ಮಡಿಕೇರಿ, ಏ. ೨: ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯ, ಪದ್ಧತಿ-ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಮುನ್ನಡೆಯುತ್ತಿರುವ ೨೧ ಕೊಡವ ಭಾಷಿಕ ಸಮುದಾಯಗಳ ಕೂಟದ ಮಹಾಸಭೆ ತಾ. ೬ರಂದು ಬೆಳಿಗ್ಗೆ ೧೦ ಗಂಟೆಗೆ ಕೈಕೇರಿ ಸವಿತಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.

ಸಭಾಧ್ಯಕ್ಷತೆಯನ್ನು ಕೂಟದ ಅಧ್ಯಕ್ಷ ಡಾ. ಮೇಚಿರ ಸುಭಾಷ್ ನಾಣಯ್ಯ ಅವರು ವಹಿಸಲಿದ್ದು, ಜನಾಂಗದ ನೋಂದಾಯಿತ ಸದಸ್ಯರುಗಳು ಸಭೆಗೆ ಆಗಮಿಸಿ ಸಹಕರಿಸುವಂತೆ ಕೂಟದ ಗೌರವ ಕಾರ್ಯದರ್ಶಿ ಕೂಡಂಡ ಸಾಬ ಸುಬ್ರಮಣಿ ತಿಳಿಸಿದ್ದಾರೆ.