ ಪಾತ್ರ ಮಹತ್ವದಾಗಿರುತ್ತದೆ. ವಿದ್ಯಾವಂತ ಯುವ ಸಮೂಹ ಸ್ವಚ್ಛತೆ, ನೈರ್ಮಲ್ಯ ಹಾಗೂ ಆರೋಗ್ಯದ ಮಹತ್ವದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದರಿಂದ ಆರೋಗ್ಯ, ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಮಾಜದಲ್ಲಿ ಪ್ರತಿಯೊಬ್ಬ ಸ್ವಚ್ಛತೆ, ನೈರ್ಮಲ್ಯದತ್ತ ಗಮನ ಹರಿಸಿದರೆ ಮಾತ್ರ ಸಮಾಜದಲ್ಲಿ ಆರೋಗ್ಯಕರ ಜೀವನ ನಡೆಸಬಹುದು.

ಈ ನಿಟ್ಟಿನಲ್ಲಿ ಯುವಕರು ಇವುಗಳ ಬಗ್ಗೆ ಅರಿವು ಹೊಂದಿ ಸಮಾಜವನ್ನು ಜಾಗೃತಿಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಇ.ಎಂ. ದಯಾನಂದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಬಿ.ಸಿ. ರೇಖಾ, ಉಪನ್ಯಾಸಕರಾದ ಮೋಹನ್‌ಕುಮಾರ್, ಪೊನ್ನಪ್ಪ, ಶೋಭಾ, ಶಾಲಾ ಶಿಕ್ಷಕಿ ವಿಶಾಲಾಕ್ಷಿ, ರಾ.ಸೇ. ಯೋಜನಾಧಿಕಾರಿ ಎಂ.ಎನ್. ಹರೀಶ್ ಮುಂತಾದವರು ಹಾಜರಿದ್ದರು.