ಮಡಿಕೇರಿ, ಮಾ. ೨೩: ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಎಸ್‌ಸಿ ಮೋರ್ಚಾ ವತಿಯಿಂದ ಏ.೧೩ ರಂದು ನಗರದಲ್ಲಿ ಸಾರ್ವಜನಿಕರಿಗಾಗಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ರಾಷ್ಟಿçÃಯ ವಿಚಾರಗಳ ಪುಸ್ತಕ ಮೇಳ, ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷÀ ಪಿ.ಎಂ.ರವಿ ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಕ ಕಾಲಕ್ಕೆ ಈ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸಮಾಜದ ಎಲ್ಲಾ ಸ್ತರಗಳ ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಇಂದಿಗೂ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರದ ಯೋಜನೆಗಳ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ನೀಡಲಾಗುವುದು.
ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಮಾಹಿತಿ ಕಾರ್ಯಾಗಾರದ ಸಭಾ ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಪಕ್ಷದ ಮುಖಂಡರಾದ ಚಲವಾದಿ ನಾರಾಯಣ ಸ್ವಾಮಿ, ಸಿ.ಟಿ.ರವಿ, ಜಿಲ್ಲೆಯ ಮಾಜಿ ಶಾಸಕರು, ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮಕ್ಕಳ ಪ್ರಬಂಧ ಸ್ಪರ್ಧೆ ಅಂದು ಬೆಳಿಗ್ಗೆ ೧೦ ಗಂಟೆಗೆ ಆರಂಭಗೊಳ್ಳಲಿದೆ.ಇದರಲ್ಲಿ ೫ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ವಿಷಯದ ಕುರಿತು, ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ವಿಷಯದ ಮೇಲೆ, ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಟಲ್ ಬಿಹಾರಿ ವಾಜಪೇಯಿಯವರ ಕುರಿತು ಹಾಗೂ ಪದವೀಧರ ವಿದ್ಯಾರ್ಥಿಗಳಿಗೆ ರಾಷ್ಟç ನಿರ್ಮಾಣದಲ್ಲಿ ಯುವ ಜನರ ಪಾತ್ರ' ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ. ಆಸಕ್ತರು ಏ.೧೦ ರ ಒಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಮೊ.೯೯೭೨೦೭೩೨೯೫ ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಅಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಸಂದರ್ಭ ಉಚಿತವಾಗಿ ಔಷಧಿಗಳನ್ನು ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪಿ.ಎಂ. ರವಿ ಹೇಳಿದರು. ಈ ಎಲ್ಲಾ ಕಾರ್ಯಕ್ರಮಗಳ ಜೊತೆಯಲ್ಲೆ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ರಾಷ್ಟಿçÃಯ ವಿಚಾರಗಳ ಪುಸ್ತಕ ಮೇಳವೂ ನಡೆಯಲಿದೆ ಎಂದರು.
ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾದ ಉಪಾಧ್ಯಕ್ಷ ಕೆ.ಕೆ.ದೇವಪ್ಪ ಕೊಯನಾಡು, ಪ್ರಧಾನ ಕಾರ್ಯದರ್ಶಿ ಪಿ.ಕೆ.ಚಂದ್ರು, ಮಡಿಕೇರಿ ನಗರ ಮಂಡಲದ ಅಧ್ಯಕ್ಷ ಮುಕುಂದ ಹೆಚ್.ಜಿ., ಮಡಿಕೇರಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಈರ ಸುಬ್ಬಯ್ಯ ಉಪಸ್ಥಿತರಿದ್ದರು.