ಮಡಿಕೇರಿ, ಮಾ. ೨೩: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ೨೦೨೪ ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು ಏಪ್ರಿಲ್ ೫ ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ. ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ.

ವರದಿಗಳು ೨೦೨೪ ರ ಜನವರಿಯಿಂದ ೨೦೨೪ ಡಿಸೆಂಬರ್ ೩೧ ರೊಳಗೆ ಪ್ರಕಟವಾಗಿರಬೇಕು. ಪ್ರಶಸ್ತಿಗೆ ವರದಿ ಹಾಕುವವರು ಮೂರು ಪ್ರತಿಗಳನ್ನು ತಪ್ಪದೇ ಹಾಕಬೇಕು. ದೃಶ್ಯ ಮಾಧ್ಯಮದವರು ತಮ್ಮ ಚಾನಲ್‌ಗಳಲ್ಲಿ ಪ್ರಸಾರವಾದ ವರದಿಯ ಸಿಡಿಯನ್ನು ಸಲ್ಲಿಸಬೇಕು.

೧. ಪಂದ್ಯAಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ. ೨. ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ. ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ. ೩. ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್. ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿ. ೪. ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ. ೫. ಕೋವರ್‌ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿ. ೬. ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿದ ಅರಣ್ಯ ವನ್ಯಜೀವಿ ಪ್ರಶಸ್ತಿ ವರದಿ. ೭. ಬೆಳೆಗಾರ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ-ತಾಯಿ ಅಜ್ಜಮಾಡ ಸುಬ್ಬಯ್ಯ ಹಾಗೂ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ವರದಿ ಪ್ರಶಸ್ತಿ. ೮. ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಅಜ್ಜ ಕೋಟೇರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ. ೯. ಕೈಬುಲಿರ ಪಾರ್ವತಿ ಬೋಪಯ್ಯ ತಮ್ಮ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿ. ೧೦. ಎಸ್.ಎ. ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿ. ೧೧. ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಮಂದ್ರಿರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿ. ೧೨. ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ. ಅನಂತಶಯನ ತಮ್ಮ ಹೋಂಸ್ಟೇ ಆಲ್ಪೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಸುದ್ದಿ ಛಾಯಾಚಿತ್ರ ವರದಿ ಪ್ರಶಸ್ತಿ. ೧೩. ಸ್ವಸ್ಥ ಸಂಸ್ಥೆ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿ. ೧೪. ಜಿ.ಪಂ. ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ತಮ್ಮ ತಾಯಿ ಬಲ್ಲಾರಂಡ ಮಾಚಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ರಾಜಕೀಯ ವರದಿ ಪ್ರಶಸ್ತಿ. ೧೫. ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿ. ೧೬. ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ಮಂಡಿಬೆಲೆ ದ್ಯಾವಮ್ಮ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿ(ಟಿವಿ ಚಾನಲ್ ವರದಿಗೆ). ೧೭. ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬAಧಿಸಿದ ದೃಶ್ಯ ಮಾಧ್ಯಮದ ವರದಿ ಪ್ರಶಸ್ತಿ. (ಟಿವಿ ಚಾನಲ್ ವರದಿಗೆ). ೧೮. ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿ. ಟಿ.ಕೆ. ಸುಬ್ರಮಣ್ಯಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ. ೧೯. ದಿವಂಗತ ಸಣ್ಣುವಂಡ ಎಂ ಶ್ರೀನಿವಾಸ್ ಚಂಗಪ್ಪ ಅವರ ಹೆಸರಿನಲ್ಲಿ ಕೊಡಗಿನ ಪತ್ರಕರ್ತರು ಸ್ಥಾಪಿಸಿರುವ ಸೇನೆಗೆ ಸಂಬAಧಿಸಿದ ವರದಿ ಪ್ರಶಸ್ತಿ. ೨೦. ಇಂದಿರಾ ಸತ್ಯನಾರಾಯಣ ಅವರು ತಮ್ಮ ತಂದೆ ಹೆಸರಾಂತ ಸಾಹಿತಿ ದಿವಂಗತ ಡಿ.ಎನ್. ಕೃಷ್ಣಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸಾಂಸ್ಕೃತಿಕ ವರದಿ ಪ್ರಶಸ್ತಿ.

ಸೂಚನೆ: ಒಂದು ಪ್ರಶಸ್ತಿಗೆ ಕೇವಲ ಒಂದು ವರದಿಯನ್ನು ಮಾತ್ರ ಕಳುಹಿಸತಕ್ಕದ್ದು. ಒಂದಕ್ಕಿAತ ಹೆಚ್ಚು ವರದಿಗಳನ್ನು ಸಲ್ಲಿಸಿದರೆ ಅಂತಹ ಸದಸ್ಯರ ವರದಿಗಳನ್ನು ಪರಿಗಣನೆ ಮಾಡಲಾಗುವುದಿಲ್ಲ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.