ಪೊನ್ನಂಪೇಟೆ, ಮಾ. ೨೩: ಏಡ್ಸ್ ರೋಗವನ್ನು ತಡೆಗಟ್ಟುವಲ್ಲಿ ಯುವಕ ಯುವತಿಯರ ಪಾತ್ರ ಅತ್ಯಂತ ಮಹತ್ವ ವಾದದ್ದು ಎಂದು ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಎನ್. ಸಿ. ಚಂದ್ರಶೇಖರ್ ಹೇಳಿದರು.
ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ಹಾಗೂ ಎನ್ ಎಸ್ ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಏಡ್ಸ್ ಮತ್ತು ಕ್ಷಯರೋಗದ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಏಡ್ಸ್ ಹರಡುವ ವಿಧಾನ, ಏಡ್ಸ್ ರೋಗದ ಲಕ್ಷಣಗಳು, ಅದರಿಂದಾಗುವ ಪರಿಣಾಮಗಳು ಹಾಗೂ ಏಡ್ಸ್ ರೋಗವನ್ನು ತಡೆಗಟ್ಟುವಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕ್ಷಯರೋಗ ಹರಡುವ ವಿಧಾನ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭ ಏಡ್ಸ್ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಏರ್ಪಡಿಸಲಾಗಿದ್ದ ಪ್ರಬಂಧ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಬಂಧ ಸ್ಪರ್ಧೆಯಲ್ಲಿ ಸುಶ್ಮಿತ ಕೆ.ಎ. ಪ್ರಥಮ, ಕಾವೇರಮ್ಮ ಎಂ. ಕೆ. ದ್ವಿತೀಯ, ಯಕ್ಷಿತ ಪಿ. ವೈ. ತೃತೀಯ, ಪೋಸ್ಟರ್ ಮೇಕಿಂಗ್, ಪೋಸ್ಟಲ್ ಮೇಕಿಂಗ್ ಸ್ಪರ್ಧೆಯಲ್ಲಿ ತನುಷ ಪ್ರಥಮ, ಮೋಕ್ಷಿತ ಎಂ. ಬಿ. ದ್ವಿತೀಯ, ನಿತ್ಯ ತೃತೀಯ ಸ್ಥಾನ ಪಡೆದುಕೊಂಡರು.
ಪ್ರಾAಶುಪಾಲ ಡಾ. ಎಂ. ಬಿ. ಕಾವೇರಿಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಉಪ ಪ್ರಾಂಶುಪಾಲೆ ಪ್ರೊ. ಎಂ. ಎಸ್. ಭಾರತಿ, ಎನ್ ಎಸ್ ಎಸ್ ಅಧಿಕಾರಿಗಳಾದ ಎನ್. ಪಿ. ರೀತಾ, ಎಂ. ಎ. ಕುಶಾಲಪ್ಪ, ಪೂಜಾ, ಎನ್ ಎಸ್ ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.