ಮಡಿಕೇರಿ,ಮಾ. ೨೨: ಕುಶಾಲನಗರ-ಸಂಪಾಜೆ ರಾಷ್ಟಿçÃಯ ಹೆದ್ದಾರಿ ೨೭೫ ಬದಿಯಲ್ಲಿ ತಲೆಎತ್ತಿದ್ದ ಅಂಗಡಿ ಮಳಿಗೆಗಳ ವಿರುದ್ಧ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಸುಂಟಿಕೊಪ್ಪದಿAದ ಸಂಪಾಜೆವರೆಗೆ ತೆರಳುವ ಹೆದ್ದಾರಿಯ ತಿರುವು ರಸ್ತೆ ಬದಿಯಲ್ಲೇ ಹಣ್ಣಿನ ಮಳಿಗೆಗಳು, ಕ್ಯಾಂಟೀನ್, ಕಬ್ಬು ಜ್ಯೂಸ್ ಅಂಗಡಿಗಳನ್ನು ಇಡಲಾಗಿದ್ದು, ಈಗಾಗಲೇ ಇಂತಹ ಕಡೆಗಳಲ್ಲಿ ಅಳವಡಿಸಲಾಗಿದ್ದ ಬೃಹತ್ ಜಾಹೀರಾತು ಫಲಕಗಳನ್ನು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ತೆರವು ಮಾಡಿದ್ದು, ಇದೀಗ ರಸ್ತೆ ಬದಿಯ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಿದೆ. ತಿರುವು ರಸ್ತೆಗಳ ಬದಿಯಲ್ಲಿ ಅಂಗಡಿಗಳನ್ನು ಹಾಕಿರುವ ವ್ಯಕ್ತಿಗಳಿಗೆ ನೋಟೀಸ್ ಕೂಡ ನೀಡಲಾಗಿದ್ದು, ಬೇರೆಡೆಗಳಲ್ಲಿ ವ್ಯಾಪಾರ ವಹಿವಾಟು ನಡೆಸುವಂತೆ ಸೂಚಿಸಲಾಗಿದೆ.

ಅಧಿಕಾರಿಗಳಿಂದ ಪರಿಶೀಲನೆ

ಸಾರ್ವಜನಿಕರ ದೂರುಗಳನ್ನು ಆಧರಿಸಿ ಹೆದ್ದಾರಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಕೆಲವು ಅಂಗಡಿ ಮಳಿಗೆಗಳನ್ನು ಬಂದ್ ಮಾಡಿಸಿದರು. ಹೈವೇ ಪ್ರಾಧಿಕಾರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವುದನ್ನು ಅರಿತ ಕೆಲವು ವರ್ತಕರು ಅಂಗಡಿ ಮಳಿಗೆಗಳನ್ನು ಖಾಲಿ ಮಾಡಿದ್ದರೆ, ಮತ್ತೆ ಕೆಲವರು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿ ತೆರಳಿರುವುದು ಕಂಡುಬAತು. ಇನ್ನು ಕೆಲವು ವರ್ತಕರು ಹೈವೇ ಅಧಿಕಾರಗಳ ಜೊತೆಯಲ್ಲಿ ನಾವು ಯಾವುದೇ ತಪ್ಪು ಮಾಡುತ್ತಿಲ್ಲ. ರಸ್ತೆ ಬದಿಯಲ್ಲಿ ತೊಂದರೆ ಆಗದಂತೆ ವ್ಯಾಪಾರ ನಡೆಸುತ್ತಿದ್ದೇವೆ. ಕೇವಲ ನಮ್ಮ ಅಂಗಡಿಯನ್ನು ಮಾತ್ರವೇ ಟಾರ್ಗೆಟ್ ಮಾಡಲಾಗುತ್ತಿದೆ. ಸಾಧ್ಯವಾದರೆ ಹೆದ್ದಾರಿ ಬದಿಯಲ್ಲಿರುವ ಎಲ್ಲಾ ಅಂಗಡಿಗಳನ್ನು ತೆರವು ಗೊಳಿಸಬೇಕು ಎಂದು ಸಲಹೆ ನೀಡುತ್ತಿದ್ದುದು ಕಂಡುಬAತು.

ನಿರAತರ ಕಾರ್ಯಾಚರಣೆ

ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಗಿರೀಶ್ ಮಾತನಾಡಿ, ಸುಂಟಿಕೊಪ್ಪದಿAದ ಸಂಪಾಜೆವರೆಗಿನ ಹೆದ್ದಾರಿ ತೀರಾ ಕಡಿದಾದ ತಿರುವುಗಳಿಂದ ಕೂಡಿದೆ. ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮಡಿಕೇರಿ ಕಡೆಗೆ ಆಗಮಿಸುತ್ತಾರೆ. ಇಂತಹ ತಿರುವು ರಸ್ತೆ ಬದಿಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಮಳಿಗೆಗಳನ್ನು ತೆರೆದು ವ್ಯಾಪಾರ ನಡೆಸಲಾಗುತ್ತಿದ್ದು, ಹಲವು ಅಪಘಾತ ಗಳು ಕೂಡ ನಡೆದಿದೆ. ಈ ಬಗ್ಗೆ ಸಾರ್ವಜನಿಕರಿಂದ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ದೂರುಗಳು ಕೇಳಿ ಬರುತ್ತಿದ್ದು, ಹೈವೇ ಪ್ರಾಧಿಕಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು. ಕೆಆರ್‌ಡಿಸಿಎಲ್ ನಿಯಮದಂತೆ ರಸ್ತೆ ಮಧ್ಯದಿಂದ ೧೨ ಮೀಟರ್ ಒಳಗೆ ಯಾವುದೇ ಶೆಡ್ ಹಾಕುವಂತಿಲ್ಲ ಎಂಬ ನಿಯಮವಿದೆ. ಈ ನಿಯಮ ಪಾಲಿಸದಿರುವುದು ಕಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮ ಜರುಗಿಸಲು ಸಿದ್ದತೆ ನಡೆಸಲಾಗಿದೆ ಎಂದು ಹೇಳಿದರು. ಈ ಸಂದರ್ಭ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಇಂಜಿನಿಯರ್ ಹನುಮಂತು, ಮಡಿಕೇರಿ ಗ್ರಾಮಾಂತರ ಠಾಣಾ ಸಿಬ್ಬಂದಿ ಮಹೇಶ್ ಹಾಜರಿದ್ದರು.