ಮಡಿಕೇರಿ ಮಾ.೨೨ : ಮುದ್ದಂಡ ಕಪ್ ಹಾಕಿ ಉತ್ಸವದ ಕ್ರೀಡಾಜ್ಯೋತಿ ತಾ.೨೫ರಂದು ಕೊಡವ ಹಾಕಿ ಹಬ್ಬದÀ ಜನಕರಾದ ಕರಡ ಗ್ರಾಮದ ಪಾಂಡAಡ ಕುಟುಂಬದ ಐನ್ಮನೆಯಲ್ಲಿ ಉದ್ಘಾಟನೆಗೊಳ್ಳಲಿದೆ.
ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದÀ ಜನಕ ದಿ. ಪಾಂಡAಡ ಕುಟ್ಟಪ್ಪ ಅವರ ಪತ್ನಿ ಲೀಲಾ ಕುಟ್ಟಪ್ಪ ಅವರು ಉದ್ಘಾಟಿಸಲಿದ್ದಾರೆ.
೧೯೯೭ರಿಂದ ಇಲ್ಲಿಯವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ತಾ.೨೮ರಂದು ಬೆಳಿಗ್ಗೆ ೯ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಬೃಹತ್ ಮೆರವಣಿಗೆಯ ಮೂಲಕ ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ)
ಕ್ರೀಡಾಜ್ಯೋತಿ ಮಾರ್ಗ : ತಾ. ೨೫ ರಂದು ಕರಡ ಪಾಂಡAಡ, ಕಿರುಗೂರು ಚೆಪ್ಪುಡಿರ, ಅಳಮೇಂಗಡ, ಟಿ.ಶೆಟ್ಟಿಗೇರಿ- ಒಂಟಿಯAಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ, ಕುಂದ ಮನೆಯಪಂಡ, ನಾಂಗಾಲ ಕುಪ್ಪಂಡ, ಮಾ.೨೬ರಂದು ವೀರಾಜಪೇಟೆ ಕಾವಾಡಿ ನೆಲ್ಲಮಕ್ಕಡ, ಚೆಂಬೆಬೆಳ್ಳೂರು ಈಶ್ವರ ದೇವಾಲಯ, ಮಂಡೇಪAಡ, ಕುಕ್ಲೂರು ತಾತಂಡ, ವೀರಾಜಪೇಟೆ ಕೊಡವ ಸಮಾಜ, ಅರಮೇರಿ ಮುದ್ದಂಡ, ಐಚೆಟ್ಟಿರ, ಕಾಕೋಟುಪರಂಬು ಮಂಡೇಟಿರ, ಬಲ್ಲಚಂಡ, ಕರಡ ಕೋಡಿರ, ಬಾವಲಿ ಬಿದ್ದಂಡ, ತಾ.೨೭ ರಂದು ಬಾವಲಿ ಮಾದಂಡ, ಕಲಿಯಂಡ, ನೆಲ್ಜಿ ಮಾಳೆಯಂಡ, ಅಪ್ಪಚೆಟ್ಟೋಳಂಡ, ನಾಪೋಕ್ಲು ಕುಲ್ಲೇಟಿರ, ಬಿದ್ದಾಟಂಡ, ಕೊಳಕೇರಿ ಕುಂಡ್ಯೋಳAಡ, ಮಡಿಕೇರಿ ಶಾಂತೆಯAಡ ಮತ್ತು ತಾ.೨೮ರಂದು ಜನರಲ್ ತಿಮ್ಮಯ್ಯ ವೃತ್ತ, ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ.