ಸಿದ್ದಾಪುರ, ಮಾ. ೨೩: ಸಿದ್ದಾಪುರ-ವೀರಾಜಪೇಟೆ ರಸ್ತೆ ಕಾಮಗಾರಿ ವಿಳಂಬದ ಬಗ್ಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸ್ಥಳ ಪರಿಶೀಲಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು.
ಸಿದ್ದಾಪುರದ-ವೀರಾಜಪೇಟೆ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಮಗಾರಿ ತಡವಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಸ್ಥಳಕ್ಕೆ ಗುತ್ತಿಗೆದಾರ ಕೃಷ್ಣರಾಜ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಲಿಂಗರಾಜು ಮತ್ತು ವಿದ್ಯುತ್ ಇಲಾಖೆಯ ಎ.ಇ.ಇ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚಿಸಿದರು.
ಈ ಸಂದರ್ಭ ಮಾತನಾಡಿದ ಸ್ಥಳೀಯರಾದ ಹೆಚ್.ಬಿ. ರಮೇಶ್, ಕಾಮಗಾರಿ ಕಳೆದ ಮೂರು ತಿಂಗಳಿನಿAದ ನಡೆಯುತ್ತಿದ್ದು, ಕಾಮಗಾರಿ ವಿಳಂಬವಾಗುತ್ತಿದೆ. ಧೂಳಿನಿಂದ ವಿದ್ಯಾರ್ಥಿಗಳು ಸೇರಿದಂತೆ ಸ್ಥಳೀಯರಿಗೆ ತೀವ್ರ ತೊಂದರೆಯಾಗಿದೆ. ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದರು.
ವಿ.ಕೆ. ಗಿರೀಶ್ ಮಾತನಾಡಿ, ಚರಂಡಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಶಾಲೆ, ಆಸ್ಪತ್ರೆ ಸೇರಿದಂತೆ ವರ್ತಕರಿಗೂ ತೀವ್ರ ಸಮಸ್ಯೆಯಾಗಿದೆ. ಕಳೆದ ಒಂದು ತಿಂಗಳಿನಿAದ ಕಾಮಗಾರಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸ ಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಗುತ್ತಿಗೆದಾರ ಕೆಲವು ತಾಂತ್ರಿಕ ಸಮಸ್ಯೆಯಿಂದ ಕಾಮಗಾರಿ ತಡವಾಗಿದೆ. ಒಂದು ತಿಂಗಳ ಒಳಗೆ ಕಾಮಗಾರಿಯನ್ನು ಗುಣಮಟ್ಟದಲ್ಲಿ ನಿರ್ಮಿಸಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಸ್ಥಳೀಯರು ಮಾತನಾಡಿ, ಕಾಮಗಾರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಮನವಿ ಮಾಡಿದರು. ಈ ಸಂದರ್ಭ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಜಾನ್ಸನ್, ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಕಾಂಗ್ರೆಸ್ ಮುಖಂಡರಾದ ಎಂ. ವಿಜಯ್, ಬಶೀರ್, ಸ್ಥಳೀಯರಾದ ರಿಯಾಜ್, ಮ್ಯಾಥ್ಯು, ರೆಜಿತ್, ಅಜೀಜ್ ಇನ್ನಿತರರು ಹಾಜರಿದ್ದರು.